ನಾಡಿನ ವಿವಿಧೆಡೆ ಭಕ್ತರಿಗೆ ತಪ್ತಮುದ್ರಾಧಾರಣೆ
Team Udayavani, Jul 13, 2019, 10:04 AM IST
ಉಡುಪಿ/ಮಂಗಳೂರು: ಉಡುಪಿ ಶ್ರೀಕೃಷ್ಣ ಮಠವೂ ಸೇರಿದಂತೆ ನಾಡಿನ ವಿವಿಧೆಡೆಗಳಲ್ಲಿ ವಿವಿಧ ಮಠಾಧೀಶರು ಶುಕ್ರವಾರ ಪ್ರಥಮನ ಏಕಾದಶಿಯಂದು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು.
ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಬೇಗ ಮಹಾ ಪೂಜೆಯನ್ನು ಪೂರೈಸಿದ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮತ್ತು ಶ್ರೀ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಶ್ರೀಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅಪರಾಹ್ನದವರೆಗೆ ಸಾವಿರಾರು ಭಕ್ತರಿಗೆ ನಿರಂತರ ಮುದ್ರಾಧಾರಣೆ ನಡೆಸಿದರು. ಮಧ್ಯಾಹ್ನದ ಅನಂತರ ಜನಸಂದಣಿ ಕಡಿಮೆಯಾಯಿತಾದರೂ ಸಂಜೆವರೆಗೂ ಮತ್ತು ರಾತ್ರಿ ಪೂಜೆ ಸಮಯದಲ್ಲಿ ಮತ್ತೆ ತಪ್ತ ಮುದ್ರಾಧಾರಣೆ ನಡೆಸಿದರು.
ಮುದ್ರಾಧಾರಣೆಗಾಗಿ ಬಂದವರ ಸರತಿ ಸಾಲು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ರಥಬೀದಿಯಲ್ಲಿ ಕಾಣಿಯೂರು ಮಠದವರೆಗೂ ಇತ್ತು. ಮುದ್ರಾಧಾರಣೆ ಮಾಡುವ ಮುನ್ನ ವೈದಿಕರು ಸುದರ್ಶನ ಹೋಮ ನಡೆಸಿದರು. ಅದರಲ್ಲಿ ಬಿಸಿ ಮಾಡಿದ ಶಂಖ ಚಕ್ರಗಳ ಚಿಹ್ನೆಗಳನ್ನು ಮಠಾಧೀಶರು ಭಕ್ತರ ತೋಳಿನಲ್ಲಿ ಮುದ್ರಿಸಿದರು.
ಶ್ರೀ ಅದಮಾರು ಮಠಾಧೀಶರು ಪೆರ್ಡೂರು ದೇವಸ್ಥಾನ, ಉಡುಪಿ ಅದಮಾರು ಮಠದಲ್ಲಿ, ಶ್ರೀ ಸುಬ್ರಹ್ಮಣ್ಯ ಮಠಾಧೀಶರು ಉಜಿರೆ ಜನಾರ್ದನ ದೇವಸ್ಥಾನ, ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನ, ಪುತ್ತೂರು ಕೆಮ್ಮಿಂಜೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಮಠದಲ್ಲಿ, ಬಾಳೆಗಾರು ಶ್ರೀಗಳು ಕ್ರಮವಾಗಿ ಕೊಡವೂರು ಕಂಗೂರು ಮಠ, ಪಡುಬಿದ್ರಿ, ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನ, ಮಂಗಳೂರು ನೆಲ್ಲಿಕಾಯಿ ರಾಘವೇಂದ್ರ ಮಠ, ಬನ್ನಡ್ಕ ರಾಘವೇಂದ್ರ ಮಠ, ಅಜೆಕಾರು, ಪಲಿಮಾರು ಮಠದಲ್ಲಿ ಮುದ್ರಾ
ಧಾರಣೆ ನಡೆಸಿದರು. ಸುರತ್ಕಲ್ ಸಮೀಪದ ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರಾಪುರ ಮಠಾಧೀಶರು ಮುದ್ರಾಧಾರಣೆ ನಡೆಸಿದರು.
ಪುತ್ತೂರು ತಾಲೂಕು ಉಪ್ಪಿನಂಗಡಿ ಸಮೀಪದ ಎರ್ಕಿ ಮಠದಲ್ಲಿ ಅರ್ಚಕ ವೇ|ಮೂ| ನರಹರಿ ಉಪಾಧ್ಯಾಯ ಅವರು ತಂದೆ ವೆಂಕಟರಮಣ ಉಪಾಧ್ಯಾಯರ ನಿಧನಾನಂತರ ಮೊದಲ ಬಾರಿಗೆ ಮುದ್ರಾಧಾರಣೆ ನಡೆಸಿದರು. ಗೃಹಸ್ಥರು ಮುದ್ರಾಧಾರಣೆ ನಡೆಸುವ ಸ್ಥಳ ಇದು ಮಾತ್ರ ಆಗಿರುವ ಕಾರಣ ಬೆಂಗಳೂರಿನಿಂದಲೂ ಕೆಲವು ಭಕ್ತರು ಆಗಮಿಸಿದ್ದರು.
ಬೆಂಗಳೂರು, ಮೈಸೂರು ಮೊದಲಾದೆಡೆ ಮಠಾಧೀಶರು ವಿವಿಧೆಡೆ ಮುದ್ರಾಧಾರಣೆ ನಡೆಸಿದರು. ಹಲವು ದೇವಸ್ಥಾನಗಳಲ್ಲಿ ನಿರಂತರ ಭಜನೆ, ಪೂಜಾದಿಗಳು ನಡೆದವು. ವಿವಿಧೆಡೆ ಶನಿವಾರವೂ ಮುದ್ರಾಧಾರಣೆ ನಡೆಯಲಿದೆ.
ಸರ್ವಜ್ಞ ಪೀಠದಲ್ಲಿ ಮೊದಲ ಬಾರಿ ಮುದ್ರಾಧಾರಣೆ
ಇದೇ ಮೊದಲ ಬಾರಿಗೆ ಶ್ರೀ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಸರ್ವಜ್ಞ ಸಿಂಹಾಸನದಲ್ಲಿದ್ದು ಮುದ್ರಾಧಾರಣೆ ನಡೆಸಿದರು. ಗರ್ಭಗುಡಿ ಆವರಣದಲ್ಲಿ ಅದಮಾರು ಮತ್ತು ಪಲಿಮಾರು ಕಿರಿಯ ಶ್ರೀಗಳು ಮುದ್ರಾಧಾರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.