ತ್ಯಾಜ್ಯ ಸುರಿಯುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆ
ಉಚ್ಚಿಲ - ಪಣಿಯೂರು ರಸ್ತೆ ಬದಿಯ ತ್ಯಾಜ್ಯಕ್ಕೆ ಮುಕ್ತಿ
Team Udayavani, Nov 28, 2019, 4:27 AM IST
ಕಾಪು: ಉಚ್ಚಿಲ – ಪಣಿಯೂರು ರಸ್ತೆಯಲ್ಲಿ ಸಂಚರಿಸುವ ನಾಗರಿಕರಲ್ಲಿ ಅಸಹ್ಯ ಮೂಡಿಸುತ್ತಿದ್ದ ತ್ಯಾಜ್ಯದ ರಾಶಿಯನ್ನು ವಿಲೇವಾರಿಗೊಳಿಸಲು ಬಡಾ ಗ್ರಾ. ಪಂ. ಕ್ರಮ ತೆಗೆದುಕೊಂಡಿದೆ. ಮಾತ್ರವಲ್ಲದೇ ಈ ಪ್ರದೇಶಗಳಲ್ಲಿ ಮುಂದೆ ಕಸ ತಂದು ಎಸೆಯುವವರ ವಿರುದ್ಧ ಕಠಿನ ಕ್ರಮಕ್ಕೆ ಮುಂದಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಜಂಕ್ಷನ್‌ನಿಂದ ಪಣಿಯೂರಿಗೆ ತೆರಳುವ ಪಿಡಬ್ಲ್ಯೂಡಿ ರಸ್ತೆಯ ಇಕ್ಕೆಲಗಳ ಚರಂಡಿಗಳಲ್ಲಿ ಸ್ಥಳೀಯ ಬಡಾ ಗ್ರಾ.ಪಂ. ವ್ಯಾಪ್ತಿಯ ನಿವಾಸಿಗಳು ಮಾತ್ರವಲ್ಲದೇ ಪಣಿಯೂರು, ಎಲ್ಲೂರು ಮತ್ತು ಬೆಳಪು ಕಡೆಯಿಂದ ಸಂಚರಿಸುತ್ತಿದ್ದ ವಾಹನ ಸವಾರರು ಕೂಡಾ ಇಲ್ಲಿನ ರಸ್ತೆಯ ಇಕ್ಕೆಲಗಳಲ್ಲಿರುವ ಚರಂಡಿಗೆ ಕಸ-ತ್ಯಾಜ್ಯ ವಸ್ತುಗಳನ್ನು ಎಸೆದು ಹೋಗುತ್ತಿದ್ದರು.
ಇದರಿಂದಾಗಿ ಉಚ್ಚಿಲ – ಪಣಿಯೂರು ರಸ್ತೆಯು ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗವನ್ನು ಹರಡುವ ರೋಗ ಉತ್ಪದನಾ ಘಟಕವಾಗಿಯೂ ಮಾರ್ಪಡುವಂತಾಗಿತ್ತು. ಈ ಬಗ್ಗೆ ಉದಯವಾಣಿಯಲ್ಲಿ ವಿಶೇಷ ಲೇಖನ ಪ್ರಕಟಿಸಿ ಕಸ – ತ್ಯಾಜ್ಯ ವಿಲೇವಾರಿ ಬಗ್ಗೆ ಗ್ರಾಮ ಪಂಚಾಯತ್‌ನ್ನು ಎಚ್ಚರಿಸುವ ಮತ್ತು ಕಸ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನೂ ಮಾಡಿತ್ತು.
ತ್ಯಾಜ್ಯ ತೆರವಿಗೆ ಕ್ರಮ
ಇದೀಗ ಬಡಾ ಗಾ.ಪಂ. ಸ್ಥಳೀಯ ತ್ಯಾಜ್ಯ ವಿಲೇವಾರಿಯ ಗುತ್ತಿಗೆದಾರರ ಮೂಲಕ ಉಚ್ಚಿಲ-ಪಣಿಯೂರು ರಸ್ತೆಯ ಇಕ್ಕೆಲಗಳಲ್ಲಿ ಸುರಿಯಲಾಗಿದ್ದ ತ್ಯಾಜ್ಯವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿಸಿದೆ. ಕಸವನ್ನು ಶುಚಿಗೊಳಿಸಿ, ಚರಂಡಿಯನ್ನು ಬಿಡಿಸಿಕೊಟ್ಟಿರುವುದು ಮಾತ್ರವಲ್ಲದೇ ರಸ್ತೆಗೆ ಅಡ್ಡವಾಗಿ ಚಾಚಿದ್ದ ಗಿಡ – ಮರಗಳ ಗೆಲ್ಲುಗಳನ್ನೂ ತೆರವುಗೊಳಿಸಿದೆ.
ಸಿಸಿ ಕ್ಯಾಮರಾ ಅಳವಡಿಕೆಗೆ ಚಿಂತನೆ
ತ್ಯಾಜ್ಯ ತೆರವಿನ ಬಳಿಕ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕಠಿನ ಕ್ರಮಕ್ಕೆ ಮುಂದಾಗಿರುವ ಗ್ರಾಮ ಪಂಚಾಯತ್ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ, ತ್ಯಾಜ್ಯ ತಂದು ಎಸೆಯುವವರನ್ನು ಪತ್ತೆ ಹಚ್ಚಲು ಮುಂದಾಗಿದೆ. ಇದಕ್ಕಾಗಿ ಉಚ್ಚಿಲ ಪಣಿಯೂರು ರಸ್ತೆ, ಎನ್.ಎಚ್. 66 ಮತ್ತು ರಾಘವೇಂದ್ರ ಮಠದ ಬಳಿಯ ಪ್ರದೇಶವನ್ನು ಗೊತ್ತುಪಡಿಸಲಾಗಿದೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕುಶಾಲಿನಿ ತಿಳಿಸಿದ್ದಾರೆ.
ತ್ಯಾಜ್ಯ ಎಸೆದವರಿಗೆ ದಂಡ ; ಹಿಡಿದು ಕೊಟ್ಟವರಿಗೆ ಬಹುಮಾನ
ಮಾತ್ರವಲ್ಲದೇ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿರುವಂತೆ ತ್ಯಾಜ್ಯ ಎಸೆದವರಿಗೆ 2 ಸಾವಿರ ರೂ. ದಂಡ ಮತ್ತು ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿ ಕೊಟ್ಟವರಿಗೆ 1 ಸಾವಿರ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಂಘ ಸಂಸ್ಥೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಪಂಚಾಯತ್ ಮೂಲಕ ನಡೆಯುತ್ತಿದೆ.
ಕಂದಾಯ ಇಲಾಖೆಗೆ ಮನವಿ
ಗ್ರಾಮ ಪಂಚಾಯತ್ ನಿಗದಿ ಪಡಿಸಿದ ಸ್ಥಳದಲ್ಲಿ ತ್ಯಾಜ್ಯ ವಿಲೇ ಮಾಡಲು ಕೆಲವೊಂದು ತೊಡಕುಗಳಿದ್ದು, ಅದನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಬಗ್ಗೆ ಬೆಳಪು ಗ್ರಾಮದಲ್ಲಿನ ಸರಕಾರಿ ಭೂಮಿಯನ್ನು ಗೊತ್ತುಪಡಿಸಿ, ಅಲ್ಲಿ ಮೂರು ಗ್ರಾಮಗಳನ್ನು ಸೇರಿಸಿಕೊಂಡು ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಲು ಜಾಗ ನೀಡುವಂತೆ ಕಂದಾಯ ಇಲಾಖೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಬಡಾ ಗ್ರಾಮ ಪಂಚಾಯತ್ ಕೂಡಾ ಬೆಂಬಲ ನೀಡಿದೆ. ಈ ಬಗ್ಗೆ ಮುಂದಿನ ತಿಂಗಳು ಸಭೆ ನಡೆಸಿ ಚರ್ಚಿಸಲಿದ್ದೇವೆ
-ಕುಶಾಲಿನಿ, ಪಿಡಿಒ, ಬಡಾ ಗ್ರಾಮ ಪಂಚಾಯತ್
ಕಠಿನ ಕ್ರಮ
ಉಚ್ಚಿಲ – ಪಣಿಯೂರು ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ಗ್ರಾಮದ ನೈರ್ಮಲ್ಯಕ್ಕೆ ಕುಂದುಂಟಾಗುತ್ತಿದೆ. ಕಸ ಎಸೆಯುವವರ ವಿರುದ್ಧ ಗ್ರಾ. ಪಂ. ಕಠಿನ ಕ್ರಮಕ್ಕೆ ಮುಂದಾಗಿದೆ. ಪಣಿಯೂರು ರಸ್ತೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ವಿಲೇ ಮಾಡಲಾಗಿದೆ. ಮುಂದೆ ಇಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಗೂಡಂಗಡಿ ಹಾಕಿಸಿ ಅವರ ಮೂಲಕ ತ್ಯಾಜ್ಯ ತಂದು ಸುರಿಯುವವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುವುದು.
-ರಫೀಕ್ ದೀವ್, ಸದಸ್ಯರು, ಬಡಾ ಗ್ರಾ. ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.