ಶಿರ್ವ : ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಢಿಕ್ಕಿ : ತಂದೆ ಸಾವು, ಮಗ ಗಂಭೀರ
Team Udayavani, Sep 22, 2022, 9:16 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ ಬಳಿ ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಸೆ. 21ರಂದು ರಾತ್ರಿ ನಡೆದಿದೆ.
ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಗಾಯಗೊಂಡವರು. ಶರಣಪ್ಪ ತನ್ನ ಪುತ್ರ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿರುವಾಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಬೈಕನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.
ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಸೇರಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ಗಂಭೀರ ಗಾಯಗೊಂಡು ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಾದ ಶರಣಪ್ಪ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಒಳರೋಗಿಯಾಗಿ ದಾಖಲಾಗಿದ್ದು, ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರು-ಮೈಸೂರು-ಮಂಗಳೂರು ರೈಲು ಕುಂದಾಪುರ-ಕಾರವಾರದ ವರೆಗೆ ವಿಸ್ತರಣೆಗೆ ಹೆಚ್ಚಿದ ಬೇಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.