ಆಸ್ಕರ್ ಫೆರ್ನಾಂಡೀಸ್ ಶೀಘ್ರ ಚೇತರಿಕೆಗೆ ಹಾರೈಸಿ ಕಾಪು ತಾಲೂಕಿನಲ್ಲಿ ಪ್ರಾರ್ಥನೆ
Team Udayavani, Jul 23, 2021, 1:15 PM IST
ಕಾಪು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಜು. 23 ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಆಸ್ಕರ್ ಅವರು ಎಲ್ಲರ ಆಜಾತಶತ್ರುವಾಗಿದ್ದು, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮುನ್ನಡೆಸಿದ್ದಾರೆ. ಜಾತಿ, ಮತ, ಧರ್ಮ, ಪಕ್ಷ ಭೇಧ ಮರೆತು ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪಕ್ಷ, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟಕ್ಕೆ ಇನ್ನೂ ಬೇಕಿದೆ. ಅವರಿಗಾಗಿ ಎಲ್ಲೆಡೆ ಪ್ರಾರ್ಥನೆ ನಡೆಯುತ್ತಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಸರಸು ಡಿ ಬಂಗೇರ, ಶ್ರೀಕರ ಸುವರ್ಣ, ರಮೀಜ್ ಹುಸೇನ್, ಶರ್ಫುದ್ದೀನ್ ಶೇಖ್, ನಾಗೇಶ್ ಕುಮಾರ್ ಉದ್ಯಾವರ, ಅಶೋಕ್ ನಾಯರಿ, ಹರೀಶ್ ನಾಯಕ್, ವಿಕ್ರಂ ಕಾಪು, ಎಚ್. ಅಬ್ದುಲ್ಲಾ, ಅಮೀರುದ್ದೀನ್, ಹರೀಶ್ ನಾಯಕ್, ಸುಧಾಕರ ಸಾಲ್ಯಾನ್, ನಾಗೇಶ್ ಸುವರ್ಣ, ಇಮ್ರಾನ್ ಮಲ್ಲಾರು, ಬಾಲರಾಜ್ ಕೋಟ್ಯಾನ್, ಎಚ್. ಉಸ್ಮಾನ್, ಪ್ರಭಾಕರ ಪೂಜಾರಿ, ದಿವಾಕರ ಬೊಲ್ಜೆ, ಜಿತೇಶ್ ಸುವರ್ಣ, ಪಕ್ಷದ ವಿವಿಧ ಘಟಕ/ಸಮಿತಿಗಳ ಪದಾಧಿಕಾರಿಗಳು, ಆಸ್ಕರ್ ಫೆರ್ನಾಂಡಿಸ್ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.