![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2020, 11:26 PM IST
ಕಾರ್ಕಳ: ರಾಜ್ಯದ 65 ದೇವಸ್ಥಾನಗಳಿಗೆ ವಾರದೊಳಗೆ ವ್ಯವಸ್ಥಾಪನ ಸಮಿತಿ ನೇಮಕ ಮಾಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಕಾರ್ಕಳ ಭಾಗಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವ್ಯವಸ್ಥಾಪನ ಸಮಿತಿಗೆ ಅರ್ಜಿ ಸಲ್ಲಿಸಿದವರಲ್ಲಿ ಹೊರ ರಾಜ್ಯದವರು ಇರುವುದರಿಂದ ಪೊಲೀಸ್ ಪರಿಶೀಲನೆ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಕಾಶ ತಗಲಿರುವುದರಿಂದ ನೇಮಕ ವಿಳಂಬವಾಗಿದೆ. ಬಿ ಮತ್ತು ಸಿ ಶ್ರೇಣಿಯ ದೇವಸ್ಥಾನಗಳಲ್ಲಿ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅರ್ಜಿ ಸಲ್ಲಿಕೆಯಾಗದ ಕಡೆಗಳಲ್ಲಿ ಸ್ವಯಂ ಪ್ರೇರಿತವಾಗಿ ಆಯ್ಕೆ ಪ್ರಕ್ರಿಯೆಯನ್ನು ಧಾರ್ಮಿಕ ಪರಿಷತ್ ನಡೆಸಲಿದೆ. ಪೂರ್ಣ ಪ್ರಮಾಣದ ವ್ಯವಸ್ಥಾಪನ ಸಮಿತಿ ರಚನೆಯಾಗಲಿದೆ ಎಂದರು. ದೇವಸ್ಥಾನಗಳ ಭದ್ರತೆಗೆ ಸಿಸಿ ಕೆಮರಾ ಅಳವಡಿಕೆ, ಭದ್ರತೆ ಸಿಬಂದಿ ಒದಗಿಸಲು ಸರಕಾರ ಬದ್ಧವಾಗಿದೆ ಎಂದರು.
ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ಬಹಳಷ್ಟು ಮಂದಿಗೆ ಭೂಮಿಯ ಹಕ್ಕು ಪತ್ರ ಹಾಗೂ ಹಕ್ಕುಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಸರಕಾರ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡಲು ನಿರ್ಧರಿಸಿದೆ. ರೈತರಿಗೆ ಕುಮ್ಕಿ, ಕಾನ, ಬಾಣೆಯ ಜಾಗದ ಹಕ್ಕು ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು. ಕಂದಾಯ ತಿದ್ದುಪಡಿಯಿಂದ ಕೃಷಿಕರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಿದೆ. ಕೃಷಿಭರಿತ ಭೂಮಿಯನ್ನು ಕೃಷಿಗೆ ಮಾತ್ರ ಉಪಯೋಗಿಸಲು ಹಾಗೂ ಒಣಭೂಮಿಯನ್ನು ಇತರ ಉದ್ಯಮ, ಉದ್ಯೋಗಕ್ಕಾಗಿ ಬಳಸಲು ಅನುಕೂಲವಾಗಲಿದೆ. ಆಯುಷ್ಮಾನ್ ಭಾರತ್ ಸೌಲಭ್ಯ ಕಾರ್ಡನ್ನು ಕೊರೊನಾ ಚಿಕಿತ್ಸೆಗೆ ವಿಸ್ತರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.