SSLC ಪರೀಕ್ಷೆ: 14,022 ವಿದ್ಯಾರ್ಥಿಗಳು ಸಜ್ಜು : ಈ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ
ಉಡುಪಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರ
Team Udayavani, Mar 26, 2022, 2:22 PM IST
ಉಡುಪಿ : ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಮಾ. 28ರಿಂದ ಎ.11ರ ವರೆಗೆ ಸುಗಮವಾಗಿ ಪರೀಕ್ಷೆ ನಡೆಸಲು ಬೇಕಿರುವ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ.
2 ಖಾಸಗಿ ಕೇಂದ್ರ ಸಹಿತವಾಗಿ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಠಡಿ ಮೇಲ್ವಿಚಾರಕರು, ವಿಚಕ್ಷಣದ ದಳ ಸಿಬಂದಿ ನಿಯೋಜನೆಯೂ ಪೂರ್ಣಗೊಂಡಿದೆ. ಜಿಲ್ಲೆಯ 266 ಪ್ರೌಢಶಾಲೆಯ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 13,672 ಹೊಸ ಹಾಗೂ 350 ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಇದ್ದಾರೆ.
ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಡೆಸ್ಕ್ ಮೇಲೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಇರಲಿದೆ.
ಜತೆಗೆ ಕೊಠಡಿಯ ಬೋರ್ಡ್‌ನಲ್ಲೂ ನೋಂದಣಿ ಸಂಖ್ಯೆಯ ಕ್ರಮಾಂಕ ಬರೆಯಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಆಗದಂತೆ ಕೊಠಡಿ ಮಾರ್ಗಸೂಚಕ ಹಾಗೂ ಮಾಹಿತಿ ನೀಡಲು ಸಿಬಂದಿಯೂ ಇರುತ್ತಾರೆ.
ಇದನ್ನೂ ಓದಿ : ಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನ ಸಲಾಂ ಆರತಿ ನಿಲ್ಲಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
ಕೊರೊನಾ ಮುಂಜಾಗೃತಿ
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವಿದ್ಯಾರ್ಥಿಯಿಲ್ಲ. ಆದರೂ, ಪರೀಕ್ಷಾ ಕೇಂದ್ರವನ್ನು ಸಂಪೂರ್ಣವಾಗಿ ಸುರಕ್ಷಿತವಾಗಿಡಲು ಸ್ಯಾನಿಟೈಸೇಷನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ, ಮೇಲ್ವಿಚಾರಕರಿಗೆ ಹಾಗೂ ಭದ್ರತಾ ಸಿಬಂದಿ ಸಹಿತ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಎಲ್ಲ ಕೇಂದ್ರದಲ್ಲೂ ವಿಶೇಷ ಕೊಠಡಿ ಇರುತ್ತದೆ. ಆರೋಗ್ಯ ತಪಾಸಣೆ, ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ದಿಢೀರ್ ಅಸ್ವಸ್ಥತೆಗೆ ಒಳಗಾದ ವಿದ್ಯಾರ್ಥಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.
ಯಾವುದಕ್ಕೆಲ್ಲ ಅವಕಾಶವಿಲ್ಲ?
ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್, ಸ್ಮಾರ್ಟ್ ವಾಚ್, ಕೆಮರಾ, ಅತ್ಯಾಧುನಿಕ ಕ್ಯಾಲ್ಕುಲೇಟರ್ ಸಹಿತವಾಗಿ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.
ಸಕಲ ವ್ಯವಸ್ಥೆ
ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಪರೀಕ್ಷಾ ದಿನ ಗ ಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
-ಗೋವಿಂದ ಮಡಿವಾಳ, ಡಿಡಿಪಿಐ, ಉಡುಪಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ವಿದ್ಯಾರ್ಥಿಗಳು ಇಲ್ಲ. ಆದರೆ, ಎಲ್ಲ ಕೇಂದ್ರದಲ್ಲೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿದೆ.
– ಜಾಹ್ನವಿ ಸಿ., ಎಸೆಸೆಲ್ಸಿ ಜಿಲ್ಲಾ ನೋಡಲ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.