ಮಕ್ಕಳಿದ್ದೂ ಅನಾಥೆಯಾದ ತಾಯಿ ; ಸಾಮಾಜಿಕ ಕಾರ್ಯಕರ್ತರಿಂದ ಅಂತ್ಯಕ್ರಿಯೆ
Team Udayavani, Jul 10, 2020, 7:54 AM IST
ಸಾಂದರ್ಭಿಕ ಚಿತ್ರ
ಉಡುಪಿ: ದೊಡ್ಡ ಹುದ್ದೆಗಳಲ್ಲಿರುವ ಇಬ್ಬರು ಮಕ್ಕಳಿದ್ದರೂ ಅವರಿಂದ ಪರಿತ್ಯಕ್ತರಾಗಿರುವ ಹಿರಿಯ ಜೀವಗಳ ಕಣ್ಣೀರ ಕಥೆ ಇದು. ತಾಯಿ ಮೃತಪಟ್ಟರೂ ಮಕ್ಕಳು ಬಾರದೆ ಇದ್ದುದರಿಂದ ಸಾಮಾಜಿಕ ಕಾರ್ಯಕರ್ತರ ನೆರವು ಪಡೆದು ಅಂತ್ಯಸಂಸ್ಕಾರ ನಡೆಸುವ ಅನಿವಾರ್ಯ ಈ ಅಸಹಾಯಕ ವೃದ್ಧನದಾಯಿತು.
ಎಚ್. ವೀಣಾ ಶಾನುಭಾಗ್ (69) ಮೃತ ಮಹಿಳೆ. ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಪತಿ ಎಚ್. ಶ್ರೀನಿವಾಸ್ ಶಾನುಭಾಗ್ (79) ನೋಡಿಕೊಳ್ಳುತ್ತಿದ್ದರು. ಈ ದಂಪತಿಗೆ ನೆರವು ಕೋರಿದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತ ಕೆ. ರಾಘವೇಂದ್ರ ಕಿಣಿ ಅವರು ದಂಪತಿಯನ್ನು ಸಂಪರ್ಕಿಸಿ ನೆರವಾದರು. ದಂಪತಿ ಚಿಟ್ಪಾಡಿ ಭಾಗ್ಯಮಂದಿರದ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ಮಗಳು ಬಿಎಡ್ ಮುಗಿಸಿ ಸಾಗರದಲ್ಲಿದ್ದಾರೆ. ಮಗ ಬಿಇ, ಎಂಟೆಕ್ ಮುಗಿಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಇದ್ದಾರೆ. ಆದರೆ ಆನೇಕ ವರ್ಷಗಳಿಂದ ಹೆತ್ತವರ ಸಂಪರ್ಕದಲ್ಲಿಲ್ಲ. ಗುರುವಾರ ವೀಣಾ ಮೃತಪಟ್ಟಿದ್ದು, ಅಂತ್ಯಕ್ರಿಯೆ ನಡೆಸಲು ಪರದಾಡುತ್ತಿದ್ದ ಶ್ರೀನಿವಾಸ್ ಅವರಿಗೆ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಕಿಣಿ, ಮಂಜುನಾಥ ನಿಟ್ಟೂರು, ಕಿಶೋರ್ ಕುಮಾರ್ ಕರಂಬಳ್ಳಿ, ಮಂಜುನಾಥ ಹೆಬ್ಟಾರ್ ಅವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.