ಮಳೆಗಾಲದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಆಗ್ರಹ
Team Udayavani, May 14, 2020, 5:54 AM IST
ಬೆಳ್ಮಣ್ : ಇಲ್ಲಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಂದಳಿಕೆ, ಬೆಳ್ಮಣ್, ಇನ್ನಾ, ಬೋಳ ಹಾಗೂ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಗಾಲದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಜನ ಆಗ್ರಹಿಸಿದ್ದಾರೆ.
ಪ್ರತೀ ವರ್ಷ ಎಪ್ರಿಲ್ ಮೇ ತಿಂಗಳಲ್ಲಿ ಮಳೆಗಾಲಕ್ಕಾಗಿ ತಯಾರಾಗುತ್ತಿದ್ದ ಗ್ರಾಮ ಪಂಚಾಯತ್‌ಗಳಲ್ಲಿ, ಈ ಬಾರಿ ಕೋವಿಡ್- 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರ ಕೊರತೆಯಿಂದ ಮಳೆಗಾಲಕ್ಕೆ ಬೇಕಾದ ಚರಂಡಿ ನಿರ್ಮಾಣ ಕಾಮಗಾರಿಗಳು ಬಹುತೇಕ ವಿಳಂಬವಾಗಿದೆ.
ಮಳೆಗಾಲ ಸಿದ್ದತೆಯ ಬಗ್ಗೆ ಹಲವು ಗ್ರಾಮ ಪಂಚಾಯತ್‌ಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಇನ್ನೂ ಪೂರ್ವ ತಯಾರಿಯನ್ನು ಕೋವಿಡ್- 19 ಪರಿಣಾಮದಿಂದ ಇನ್ನೂ ಆರಂಭಿಸಿಲ್ಲ.
ಮಳೆಗಾಲ ಆರಂಭವಾಗಿ ತೊಂದರೆಯನ್ನು ಅನುಭವಿಸುವುದಕ್ಕಿಂತ ಮೊದಲೇ ಪೂರ್ವ ತಯಾರಿಯನ್ನು ಮಾಡಿಕೊಂಡರೆ ಸುಲಭವಾಗುತ್ತದೆ ಎಂದು ಪ್ರಗತಿಪರ ಕೃಷಿಕ ಜಯರಾಮ ಶೆಟ್ಟಿ ಪೊಸ್ರಾಲು ಹೇಳುತ್ತಾರೆ.
ಕೆಲಸ ಆರಂಭ
ಕೋವಿಡ್- 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಳೆಗಾಲ ಮುನ್ನೆಚ್ಚರಿಕೆ ವಿಳಂಬವಾಗಿದೆ. ಈಗಾಗಲೇ ಲಾಕ್‌ಡೌನ್ ಸಡಿಲಿಕೆಯಾಗಿದ್ದು ಕಾರ್ಮಿಕರನ್ನು ಬಳಸಿ ಚರಂಡಿ ನಿರ್ವಹಣೆಯನ್ನು ಮಾಡುತ್ತೇವೆ.
-ಶುಭಾ ಪಿ.ಶೆಟ್ಟಿ,
ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.