ಪಠ್ಯ ವಿವಾದ: ಶಿಕ್ಷಣ ಸಚಿವರ ತುರ್ತು ಸ್ಪಂದನೆ
Team Udayavani, Aug 27, 2020, 4:28 AM IST
ಉಡುಪಿ: ಆರನೆಯ ತರಗತಿ ಸಮಾಜಶಾಸ್ತ್ರದ ಪಠ್ಯಪುಸ್ತಕದಲ್ಲಿದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದ್ದ ಪಾಠವನ್ನು ಮುಂದಿನ ವರ್ಷ ಕೈಬಿಡುವುದಾಗಿ ಮತ್ತು ಈ ವರ್ಷ ಆ ನಿರ್ದಿಷ್ಟ ಪಾಠವನ್ನು ಮಾಡದಂತೆ ಸೂಚನೆ ನೀಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪಾಠದ ವಿಷಯವನ್ನು ಅರಿತ ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಶ್ರೀಕೃಷ್ಣಮಠ ಪರ್ಯಾಯ ಶ್ರೀಗಳಾದ ಈಶಪ್ರಿಯ ತೀರ್ಥ ಶ್ರೀಪಾದರು ಧ್ವನಿ ಸಂದೇಶ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನು ಆಲಿಸಿದ ಸಚಿವ ಸುರೇಶ್ ಕುಮಾರ್ ಅವರು ಸದ್ಯ ಆ ಪಾಠವನ್ನು ಮಾಡದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ. “ನಿರ್ದಿಷ್ಟ ಪಾಠ ಈ ವರ್ಷ ಪ್ರಕಟವಾದದ್ದಲ್ಲ. ಈ ವರ್ಷ ಸಮಯದ ಕಾರಣದಿಂದ ಪಠ್ಯವನ್ನು ಪರಿಷ್ಕರಿಸಿಲ್ಲ. ಮುಂದಿನ ವರ್ಷ ಪರಿಷ್ಕರಿಸುವಾಗ ಆ ಅಂಶವನ್ನು ಕೈಬಿಡುತ್ತೇವೆೆ’ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.