ಮೂಡುಬೆಳ್ಳೆ : ಗುಂಡುಪಾದೆ ಬಳಿ ಬೋನಿಗೆ ಬಿದ್ದ ಚಿರತೆ

Team Udayavani, Jul 23, 2021, 3:24 PM IST

ಹದ್ಗದ಻

ಶಿರ್ವ : ಬೆಳ್ಳೆ-ಕಟ್ಟಿಂಗೇರಿ ,ಪೆರ್ಣಂಕಿಲ ,ಮತ್ತು ಮರ್ಣೆ ಗ್ರಾಮದ ಗಡಿಭಾಗವಾದ ಗುಂಡುಪಾದೆಯ ಅಶೋಕ್‌ ನಾಯ್ಕ ಅವರ ಮನೆ ಬಳಿ ಉಡುಪಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ ಬೋನಿಗೆ  ಗುರುವಾರ ರಾತ್ರಿ ಚಿರತೆಯೊಂದು ಬಿದ್ದಿದ್ದು, ಚಿರತೆ ಬಂಧಿಸುವ ಇಲಾಖೆಯ ಪ್ರಯತ್ನ ಸಫಲವಾಗಿದೆ.

ಪೆರ್ಣಂಕಿಲ,ಮರ್ಣೆ ಮತ್ತು ಕಟ್ಟಿಂಗೇರಿ ಪರಿಸರದ ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಪರಿಸರದ ಸಾಕು ಪ್ರಾಣಿಗಳು ಮತ್ತು ನಾಟಿ ಕೋಳಿಗಳನ್ನು ಕೊಂದು ತಿನ್ನುತ್ತಿತ್ತು. ಬೆಳ್ಳೆ ಗ್ರಾ.ಪಂ. ಮತ್ತು ಸ್ಥಳೀಯ ನಾಗರಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು 15 ದಿನಗಳ ಹಿಂದೆ ಬೋನು ಇರಿಸಿದ್ದರು. ಬೇಟೆಯನ್ನು ಆರಸಿಕೊಂಡು ಬಂದ ಚಿರತೆ ಗುರುವಾರ ರಾತ್ರಿಬೋನಿಗೆ ಬಿದ್ದಿದ್ದು,ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಬೋನಿಗೆ ಬಿದ್ದ 7 ವರ್ಷ ಪ್ರಾಯದ ಗಂಡು ಚಿರತೆಯನ್ನು ಅರಣ್ಯ ಇಲಾಖೆಯ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಶುಕ್ರವಾರ ಕೊಲ್ಲೂರು ವನ್ಯಜೀವಿ ಅಭಯಾರಣ್ಯಕ್ಕೆ ಬಿಡಲಾಗಿದೆ.

ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರಿ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಉಡುಪಿ ಶಾಖೆಯ ಸುರೇಶ್‌ ಗಾಣಿಗ,ಹಿರಿಯಡ್ಕ ಶಾಖೆಯ ಜಯರಾಮ ಪೂಜಾರಿ, ಅರಣ್ಯರಕ್ಷಕರಾದ ಸುನೀಶ್‌ ಬಾಬು,ಗಣಪತಿ ನಾಯಕ್‌,ದೇವರಾಜ ಪಾಣ,ಜಯರಾಮ ಶೆಟ್ಟಿ, ಕೇಶವ ಪೂಜಾರಿ, ವಾಹನ ಚಾಲಕ ಜೋಯ್‌, ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ ಪೂಜಾರಿ ಮತ್ತು ಸ್ಥಳೀಯರು  ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.