ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ: ಸಿಎಂ ಸಿದ್ದರಾಮಯ್ಯ
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಸೂಚನೆ
Team Udayavani, Aug 1, 2023, 1:42 PM IST
ಉಡುಪಿ: ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು , ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಪರಾಮರ್ಶೆ ನಡೆಸಲು ಒಂದು ದಿನದ ಮಟ್ಟಿಗೆ ಉಡುಪಿ ಹಾಗೂ ಮಂಗಳೂರಿಗೆ ಆಗಮಿಸಿದ ಮಾತನಾಡಿದ ಅವರು ಕರಾವಳಿ ಭಾಗದ ಕಡಲ ತೀರದಲ್ಲಿ ಸಾಕಷ್ಟು ಕಾಮಗಾರಿಗಳು ನೆಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಇವೆ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿಬ್ಬಂದಿಗಳ ವೇತನ ಬಿಡುಗಡೆಗೆ ಸೂಚನೆ:
ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು.
ಬಳಿಕ ಮುಖ್ಯಮಂತ್ರಿ ಅವರು ಉಡುಪಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಳು ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮತ್ತಿತರರು ಇದ್ದರು.
ಇದನ್ನೂ ಓದಿ: ಆ.2ರಂದು ಮಣಿಪುರ ಹಿಂಸಾಚಾರ ಖಂಡಿಸಿ ಉಡುಪಿ ಸಮಾನ ಮನಸ್ಕರ ವೇದಿಕೆಯಿಂದ ಪ್ರತಿಭಟನೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.