ಗುಂಡಿಬೈಲು ಹಿ.ಪ್ರಾ. ಶಾಲೆಯ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
Team Udayavani, Jul 13, 2017, 3:00 AM IST
ಉಡುಪಿ: ಸುಮಾರು 8 ದಶಕಗಳ ಇತಿಹಾಸ ಉಳ್ಳ ಗುಂಡಿಬೈಲು ಹಿ. ಪ್ರಾ. ಶಾಲೆಯ ಜೀರ್ಣೋದ್ಧಾರಕ್ಕೆ ಜು. 12ರಂದು ಶಿಲಾನ್ಯಾಸ ನೆರವೇರಿಸಲಾಯಿತು.
ಶ್ರೀ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು. ಮಸ್ತಕವು ವಿದ್ಯಾಲಯವಾದರೆ, ಹೃದಯವು ದೇವಾಲಯವಾಗಿರುತ್ತದೆ. ಈ ದಿಶೆಯಲ್ಲಿ ಮಸ್ತಕ ಮತ್ತು ಹೃದಯವು ಸದೃಢವಾಗಿರಬೇಕು ಎಂದು ಅವರು ಆಶೀರ್ವದಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಪೇಜಾವರಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಮಸೀದಿ, ಮಂದಿರ, ಇಗರ್ಜಿಗಳ ಜೀರ್ಣೋದ್ಧಾರ ಮಾಡಿದಂತೆ ವಿದ್ಯಾಲಯಗಳೂ ಪ್ರಥಮ ಆದ್ಯತೆಯಲ್ಲಿ ನವೀರಕಣಗೊಳ್ಳಬೇಕು. ಸುಮಾರು 10 ಕೋಟಿ ರೂಪಾಯಿಗಳ ಯೋಜನೆಯನ್ನು ಪ್ರಥಮ ಹಂತದಲ್ಲಿ 1.5 ಕೋ.ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದೆ. ಸಾರ್ವಜನಿಕರು ಈ ಸತ್ಕಾರ್ಯಕ್ಕೆ ಉದಾರ ದೇಣಿಗೆಯನ್ನು ನೀಡಿ ಸಹಕರಿಸಬೇಕೆಂದು ಕೋರಿದರು. ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್, ಡಿಡಿಪಿಐ ವೆಂಕಟೇಶ್ ನಾಯ್ಕ, ನಗರ ಸಭಾ ಸದಸ್ಯರಾದ ಗೀತಾ ಶೆಟ್ಟಿ, ನಿವೃತ್ತ ಬ್ಯಾಂಕಿ ಅಧಿಕಾರಿ ಸುಬ್ರಹ್ಮಣ್ಯ ಭಟ್, ಪ್ರಾಧ್ಯಾಪಕ ಎ.ಪಿ. ಭಟ್ ಮತ್ತಿತರರು ಉಪಸ್ಥಿತರಿದ್ದರು. ಶ್ರೀನಿವಾಸ ಬಲ್ಲಾಳ್ ಸ್ವಾಗತಿಸಿ, ಗುಂಡಿಬೈಲು ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಕಮಲಿನಿ ಆರ್ ಭಟ್ ವಂದಿಸಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯರಾದ ಮಾಲತಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಪ್ರೊ| ದಯಾನಂದ ಶೆಟ್ಟಿ ಪ್ರಸ್ತಾವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.