ಉಡುಪಿಗೂ ಬಡಿಯಿತೂ ಕೋವಿಡ್ ಸಿಡಿಲು: ಐದು ಜನರಿಗೆ ಕೋವಿಡ್ ಸೋಂಕು ದೃಢ
Team Udayavani, May 15, 2020, 12:10 PM IST
ಉಡುಪಿ: ಕಳೆದೊಂದು ತಿಂಗಳಿನಿಂದ ಯಾವುದೇ ಕೋವಿಡ್-19 ಸೋಂಕು ಪ್ರಕರಣವಿಲ್ಲದೆ ನಿರಾತಂಕದಲ್ಲಿದ್ದ ಉಡುಪಿ ಜಿಲ್ಲೆಗೆ ಇಂದು ಕೋವಿಡ್ ಸಿಡಿಲು ಬಡಿದಿದೆ. ಕಾರಣ ಇಂದು ಒಂದೇ ದಿನ ಐದು ಜನರಿಗೆ ಸೋಂಕು ದೃಢವಾಗಿದೆ.
ದುಬೈನಿಂದ ಮೇ 15ರಂದು ಆಗಮಿಸಿದ ಪೈಕಿ ಉಡುಪಿ ಜಿಲ್ಲೆಯ ಆರು ಮಂದಿಯಲ್ಲಿ ಕೋವಿಡ್-19 ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೊಬ್ಬರಿಗೂ ಸೋಂಕು ಶಂಕೆ ವ್ಯಕ್ತವಾಗಿದೆ.
ಕೋವಿಡ್-19 ಕಾರಣಕ್ಕಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನುಮರಳಿ ಭಾರತಕ್ಕೆ ತರುವ ಕಾರ್ಯಾಚರಣೆಯಡಿ 176 ಮಂದಿ ಮಂಗಳವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದಲ್ಲಿ ಬಂದಿಳಿದಿದ್ದರು.
ಈ ಪೈಕಿ ಉಡುಪಿ ಜಿಲ್ಲೆಗೆ ಸೇರಿದ 49 ಮಂದಿಯನ್ನು ಜಿಲ್ಲೆಯ ಹೊಟೇಲ್ ನಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಇವರ ಗಂಟಲದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.ಅದರ ವರದಿ ಇಂದು ಬಂದಿದೆ. ಈ ಹಿನ್ನಲೆಯಲ್ಲಿ ಐದು ಮಂದಿಯನ್ನು ಅವರು ಉಳಿದುಕೊಂಡಿರುವ ಹೊಟೇಲ್‌ನಿಂದ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.