ಬಾಲಕನಿಗೆ ಲೈಂಗಿನ ದೌರ್ಜನ್ಯ: ಚಂದ್ರ ಹೆಮ್ಮಾಡಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
Team Udayavani, Mar 8, 2021, 4:50 PM IST
File photo
ಉಡುಪಿ: ತಾನು ದಿನಪತ್ರಿಕೆಯೊಂದರ ವರದಿಗಾರನೆಂದು ಹೇಳಿಕೊಂಡು ಬಾಲಕರನ್ನು ಪುಸಲಾಯಿಸಿ ಅವರಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯವೆಸಗುವ ಆರೋಪದಡಿಯಲ್ಲಿ ಬಂಧಿತನಾಗಿದ್ದ ಚಂದ್ರ ಕೆ. ಹೆಮ್ಮಾಡಿ ಮೇಲೆ ದಾಖಲಾದ ಪ್ರತ್ಯೇಕ 21 ಪೋಕ್ಸೋ ಪ್ರಕರಣದ ಪೈಕಿ ಮೊದಲ ಒಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಆರೋಪಿಯು ದೋಷಿ ಎಂದು ತೀರ್ಪು ಪ್ರಕಟಿಸಿದ್ದಾರೆ.
ಚಂದ್ರ ಕೆ. ಹೆಮ್ಮಾಡಿ ಎನ್ನುವಾತ ಅಪರಾಧಿಯಾಗಿದ್ದು, ಆತನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಢ ವಿಧಿಸಿ ಆದೇಶಿಸಲಾಗಿದೆ.
ಘಟನೆ ಹಿನ್ನೆಲೆ: ಚಂದ್ರ ಕೆ. ಹೆಮ್ಮಾಡಿಯು ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ ಅಲ್ಲಿನ ಬಾಲಕನೋರ್ವನಿಗೆ ತಾನು ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕರೆದೊಯ್ದು ಆತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಘಟನೆ ಬಳಿಕ 11 ವರ್ಷದ ಬಾಲಕನು ಮಾನಸಿಕವಾಗಿ ತೊಂದರೆಗೀಡಾಗಿದ್ದು, ಆತನನ್ನು ಮಣಿಪಾಲದ ಮಾನಸಿಕ ತಜ್ಞರ ಬಳಿ ಕರೆದೊಯ್ದು ಕೌನ್ಸೆಲಿಂಗ್ ಮಾಡಿಸಿದಾಗ ತನ್ನ ಮೇಲೆ ದೌರ್ಜನ್ಯ ನಡೆದಿರುವುದು ಹೇಳಿಕೊಂಡಿದ್ದ. ಈ ಬಗ್ಗೆ ಪೋಷಕರು ಬಾಲಕನನ್ನು ವಿಚಾರಿಸಿದಾಗ ಚಂದ್ರ ಹೆಮ್ಮಾಡಿ ಕುಕೃತ್ಯ ಬೆಳಕಿಗೆ ಬಂದಿದ್ದು ಬೈಂದೂರು ಠಾಣೆಗೆ ದೂರು ನೀಡಲಾಗಿತ್ತು.
ಇದನ್ನೂ ಓದಿ:ಬಿಎಸ್ ವೈ ಬಜೆಟ್ 2021: ಯಾವ ಜಿಲ್ಲೆಗೆ ಏನು ಸಿಕ್ಕಿದೆ?
2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೊಂದು ಘಟನೆ ಬೆಳಕಿಗೆ ಬರುತ್ತಲೆ ಹಲವು ಬಾಲಕರು ಪೋಷಕರಿಗೆ ವಿಚಾರ ತಿಳಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈತನ ಮೇಲೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಇದನ್ನೂ ಓದಿ: ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ
ಈ ಪೈಕಿ ಮೊದಲ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ನಡೆದಿದ್ದು ಶಿಕ್ಷೆ ವಿಧಿಸಲಾಗಿದೆ. ದಂಡದ 10 ಸಾವಿರದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ. ಈ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.