Kaup ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಿಸಿದ ಆದ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ
ಇದು ಬರೇ ಕಲ್ಲಲ್ಲ ಭಕ್ತಿ - ಭಾವದ ಸಂಕೇತ
Team Udayavani, Feb 20, 2024, 4:00 PM IST
ಕಾಪು: ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಫೆ. 20 ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪು ಮಾರಿಯಮ್ಮನ ದರ್ಶನ ಪಡೆದು, ಕಾಪು ಶಾಸಕ ಮತ್ತು ದೇವಳದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ ಅವರಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ನಂತರ ದಕ್ಷಿಣ ಭಾರತದ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ನಿರ್ಮಾಣಗೊಳ್ಳುತ್ತಿರುವ ಇಳಕಲ್ಲ್ ಕೆಂಪು ಶಿಲೆಯ ದೇಗುಲದ ಕಾಮಗಾರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಭಿವೃದ್ಧಿ ಸಮಿತಿ ಹಲವಾರು ಶತಮಾನಗಳ ಕಾಲ ಉಳಿಯುವ ಕಾರ್ಯವನ್ನು ಮಾಡುತ್ತಾ ಇದ್ದೀರಿ, ಭಾರತದಲ್ಲಿ ಆದ್ಯಾತ್ಮಿಕತೆಗೆ ಒಂದು ಹೊಸ ಉತ್ಸಾಹ, ಹುರುಪು ಬಂದಿದೆ ಕೆಂಪು ಕಲ್ಲಿನಲ್ಲಿ ಇಷ್ಟು ಸುಂದರವಾಗಿ ದೇವಸ್ಥಾನ ನಿರ್ಮಾಣ ಆಗ್ತಾ ಇದೆ, ಇದು ಬರೇ ಕಲ್ಲಲ್ಲ, ಕಲ್ಲಿನೊಂದಿಗೆ ಭಕ್ತಿ – ಭಾವ ತುಂಬಿ ಮಾಡಿದ್ದೀರಿ, ಎಲ್ಲರೂ ಸೇರಿ ಹೃದಯದಿಂದ ಕೆಲಸ ಮಾಡಿದರೆ ದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ, ದಿನನಿತ್ಯ ಇಲ್ಲಿ ಚಮತ್ಕಾರಗಳು ನಡೆಯುತ್ತಲೇ ಇರುತ್ತದೆ, ಇಲ್ಲಿಗೆ ಬರುವ ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ, ಭಕ್ತರು ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ಈಗಾಗಲೇ ಕೆಲಸಗಳು ಕಾಣುತ್ತವೆ, ಇನ್ನು ಹೆಚ್ಚಿನ ಅಭಿವೃದ್ಧಿಗೊಂಡು ಕ್ಷೇತ್ರದಿಂದ ಜನರಿಗೆ ಅರೋಗ್ಯ ಮತ್ತು ಮನಸಿನಲ್ಲಿ ಉತ್ಸಾಹ ಉಂಟಾಗಲಿ ಎಂದು ಹಾರೈಸಿದರು.
ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರುಗಳಾದ ಲಾಲಾಜಿ ಆರ್. ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್ , ಮನೋಹರ ಎಸ್. ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರುಗಳಾದ ಚಂದ್ರಶೇಖರ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ, ಬಾಬು ಮಲ್ಲಾರ್, ಗೌರವ ಸಲಹೆಗಾರರಾದ ನಿರ್ಮಲ್ ಕುಮಾರ್ ಹೆಗ್ಡೆ, ಮಾಜಿ ಸದಸ್ಯ ಶೇಖರ್ ಸಾಲ್ಯಾನ್, ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಮೋಹನ್ ಎಂ ಬಂಗೇರ, ಗುರ್ಮೆ ಹರೀಶ್ ಶೆಟ್ಟಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೋಲ್ಯ, ಕಟ್ಟಡ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ಜೀರ್ಣೋದ್ಧಾರದ ಮುಂಬೈ ಸಮಿತಿಯ ಕಾರ್ಯದರ್ಶಿ ಸದಾಶಿವ ಎ. ಕರ್ಕೇರ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್. ಮುಖ್ಯ ಸಂಚಾಲಕರಾದ ಸುನಿಲ್. ಎಸ್. ಪೂಜಾರಿ, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ ಆಚಾರ್ಯ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಶ್ರೀಧರ ಕಾಂಚನ್, ದಿವಾಕರ್ ಶೆಟ್ಟಿ ಮಲ್ಲಾರ್, ಪ್ರಭಾತ್ ಶೆಟ್ಟಿ ಮೂಳೂರು, ಉದಯ ಶೆಟ್ಟಿ ಭಾರ್ಗವ, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಶೈಲಪುತ್ರಿ ತಂಡದ ಸಂಚಾಲಕರಾದ ರಾಧಾರಮಣ ಶಾಸ್ತ್ರೀ, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ.ಶೆಟ್ಟಿ, ಸಂಚಾಲಕರುಗಳಾದ ಶಾಂತಲತಾ ಸುಬ್ರಹ್ಮಣ್ಯ ಶೆಟ್ಟಿ, ಶೋಭಾ ರಮೇಶ್ ಶೆಟ್ಟಿ, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಅನುರಾಧ ಮನೋಹರ್ ಶೆಟ್ಟಿ, ಕವಿತಾ ಶೆಟ್ಟಿ, ವನಿತಾ ಶೆಟ್ಟಿ, ಅನಿತಾ ಹೆಗ್ಡೆ, ಪ್ರತಿಭಾ ಯು. ಶೆಟ್ಟಿ, ಸುನೀತಾ ಶೆಟ್ಟಿ, ದೀಪಿಕಾ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ರೇಣುಕಾ ಜೋಗಿ, ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.