‘ಯುವ ಸಮುದಾಯವನ್ನು ಕೃಷಿಯತ್ತ ಆಕರ್ಷಿಸಿ’


Team Udayavani, Jan 4, 2019, 7:19 AM IST

4-january-9.jpg

ತೆಕ್ಕಟ್ಟೆ : ಗ್ರಾಮೀಣ ಭಾಗದಲ್ಲಿ ಜಾನುವಾರು ಪ್ರದರ್ಶನಗಳು ಹೆಚ್ಚು ಹೆಚ್ಚು ನಡೆದಾಗ ಹೈನುಗಾರರು ಹಾಗೂ ಕೃಷಿಕರಿಗೆ ಪ್ರೋತ್ಸಾಹ ಸಿಗುತ್ತದೆ. ಈ ನಿಟ್ಟಿನಲ್ಲಿ ಯುವ ಸಮುದಾಯಗಳನ್ನು ಕೃಷಿ ಚಟುವಟಿಕೆಯತ್ತ ಆಕರ್ಷಿಸುವ ಮಹತ್ವದ ಕಾರ್ಯವಾಗಬೇಕಾಗಿದೆ. ಹೈನುಗಾರಿಕೆಯನ್ನೇ ಅವಲಂಬಿಸಿರುವ ಕುಟುಂಬಗಳಿಗೆ ಹೆಚ್ಚಿನ ಲಾಭದಾಯಕ ಉದ್ಯಮವನ್ನಾಗಿಸಲು ಮಾಹಿತಿ ಹಾಗೂ ಅರಿವಿನ ಅಗತ್ಯವಿದೆ ಎಂದು ಜಿ.ಪಂ. ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ ಅವರು ಹೇಳಿದರು.

ಅವರು ಜ.2 ಬುಧವಾರದಂದು ಕೆದೂರು ಗ್ರಾಮ ಪಂಚಾಯತ್‌ ಆವರಣದಲ್ಲಿ ಉಡುಪಿ ಜಿ.ಪಂ., ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಹಾಲು ಉತ್ಪಾದಕರ ಸಹಕಾರಿ ಸಂಘ ಕೆದೂರು, ಗ್ರಾ.ಪಂ. ಕೆದೂರು, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘ, ಲಕ್ಷ್ಮೀ ಫೀಡ್ಸ್‌ ಮಂದಾರ್ತಿ, ಸರ್ವೋದಯ ಏಜನ್ಸೀಸ್‌ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನುವಾರು ಪ್ರದರ್ಶನ 2019ನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ತಾ.ಪಂ. ಸದಸ್ಯ ಕೆದೂರು ಸದಾನಂದ ಶೆಟ್ಟಿ ಮಾತನಾಡಿದರು. ಕೆದೂರು ಗ್ರಾ.ಪಂ.ಅಧ್ಯಕ್ಷ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕೊರ್ಗಿ ಗ್ರಾ.ಪಂ.ಅಧ್ಯಕ್ಷೆ ಗಂಗೆ ಕುಲಾಲ್ತಿ, ಉಡುಪಿ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ| ಸರ್ವೋತ್ತಮ ಉಡುಪ, ದಕ್ಷಿಣ ಕನ್ನಡ ಹಾಲು ಒಕ್ಕೂಟ, ಕುಂದಾಪುರ ಘಟಕದ ಉಪ ವ್ಯವಸ್ಥಾಪಕ ಡಾ| ಮನೋಹರ, ಕೆದೂರು ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಅಧ್ಯಕ್ಷ ಕರುಣಾಕರ ಶೆಟ್ಟಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶರತ್‌ ಕುಮಾರ್‌ ಹೆಗ್ಡೆ, ಕೆದೂರು ಗ್ರಾ.ಪಂ.ನ ನಿಕಟಪೂರ್ವ ಅಧ್ಯಕ್ಷ ಸಂಪತ್‌ ಕುಮಾರ್‌  ಶೆಟ್ಟಿ ಶಾನಾಡಿ, ಗ್ರಾ.ಪಂ. ಸದಸ್ಯರಾದ ಪ್ರಶಾಂತ್‌ ಶೆಟ್ಟಿ ಉಳ್ತೂರು, ಸಂಪಾವತಿ, ವಿನೋದ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು.

ಪ್ರದರ್ಶನದಲ್ಲಿ ಕೆದೂರು, ಬೇಳೂರು, ಉಳ್ತೂರು, ದೇಲಟ್ಟು, ಗುಳ್ಳಾಡಿ, ಮೊಗೆಬೆಟ್ಟು, ಚಾರುಕೊಟ್ಟಿಗೆ, ಕೊರ್ಗಿ ಗ್ರಾಮಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಟ್ಟು 80ಕ್ಕೂ ಅಧಿಕ ಜಾನುವಾರುಗಳು ಭಾಗವಹಿಸಿದ್ದವು. ಕುಂದಾಪುರ ತಾಲೂಕು ಪಶು ಪಾಲನಾ ಇಲಾಖೆಯ ಸಹ ನಿರ್ದೇಶಕ ಡಾ| ಸೂರ್ಯನಾರಾಯಣ ಉಪಾಧ್ಯಾಯ ಸ್ವಾಗತಿಸಿ, ಪ್ರಾಸ್ತಾವಿಸಿದರು. ಉಳ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘ ಕಾರ್ಯನಿರ್ವಾಹಕ ಪ್ರತಾಪ್‌ ಶೆಟ್ಟಿ ಉಳ್ತೂರು, ಕೆದೂರು ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ| ನಿರಂಜನ್‌ ಮೂರ್ತಿ ವಂದಿಸಿದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.