ಪರಿಹಾರ: ಜೂ. 15ರ ಮೊದಲು ಅರ್ಜಿ ಸಲ್ಲಿಸಿ
Team Udayavani, Jun 5, 2020, 5:32 AM IST
ಉಡುಪಿ: ಕೋವಿಡ್-19 ಕಾರಣ ಲಾಕ್‌ಡೌನ್‌ನಿಂದ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್‌ಗೆ 15 ಸಾವಿರ ರೂ. ಪರಿಹಾರವನ್ನು ಗರಿಷ್ಠ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಬಾಳೆ, ಅನಾನಸು, ಕಲ್ಲಂಗಡಿ, ಕರಬೂಜ ಬೆಳೆಗಳಿಗೆ ಪರಿಹಾರ ನೀಡಲು ಅವಕಾಶ ಕಲ್ಲಿಸಲಾಗಿರುತ್ತದೆ. ಅನಾನಸು ಬೆಳೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಪರಿಹಾರವನ್ನು ವಿತರಿಸಲಾಗುವುದು. ಆಯ್ಕೆಯಾಗುವ ರೈತರ ಪಟ್ಟಿಯನ್ನು ತೋಟಗಾರಿಕೆ ಇಲಾಖೆಯ ತಾಲೂಕು ಕಚೇರಿ, ತಹಶೀಲ್ದಾರರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗ್ರಾ.ಪಂ.ಗಳಲ್ಲಿ ಪ್ರಕಟಿಸಲಾಗುವುದು.
ಕೋವಿಡ್-19ರಿಂದಾಗಿ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ 2020ನೇ ಮಾರ್ಚ್ ತಿಂಗಳ ಕೊನೆಯ ವಾರದಿಂದ ಮೇ ತಿಂಗಳವರೆಗೆ ಬಾಳೆ (ಅಂತರ ಬೆಳೆ ಹಾಗೂ ಕೈತೋಟ ಬೆಳೆ ಹೊರತುಪಡಿಸಿ ವಾಣಿಜ್ಯ ಬೆಳೆಯಾಗಿ ಬೆಳೆದಿರುವ ರೈತರು), ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟ ಅನುಭವಿಸಿರುವ ರೈತರು ಅರ್ಜಿ ನಮೂನೆಗಳನ್ನು ಇಲಾಖಾ ಕಚೇರಿಗಳಿಂದ ಪಡೆದು, ಭರ್ತಿ ಮಾಡಿ, ಪಹಣಿ, ಆಧಾರ್‌ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸ್ವಯಂ ದೃಢೀಕರಣ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ಜೂ. 15ರ ಒಳಗೆ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಅರ್ಜಿದಾರರ ಸ್ಥಳ ಪರಿಶೀಲನೆಯನ್ನು ಜಂಟಿ ಪರಿಶೀಲನ ತಂಡದಿಂದ ಕೈಗೊಂಡು ನಿಯಮಾನುಸಾರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತದೆ.
ಮಾನದಂಡಗಳು
2020ನೇ ಮಾರ್ಚ್ 2ನೇ ವಾರದ ಅನಂತರ ಕಟಾವಿಗೆ ಬಂದಿರುವ ಫಸಲಿಗೆ ಮಾತ್ರ ಪರಿಹಾರಧನವನ್ನು ವಿತರಿಸಲಾಗುವುದು. ಈ ಬಗ್ಗೆ ರೈತರು ಸ್ವಯಂ ದೃಢೀಕರಣ/ಮುಚ್ಚಳಿಕೆ ನೀಡಬೇಕು. ಪರಿಹಾರ ಪಾವತಿಸುವ ರೈತರ ಹೆಸರಿನಲ್ಲಿ ಜಮೀನು ಹೊಂದಿರತಕ್ಕದ್ದು. ಜಂಟಿ ಖಾತೆಗಳಾಗಿದ್ದಲ್ಲಿ ಇತರ ಖಾತೆದಾರರ ಒಪ್ಪಿಗೆ ಪತ್ರ ಸಲ್ಲಿಸಬೇಕು. ಮಹಿಳಾ ಖಾತೆದಾರರಿದ್ದಲ್ಲಿ ಮಹಿಳೆಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು. ಮಾರ್ಚ್ 4ನೇ ವಾರದ ಅನಂತರ ನಾಟಿ ಮಾಡಿದ ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳು ಪರಿಹಾರಕ್ಕೆ ಅರ್ಹವಿರುವುದಿಲ್ಲ ಎಂದು ಜಿÇÉಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಇಲ್ಲಿಗೆ ಸಂಪರ್ಕಿಸಿ
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು (ಜಿ.ಪಂ.), ಉಡುಪಿ: 0820-2531950 ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820-2522837 ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕುಂದಾಪುರ ತಾಲೂಕು: 08254-230813 ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಾರ್ಕಳ ತಾಲೂಕು: 08258-230288 ಇವರನ್ನು ಸಂಪರ್ಕಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.