Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Team Udayavani, Oct 9, 2024, 1:13 AM IST

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

ಬ್ರಹ್ಮಾವರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪೂರಕವಾಗಿ ಸಂಸ್ಕಾರಯುತ, ರಾಷ್ಟ್ರನಿಷ್ಠ ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣವಾಗುತ್ತಿರುವ ರಾಷ್ಟ್ರೋತ್ಥಾನ ಪರಿಷತ್‌ನಿಂದ ಜಿಲ್ಲೆಯ ಚೇರ್ಕಾಡಿಯಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಪ್ರಾರಂಭವಾಗುತ್ತಿದೆ.

ಶಾಲಾ ಕಟ್ಟಡ ನಿರ್ಮಾಣ ಭರದಿಂದ ಸಾಗುತ್ತಿದ್ದು, ಅ. 12ರ ವಿಜಯದಶಮಿಯಿಂದ ಇಲ್ಲಿನ ಎಸ್‌ಎಂಎಸ್‌ ಬಳಿಯ ಮಧುವನ ಕಾಂಪ್ಲೆಕ್ಸ್‌ನಲ್ಲಿರುವ ಕಾರ್ಯಾಲಯದಲ್ಲಿ ಪ್ರಿ ಕೆಜಿಯಿಂದ 6ನೇ ತರಗತಿ ವರೆಗಿನ ಪ್ರವೇಶ ಪ್ರಕ್ರಿಯೆ ನಡೆಯಲಿದೆ. 2025ರ ಮೇಯಲ್ಲಿ ಶಾಲಾರಂಭಗೊಳ್ಳಲಿದೆ.

ಅತ್ಯಾಧುನಿಕ ಮೂಲಸೌಕರ್ಯ
ಪ್ರಶಾಂತ ಹಾಗೂ ನಿರ್ಮಲ ವಾತಾವರಣ, ಸುರಕ್ಷಿತ ಮತ್ತು ಶಿಕ್ಷಣ ಸ್ನೇಹಿ ಪರಿಸರ, ವಿಶಾಲವಾದ ಸುಸಜ್ಜಿತ, ಅತ್ಯಾಧುನಿಕ ತಂತ್ರಜ್ಞಾನಾಧಾರಿತ ತರಗತಿ ಕೊಠಡಿ, ಸುವ್ಯವಸ್ಥಿತವಾದ ಪ್ರಯೋಗಾಲಯ, ಸುಸಜ್ಜಿತ ಗ್ರಂಥಾಲಯ, ಹೊರಾಂಗಣ ಮತ್ತು ಒಳಾಂಗಣ ಆಟದ ಮೈದಾನ- ವಾಲಿಬಾಲ್‌, ತ್ರೋಬಾಲ್‌, ಆ್ಯತ್ಲೆಟಿಕ್ಸ್‌, ಟೇಬಲ್‌ ಟೆನಿಸ್‌, ಬ್ಯಾಡ್ಮಿಂಟನ್‌, ಪುಟಾಣಿಗಳಿಗೆ ಪೂರಕವಾದ ಕ್ರೀಡಾ ವಲಯ ಮತ್ತು ಮರಳು ದಿಣ್ಣೆಯ ಬಾಲಕ್ರೀಡಾಂಗಣ ವ್ಯವಸ್ಥೆ, ಮಕ್ಕಳಿಗೆ ಪ್ರಕೃತಿಯಲ್ಲಿ ಕಲಿಯಲು ಅನುಕೂಲವಾಗುವಂತೆ ತೋಟಗಾರಿಕೆ, ನರ್ಸರಿ ವ್ಯವಸ್ಥೆ, ದೃಶ್ಯ ಮತ್ತು ಪ್ರದರ್ಶನ, ಕಲೆ-ಸಂಗೀತ, ನಾಟಕ, ನೃತ್ಯ ಮತ್ತು ಯೋಗ ಶಾಲೆ, ಸುರಕ್ಷತೆಗಾಗಿ ಜಿಪಿಎಸ್‌ ಅಳವಡಿಸಿದ ಸುಸಜ್ಜಿತ ಸಾರಿಗೆ ವ್ಯವಸ್ಥೆ ಇದೆ. ಉಡುಪಿ, ಮಣಿಪಾಲ, ಕುಂದಾಪುರ, ಮೂಲ್ಕಿ, ಹೆಬ್ರಿ, ಮಲ್ಪೆ ಮತ್ತು ಕಾರ್ಕಳದಿಂದ ಶಾಲಾ ಬಸ್ಸಿನ ವ್ಯವಸ್ಥೆ ಲಭ್ಯವಿದೆ.

ವಿಶೇಷತೆಗಳು
ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್‌ಇಪಿ) ಆಧಾರಿತ ಪಠ್ಯಕ್ರಮ, ಶಿಶು/ವಿದ್ಯಾರ್ಥಿ ಕೇಂದ್ರಿತ ಪಠ್ಯವಿಧಾನ, ಅರ್ಹ, ತರಬೇತಿ ಹೊಂದಿದ ಮತ್ತು ಬದ್ಧತೆ ಇರುವ ಅಧ್ಯಾಪಕ ವೃಂದ, ವಿದ್ಯಾರ್ಥಿ-ಶಿಕ್ಷಕರ ಅನುಕೂಲಕರ ಅನುಪಾತ ಹೊಂದಿತ ತರಗತಿ ವ್ಯವಸ್ಥೆ, ವೈಯಕ್ತಿಕ ಕಾಳಜಿ ಮತ್ತು ಮಾರ್ಗದರ್ಶನ, ಸಲಹೆ ಮತ್ತು ಆಪ್ತ ಸಮಾಲೋಚನೆ, ಪೋಷಕ ಸಮುದಾಯದೊಂದಿಗೆ ಉತ್ತಮವಾದ ಬಾಂಧವ್ಯ, ರಚನಾತ್ಮಕ ಸಹಪಠ್ಯ ಚಟುವಟಿಕೆಗಳು, ಕ್ರೀಡೆ ಮತ್ತು ವೃತ್ತಿಪರ ತರಬೇತಿ ಇರುತ್ತದೆ.

ಪಂಚಮುಖಿ ಶಿಕ್ಷಣ
ಮಕ್ಕಳ ಸಮಗ್ರ ವಿಕಾಸಕ್ಕಾಗಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕವೆನ್ನುವ ಪಂಚಮುಖಿ ಶಿಕ್ಷಣ ದೊರೆಯುವುದು ಸಂಸ್ಥೆಯ ವಿಶೇಷ. ಮಾಹಿತಿಗೆ ಇ-ಮೇಲ್‌: [email protected] ವೆಬ್‌ಸೈಟ್‌ : http://www.rvkcbse.in ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಏನಿದು ರಾಷ್ಟ್ರೋತ್ಥಾನ ಪರಿಷತ್‌ ?
ಸ್ವಸ್ಥ-ಸುಸ್ಥಿರ ಸಮಾಜ ನಿರ್ಮಾಣದ ಲಕ್ಷ್ಯವನ್ನಿಟ್ಟುಕೊಂಡು 1965ರಿಂದ ಕರ್ನಾಟಕದಲ್ಲಿ ಸಕ್ರಿಯವಾಗಿರುವ ಪ್ರಮುಖ ಸ್ವಯಂಸೇವಾ ಸಂಸ್ಥೆಯಾಗಿದೆ. ಭಾರತದ ನೈಜ ಇತಿಹಾಸ, ಸಂಸ್ಕೃತಿ-ಪರಂಪರೆಗಳನ್ನು ಮತ್ತೆ ಜಾಗೃತಗೊಳಿಸಲು ರಾಷ್ಟ್ರೋತ್ಥಾನ ಸಾಹಿತ್ಯದೊಂದಿಗೆ ಪ್ರಾರಂಭವಾದ ಪರಿಷತ್‌ನ ಸಮಾಜಕಾರ್ಯ ಇಂದು ಸಾಹಿತ್ಯ, ಶಿಕ್ಷಣ, ಆರೋಗ್ಯ, ಸೇವೆ ಎಂಬ ನಾಲ್ಕು ಆಯಾಮಗಳೊಂದಿಗೆ ರಾಜ್ಯಾದ್ಯಂತ ಸಕ್ರಿಯವಾಗಿದ್ದು, 18ಕ್ಕೂ ಹೆಚ್ಚು ಪ್ರಕಲ್ಪಗಳು ಹಾಗೂ 60ಕ್ಕೂ ಮಿಕ್ಕಿ ಚಟುವಟಿಕೆಗಳಾಗಿ ಕವಲೊಡೆದಿದೆ. ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿಬಿಎಸ್‌ಇ ಶಾಲೆಗಳ ಸಮೂಹವಾಗಿದೆ. 2005ರಲ್ಲಿ ಮೊದಲ ಶಾಲೆ ಪ್ರಾರಂಭಗೊಂಡರೆ, ಪ್ರಸ್ತುತ ಕರ್ನಾಟಕದಾದ್ಯಂತ 17 ಕಡೆಗಳಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.