ಮಳೆಹಾನಿ: ಮುನ್ನೆಚ್ಚರಿಕೆ ವಹಿಸಿ ಕಂದಾಯ ಸಚಿವ ಆರ್. ಅಶೋಕ್ ಸೂಚನೆ
Team Udayavani, Aug 8, 2020, 8:51 AM IST
ಪಡುಬಿದ್ರಿ: ಕಂದಾಯ ಸಚಿವ ಅಶೋಕ್ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಉಡುಪಿ: ಜಿಲ್ಲೆಯಲ್ಲಿ ಮಳೆಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಸಹಿತ ಸಾವು ನೋವುಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಅನಾಹುತಗಳು ಸಂಭವಿಸಿರುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದ ಸಚಿವರು ಪ್ರಾಕೃತಿಕ ವಿಕೋಪ ತಡೆಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚಿಸಿ, ನೋಡೆಲ್ ಅಧಿಕಾರಿಗಳನ್ನು ನೇಮಿಸುವಂತೆ ಸೂಚಿಸಿದರು.
ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿದರು.
ಎಸ್‌ಡಿಆರ್‌ಎಫ್ ಕೇಂದ್ರಕ್ಕೆ ಮನವಿ
ರಾಜ್ಯ ಸರಕಾರದಿಂದ ನೀಡಲಾಗುವ ಹೊಸ ಎಸ್‌ಡಿಆರ್‌ಎಫ್ ತಂಡವನ್ನು ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಕೃತಗೊಳಿಸಿದರೆ ತುರ್ತು ಸಂದರ್ಭದಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಇಲ್ಲಿಂದ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು.
39 ಕೋಟಿ ರೂ. ನಷ್ಟ
ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಮಳೆಯಿಂದಾಗಿ ಸುಮಾರು 39 ಕೋ.ರೂ. ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿ
ಜಿಲ್ಲೆಯಲ್ಲಿ 13 ಕಡೆ ಗುರುತಿಸಲಾದ ಕಡಲ್ಕೊರೆತವನ್ನು ತಡೆಯಲು ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಬಾರಿ ಮನೆ ಹಾನಿಯದವರಿಗೆ ಮನೆ ನಿರ್ಮಿಸಲು 2 ಮತ್ತು 3ನೇ ಹಂತದ ಅನುದಾನ ಶೀಘ್ರ ಬಿಡುಡೆಗೆ ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.