ಸಚ್ಚೇರಿಪೇಟೆ: ಹಳೇ ಕಟ್ಟಡದಲ್ಲಿ ಆರೋಗ್ಯ ಸೇವೆ ಭಾಗ್ಯ

 60 ವರ್ಷಗಳ ಹಳೆ ಕಟ್ಟಡ ಕಾಯಕಲ್ಪಕ್ಕೆ ಕಂದಾಯ ಇಲಾಖೆಯ ಕಾನೂನಿನ ತೊಡಕು

Team Udayavani, Nov 5, 2019, 5:33 AM IST

zz-18

ಬೆಳ್ಮಣ್‌: ಮುಂಡ್ಕೂರು ಗ್ರಾ. ಪಂ. ವ್ಯಾಪ್ತಿಯ 1,783 ಕುಟುಂಬಗಳ 7,781 ಮಂದಿಯ ಆರೋಗ್ಯ ಕಾಪಾಡುತ್ತಾ ಬಂದಿರುವ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬಂದಿಗಳ ಸೇವೆ ಉತ್ತಮವಾಗಿದ್ದರೂ ಇಲ್ಲಿನ ಆಸ್ಪತ್ರೆಯ ಕಟ್ಟಡ ಮಾತ್ರ ಹಳೆಯದಾಗಿದ್ದು ಜನಸಾಮಾನ್ಯರಲ್ಲಿ ಕಳವಳ ಮೂಡಿಸಿದೆ.

1960ರಲ್ಲಿ ನಿರ್ಮಾಣಗೊಂಡ ಈ ಆಸ್ಪತ್ರೆ ಕಟ್ಟಡ ಆಗಾಗ್ಗೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮುತುವರ್ಜಿಯಲ್ಲಿ ಇಲಾಖೆ ನೆರವಿನಿಂದ ನವೀಕರಣಗೊಂಡದ್ದು ಬಿಟ್ಟರೆ ಪೂರ್ಣ ಪ್ರಮಾಣದಲ್ಲಿ ಮರು ನಿರ್ಮಾಣ ಗೊಂಡಿಲ್ಲ. ಈ ಹಿಂದೆ 2012ರಲ್ಲಿ ನಬಾರ್ಡ್‌ ಯೋಜನೆಯಡಿ ನೂತನ ಕಟ್ಟಡ ನಿರ್ಮಾಣದ ಚಿಂತನೆ ನಡೆಸ ಲಾಗಿದ್ದರೂ ಪಹಣಿ ಪತ್ರದ ಗೊಂದಲ ಎಲ್ಲ ಆಸೆಗಳಿಗೆ ತಣ್ಣೀರೆರಚಿತ್ತು.

ಕಾನೂನಾತ್ಮಕ ಕಂದಾಯ ಇಲಾಖೆಯ ಗೊಂದಲ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯಲ್ಲಿ ಸರ್ವೆ ನಂಬ್ರ 340/1ಬಿ ರ 2.54 ಎಕರೆ ಸ್ಥಳದಲ್ಲಿ ಈ ಹಿಂದೆ 1960ರಲ್ಲಿ ನಿರ್ಮಾಣಗೊಂಡ ಈ ಆಸ್ಪತ್ರೆಯ ಜಾಗದ ಪಹಣಿ ಪತ್ರದ ಕಲಂ 9ರಲ್ಲಿ “ಸರಕಾರ’ ಎಂದು ನಮೂದಾಗಿರುವುದು ಈ ಕಟ್ಟಡ ಪುನರ್‌ನಿರ್ಮಾಣ ಯೋಜನೆಗೆ
ಅಡ್ಡಿಯಾಗಿದೆ. ಈ ಬಗ್ಗೆ ಮುಂಡ್ಕೂರು ಗ್ರಾ.ಪಂ. ಆಡಳಿತ ಕಾರ್ಕಳ ಶಾಸಕರು,ಜಿ. ಪಂ.ಗೆ ಕಟ್ಟಡ ನಿರ್ಮಾಣದ ಬಗ್ಗೆ ಮನವಿ ಸಲ್ಲಿಸಿದಾಗ ಈ ದೋಷದ ಮಾಹಿತಿ ಲಭ್ಯ ವಾಗಿತ್ತು. ಪಹಣಿ ಪತ್ರದಲ್ಲಿ ಸರಕಾರ ಎಂಬ ಪದದ ಬದಲಿಗೆ ಆರೋಗ್ಯ ಇಲಾಖೆ ಎಂಬುದಾಗಿ ತಿದ್ದುಪಡಿ ಮಾಡಿ ನಮೂದಿಸು
ವಂತೆ ಶಾಸಕರಾದಿಯಾಗಿ ಎಲ್ಲರೂ ಉಲ್ಲೇಖೀತಪತ್ರ ಪಂ. ಗೆ ನೀಡಿದ್ದರು.

ತಹಶೀಲ್ದಾರ್‌ಗೆ ಪತ್ರ
ಈ ಬಗ್ಗೆ ಪಹಣಿಪತ್ರ ತಿದ್ದುಪಡಿ ಮಾಡುವಂತೆ ಮುಂಡ್ಕೂರು ಗ್ರಾ.ಪಂ. ಸದಸ್ಯ ರಘುವೀರ ಶೆಣೈಯವರು ಕಾರ್ಕಳ ತಹಶೀಲ್ದಾರರಿಗೆ ಪತ್ರ ಬರೆದಿದ್ದು ಸಕಾರಾತ್ಮಕ ಉತ್ತರ ನಿರೀಕ್ಷಿಸಲಾಗಿದೆ. ಕಾರ್ಕಳ ಶಾಸಕರು, ಉಡುಪಿ ಜಿ.ಪಂ. ಮುಂಡ್ಕೂರು ಗ್ರಾ.ಪಂ.ನವರು ಈ ಆಸ್ಪತ್ರೆಯ ನೂತನ ಕಟ್ಟಡದ ಬಗ್ಗೆ ಸಮಗ್ರ ಚಿಂತನೆ ನಡೆಸಬೇಕಿದೆ. ಈಗಾಗಲೇ ಪಂಚಾಯತ್‌ ಆಡಳಿತ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು ಶೀಘ್ರವೇ ಸಚ್ಚೇರಿಪೇಟೆ ಪ್ರಾ. ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ದೊರೆಯುವ ಸಾಧ್ಯತೆ ಇದೆ.

ಬೇಡಿಕೆಗಳು
ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತೀ ದಿನ ನೂರಕ್ಕೂ ಹೆಚ್ಚು ಮಂದಿ ವೈದ್ಯಕೀಯ ಸೇವೆ , ಮಾಹಿತಿಗಾಗಿ ಬರುತ್ತಿದ್ದು ಎಲ್ಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹೈಟೆಕ್‌ ಆಸ್ಪತ್ರೆಗಳಲ್ಲಿ ಸಿಗುವ ಹೆಚ್ಚಿನ ಸೌಲಭ್ಯಗಳನ್ನು ಇಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬಂದಿ ನೀಡುತ್ತಿದ್ದರೂ ಹಲವು ಮೂಲ ಸೌಕರ್ಯಗಳ ಕೊರತೆ ಇದೆ. 4 ಉಪ ಕೇಂದ್ರಗಳಿರುವ ಈ ಆಸ್ಪತ್ರೆಯ ಮುಂಡ್ಕೂರು ಹಾಗೂ ಸಚ್ಚೇರಿಪೇಟೆ ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡ ಇದೆ. ಇರಬೇಕಾದ 4 ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹುದ್ದೆ ಖಾಲಿ ಇದ್ದು ಸದ್ಯಕ್ಕೆ ಎರಡನ್ನಾದರೂ ನೀಡಬೇಕಾಗಿದೆ. ನೀರಿನ ವ್ಯವಸ್ಥೆಗೆ ಬೋರ್‌ವೆಲ್‌, ಸಿಬಂದಿಗಳಿಗೆ ವಸತಿಗೃಹ ಬೇಕಾಗಿದೆ.

ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಸಹಕಾರ
ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಕಂದಾಯ ಇಲಾಖೆಯ ಮೂಲಕ ಪಹಣಿಪತ್ರ ತಿದ್ದುಪಡಿ ಮಾಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಎಲ್ಲ ಸಹಕಾರ ನೀಡಲಾಗುವುದು.
-ವಿ. ಸುನಿಲ್‌ ಕುಮಾರ್‌, ಶಾಸಕರು, ಕಾರ್ಕಳ

ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.