Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

ಕೆಮ್ಮಣ್ಣು, ಹೂಡೆ, ನೇಜಾರು ಭಾಗದಿಂದ ಬರುವ ಸ್ಥಳೀಯ ವಾಹನಗಳಿಗೆ ಸಮಸ್ಯೆ

Team Udayavani, Jan 7, 2025, 4:08 PM IST

10(1

ಉಡುಪಿ: ಸಂತೆಕಟ್ಟೆಯಲ್ಲಿ ವೆಹಿಕ್ಯುಲರ್‌ ಓವರ್‌ಪಾಸ್‌ ಎರಡನೇ ಹಂತದ ಕಾಮಗಾರಿ ನಡೆಯುತ್ತಿದ್ದು, ಇದೀಗ ಉಡುಪಿಯಿಂದ ಕುಂದಾಪುರ ಕಡೆ ಹೋಗುವವರ ಅನುಕೂಲಕ್ಕಾಗಿ ಇನ್ನೊಂದು ಸರ್ವಿಸ್‌ ರಸ್ತೆ ತೆರವುಗೊಳಿಸಲಾಗಿದೆ. ಆದರೆ, ಸಮರ್ಪಕ ಡಾಮರು ಹಾಕದೇ ಇರುವುದರಿಂದ ಇನ್ನಷ್ಟು ಸಮಸ್ಯೆ ಎದುರಾಗುತ್ತಿದೆ. ಸರ್ವಿಸ್‌ ರಸ್ತೆಗೆ ಡಾಮರು ಹಾಕಬೇಕು, ಟ್ರಾಫಿಕ್‌ ಸಮಸ್ಯೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಇಲ್ಲವಾದರೆ ಬೆಳಗ್ಗೆ ಮತ್ತು ಸಂಜೆ ದೊಡ್ಡ ಪ್ರಮಾಣ ಸಮಸ್ಯೆ ಉದ್ಭವಿಸಲಿದೆ ಎನ್ನುತ್ತಾರೆ ಸ್ಥಳೀಯರು.

ಓವರ್‌ಪಾಸ್‌ ಕಾಮಗಾರಿಯಿಂದ ಈ ರಸ್ತೆಯಲ್ಲಿ ನಿತ್ಯ ವಾಹನ ಚಲಾಯಿಸಿಕೊಂಡು ಬರುವ ಸವಾರರು ಹೈರಾಣಾಗಿದ್ದಾರೆ. ಸ್ಥಳೀಯರಂತೂ ರೋಸಿ ಹೋಗಿದ್ದಾರೆ. ರಾ.ಹೆ.66ರಲ್ಲಿ ಬಿದ್ದಿರುವ ಗುಂಡಿಗಳನ್ನು ಇನ್ನೂ ಸರಿಪಡಿಸಿಲ್ಲ. ದ್ವಿಚಕ್ರ ವಾಹನ ಸೇರಿದಂತೆ ಸಣ್ಣ ಗಾತ್ರದ ವಾಹನಗಳ ಸಂಚಾರ ಇಂದಿಗೂ ಕಷ್ಟವೇ ಆಗಿದೆ.

ಸಂತೆಕಟ್ಟೆ ಕೇಂದ್ರ ಸ್ಥಾನದಿಂದ ಕುಂದಾಪುರ ಕಡೆ ಹೋಗಲು ಈವರೆಗೂ ಸರ್ವಿಸ್‌ ರಸ್ತೆ ಇರಲಿಲ್ಲ. ಬದಲಿಗೆ ಸಂತೆ ಮಾರುಕಟ್ಟೆ ಮಾರ್ಗವಾಗಿ ಮುಖ್ಯ ರಸ್ತೆಗೆ ಹೋಗುತ್ತಿದ್ದರು. ಎರಡನೇ ಹಂತದ ಕಾಮಗಾರಿ ವೇಳೆ ಆರಂಭದಲ್ಲಿ ತಡೆಗೋಡೆ ನಿರ್ಮಾಣ ಮಾಡಿರುವುದರಿಂದ ಈಗ ಉಡುಪಿಯಿಂದ ಕುಂದಾಪುರ ಸಾಗುವ ವಾಹನಗಳಿಗೆ ವಿಶೇಷವಾಗಿ ಸರ್ವಿಸ್‌ ಹಾಗೂ ಸಿಟಿ ಬಸ್‌ಗಳಿಗೆ ಅನುಕೂಲವಾಗುವಂತೆ ಸರ್ವಿಸ್‌ ರಸ್ತೆ ವ್ಯವಸ್ಥೆಯಾಗಿದೆ. ಆದರೆ, ಇಲ್ಲಿ ಸರಿಯಾಗಿ ಡಾಮರು ಹಾಕಿಲ್ಲ. ಜಲ್ಲಿಕಲ್ಲುಗಳನ್ನು ಮಾತ್ರ ಹಾಕಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಬಿಸಿಲು ಜಾಸ್ತಿ ಇರುವುದರಿಂದ ಧೂಳು ಏಳುತ್ತಿದೆ. ಸರ್ವಿಸ್‌ ರಸ್ತೆಗೆ ತತ್‌ಕ್ಷಣವೇ ಡಾಮರು ಹಾಕಬೇಕು. ಆಗ ಮುಖ್ಯರಸ್ತೆಯಲ್ಲಿ ವಾಹನ ಸಂಚಾರವೂ ಕಡಿಮೆಯಾಗಲಿದೆ ಎನ್ನುತ್ತಾರೆ ಸ್ಥಳೀಯರು.

ಸ್ಥಳೀಯ ವಾಹನಗಳಿಗೆ ಸಮಸ್ಯೆ
ಈ ಹಿಂದೆ ಸ್ಥಳೀಯ ವಾಹನಗಳು(ಕೆಮ್ಮಣ್ಣು, ಹೂಡೆ, ನೇಜಾರು ಮೊದಲಾದ ಭಾಗದ ವಾಹನಗಳು) ಸಂತೆಕಟ್ಟೆ ಕೇಂದ್ರಭಾಗದಿಂದ ಸರ್ವಿಸ್‌ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ರೋಬೋಸಾಫ್ಟ್ ವರೆಗೂ ಬಂದು, ಅಲ್ಲಿಂದ ಮುಖ್ಯರಸ್ತೆಗೆ ಸೇರಿಕೊಳ್ಳುತ್ತಿದ್ದವು. ಇದೀಗ ಸರ್ವಿಸ್‌ ರಸ್ತೆ ಆಗಿರುವುದರಿಂದ ಈ ವಾಹನಗಳು ವಿರುದ್ಧ ದಿಕ್ಕಿನ ಸಂಚಾರ ಕಷ್ಟವಾಗಿದೆ. ಟ್ರಾಫಿಕ್‌ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸಂತೆಕಟ್ಟೆ ಕೇಂದ್ರಸ್ಥಾನದಿಂದ ಕುಂದಾಪುರಕಡೆಗೆ ಹೋಗುವ ರಸ್ತೆಯಲ್ಲಿ ಸ್ವಲ್ಪ ಮುಂದೆ ಸಾಗಿ ಈ ಹಿಂದೆ ರೂಪಿಸಿದ್ದ ಯುಟರ್ನ್ ಜಾಗದಲ್ಲಿ ಯುಟರ್ನ್ ತೆಗೆದುಕೊಂಡು ಬರುವಂತೆ ಮಾಡಬೇಕು. ಆದರೆ, ಇಷ್ಟು ದೂರು ಸುತ್ತುವರಿದು ಹೋಗಲು ಬಸ್‌ ಹಾಗೂ ಇತರೆ ವಾಹನ ಚಾಲಕ, ಮಾಲಕರು ಒಪ್ಪುವುದಿಲ್ಲ. ಹೀಗಾಗಿ ಅಗತ್ಯ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.