ಕುಚ್ಚೂರು ರಸ್ತೆ ಅಗಲೀಕರಣ ಕಾಮಗಾರಿಗೆ ಇಲಾಖೆ ಅಡ್ಡಿ;ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Feb 28, 2024, 11:43 AM IST
ಹೆಬ್ರಿ: ಕುಚ್ಚೂರು ರಸ್ತೆಯ ಅಗಲೀಕರಣ ಕಾಮಗಾರಿಗೆ ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹೊಂದಾಣಿಕೆ ಇಲ್ಲದೆ ಅಡ್ಡಿಪಡಿಸುತ್ತಿರುವ ಬಗ್ಗೆ ಗ್ರಾಮಸ್ಥರು ಫೆ.27ರಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ದಿನನಿತ್ಯ ನೂರಾರು ವಾಹನಗಳು ಸಂಚರಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ತೊಡಕು ಮಾಡುತ್ತಿದ್ದಾರೆ.ಕೂಡಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಬೇಕು ಎಂದು ಸುಮಾರು 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದರು.
ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು:
ಅರಣ್ಯ ವನ್ಯಜೀವಿ ಇಲಾಖೆಯ ಡಿಎಫ್ಓ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬರಲೇಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದ ಪರಿಣಾಮ ಡಿಎಫ್ಓ ಶಿವನಂದ ಬಾಬು, ಆರ್‌ಎಫ್ಒ ಗೌರವ್ ಮತ್ತು ಲೋಕೋಪಯೋಗಿ ಇಲಾಖೆಯ ತ್ರಿನೇಶ್ವರ ಹಾಗೂ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಮನವಿ ಸ್ವೀಕರಿಸಿ ಇನ್ನು ಎರಡು ದಿನಗಳೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಇದಕ್ಕೆ ಒಪ್ಪದ ಗ್ರಾಮಸ್ಥರು ಇವತ್ತೇ ನಮಗೆ ಸಮಸ್ಯೆ ಪರಿಹಾರ ಆಗಬೇಕು ಎಂದು ಆಗ್ರಹಿಸಿದರು.
ಅರಣ್ಯ ಇಲಾಖೆಯ ಅನುಮಿತಿ ಪತ್ರ ಪಡೆದಿಲ್ಲ :
ರಸ್ತೆ ಅಗಲೀಕರಣ ಆಗಬೇಕಾದರೆ ಅರಣ್ಯ ಇಲಾಖೆಯಿಂದ ಎಫ್ ಸಿ ತೆಗೆದುಕೊಳ್ಳಬೇಕು. ಈ ಕಾಮಗಾರಿಯ ಮಾಡುವ ಮೊದಲು ಅರಣ್ಯ ಇಲಾಖೆಯಿಂದ ಯಾವುದೇ ಎಫ್ ಸಿ ತಗೊಳ್ಳಿಲ್ಲ. ಆದುದರಿಂದ ಇದು ಕಾನೂನಿಗೆ ವಿರುದ್ಧವಾಗಿದೆ. ಅರಣ್ಯ ಇಲಾಖೆಯಿಂದ ಅಭಿವೃದ್ಧಿಗೆ ತೊಂದರೆ ಮಾಡುವುದಿಲ್ಲ.ಅನುಮತಿ ಪಡೆದರೆ ಅಗಲೀಕರಣಕ್ಕೆ ಅವಕಾಶ ನೀಡಲಾಗುವುದು ಎಂದು ಡಿಎಫ್ಓ ಶಿವನಂದ ಬಾಬು ಹೇಳಿದರು.
ಶೀಘ್ರ ಸಮಸ್ಯೆ ಪರಿಹಾರಕ್ಕೆ ಯತ್ನ:
ಅರಣ್ಯ ಇಲಾಖೆಯವರಿಗೆ ಈ ಕೂಡಲೇ ನಮ್ಮ ಇಲಾಖೆಯಿಂದ ಆನ್ ಲೈನ್ ಎಫ್ ಸಿಗೆ ಅರ್ಜಿ ಹಾಕುತ್ತವೆ. ನಾನು ಇವತ್ತೇ ಬೆಂಗಳೂರಿಗೆ ಹೋಗಿ ಹಿರಿಯ ಅಧಿಕಾರಿಗಳಿಗೆ ಮಾತನಾಡಿ, ಎರಡು ದಿನಗಳ ಒಳಗೆ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಲೋಕೋಪಯೋಗಿ ಇಲಾಖೆಯ ತ್ರಿನೇಶ್ವರ ಹೇಳಿದರು.
ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹಾಂತೇಶ್ ಮತ್ತು ಸಿಬ್ಬಂದಿಗಳು ಬಿಗು ಪೊಲೀಸ್ ಬಂದೋಸ್ತ್ ಏರ್ಪಡಿಸಿದ್ದರು.
ಪ್ರತಿಭಟನಾ ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪ್ರಸಾದ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತನಾಡಿದರು.
ಪ್ರತಿಭಟನೆಯಲ್ಲಿ ಶ್ರೀಕಾಂತ್ ಪೂಜಾರಿ, ರಾಜೀವ ಶೆಟ್ಟಿ, ಮಹೇಶ್ ಶೆಟ್ಟಿ, ವಿಜೇಯೆಂದ್ರ ಶೆಟ್ಟಿ, ಪ್ರಭಾಕರ ಪೂಜಾರಿ, ಸುಧಾಕರ ಶೆಟ್ಟಿ ಸೇರಿದಂತೆ ಸುಮಾರು 300 ಕ್ಕೂ ಮಿಕ್ಕಿ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.