Thekkatte: ಸಂಪೂರ್ಣ ಕುಸಿದ ಮನೆ ; ಲಕ್ಷಾಂತರ ರೂಪಾಯಿ ನಷ್ಟ 

ಸಂಪೂರ್ಣ ಹಾನಿಯಾದ ಮೂರು ಮನೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ಮೊತ್ತ ನೀಡಲು ಡಿಸಿ ಆದೇಶ

Team Udayavani, Aug 2, 2024, 10:45 AM IST

2-thekkatte

ತೆಕ್ಕಟ್ಟೆ: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಮೊಳಹಳ್ಳಿ ಗ್ರಾ. ಪಂ. ವ್ಯಾಪ್ತಿಯ ಕಂಬಳಗದ್ದೆ ಮನೆ ನಿವಾಸಿ ದೈಹಿಕ ಶಿಕ್ಷಣ ಶಿಕ್ಷಕ ಪ್ರದೀಪ್‌ ಕುಮಾರ್‌ ಶೆಟ್ಟಿ ಅವರ ಮನೆಗೆ ನೀರು ನುಗ್ಗಿ ಮನೆ ಸಂಪೂರ್ಣ ನೆಲಸಮವಾದ ಘಟನೆ ಜು.31ರ ಬುಧವಾರ ರಾತ್ರಿ ಸಂಭವಿಸಿದೆ.

ಇಲ್ಲಿನ ಕಂಬಳಗದ್ದೆ ಮನೆ ಸಮೀಪದಲ್ಲಿಯೇ ಹಾದು ಹೋಗುವ ಜಾವಳಿ ಹೊಳೆಯಲ್ಲಿ ನೀರಿನ ಒಳಹರಿವು ಹೆಚ್ಚಾಗಿ ಏಕಾಏಕಿ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರದೀಪ್‌ ಕುಮಾರ್‌ ಶೆಟ್ಟಿ, ಗೀತಾ ಶೆಟ್ಟಿ, ರತ್ನಾವತಿ ಶೆಟ್ಟಿ ಅವರ ಮನೆ ಸಂಪೂರ್ಣ ಜಲಾವೃತಗೊಂಡ ಪರಿಣಾಮ ಮನೆಗಳು ಕುಸಿದು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಮಳೆಯ ತೀವ್ರತೆಯನ್ನು ಅರಿತ ಗ್ರಾಮಸ್ಥರು ರಾತ್ರಿಯೇ ಮುಂಜಾಗ್ರತಾ ಕ್ರಮವಾಗಿ ನೆರೆ ಪೀಡಿತರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.

ಈ ಹಿನ್ನೆಲೆಯಲ್ಲಿ ಆ.1 ರಂದು ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಪರಿಶೀಲಿಸಿ, ತುರ್ತು ಕ್ರಮಕ್ಕೆ ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಉದಯವಾಣಿ ಜತೆ ಮಾತನಾಡಿ, ಮಳೆಯಿಂದ ಸಂಪೂರ್ಣ ಹಾನಿಯಾದ ಮೂರು ಮನೆಯವರಿಗೆ ಹೊಸದಾಗಿ ಮನೆ ನಿರ್ಮಾಣಕ್ಕೆ ಪೂರ್ಣ ಪರಿಹಾರ ಮೊತ್ತ ನೀಡಲಾಗುವುದು ಎಂದರು.

ಜೀವ ಉಳಿಸುವುದೇ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಗುಡ್ಡ ಕುಸಿತಗಳಿರುವ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೊಳೆಯಲ್ಲಿ ಅಪಾರ ಪ್ರಮಾಣದ ಹೂಳುಗಳಿರುವ ಪರಿಣಾಮ ಇಂತಹ ನೆರೆ ಸೃಷ್ಟಿಯಾಗುತ್ತಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಮೇಲೆ ಹೂಳು ತೆಗೆಯುವ ಬಗ್ಗೆ ಗ್ರಾ.ಪಂ.ಗೆ ಅನುಮೋದನೆ ನೀಡುತ್ತೇವೆ. ಅಲ್ಲದೇ ಗ್ರಾಮಸ್ಥರು ಒಂದಾಗಿ ನರೇಗಾದಲ್ಲಿ ಕೂಡಾ ಹೊಳೆ ಹೂಳು ತೆಗೆಯುವ ಅವಕಾಶವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಎ.ಕಿರಣ್‌ ಕುಮಾರ್‌ ಕೊಡ್ಗಿ, ಕುಂದಾಪುರ ಕಾಂಗ್ರೆಸ್‌ ಮುಖಂಡ ಎಂ.ದಿನೇಶ್‌ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಎಸಿ ಮಹೇಶ್ಚಂದ್ರ, ತಹಶೀಲ್ದಾರ್‌ ಶೋಭಾ ಲಕ್ಷ್ಮೀ, ಮೊಳಹಳ್ಳಿ ಗ್ರಾಮ ಪಂಚಾಯತ್‌ ಇದರ ಅಧ್ಯಕ್ಷ ಚಂದ್ರಶೇಖರ್‌ ಶೆಟ್ಟಿ ದ್ಯಾವಲಬೆಟ್ಟು, ಮಾಜಿ ಗ್ರಾ.ಪಂ. ಅಧ್ಯಕ್ಷ ಉದಯ ಕುಲಾಲ್‌, ಉಪಾಧ್ಯಕ್ಷೆ ಚೈತ್ರಾ ವಿ. ಅಡಪ ಗ್ರಾ.ಪಂ. ಸದಸ್ಯರಾದ ಮನೋಜ್‌ ಕುಮಾರ್‌ ಶೆಟ್ಟಿ, ಜಯಂತಿ ಶೆಟ್ಟಿ, ಮಾಜಿ ಅಧ್ಯಕ್ಷ ದೀನಪಾಲ್‌ ಶೆಟ್ಟಿ , ವಾಣಿ ಶೆಟ್ಟಿ, ವಾರಾಹಿ ಎಂಜಿನಿಯರ್‌ ಅಶೋಕ್‌, ವಿಶ್ವನಾಥ ಶೆಟ್ಟಿ, ಕಂದಾಯ ನಿರೀಕ್ಷಕ ದಿನೇಶ್‌ ಹುದ್ದಾರ್‌, ಪಿಡಿಒ ಭಾವನಾ, ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ ಕುಲಾಲ್‌ ಹಾಗೂ ನೂರಾರು ಮಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.

—————–

ಧಾರಾಕಾರವಾಗಿ ಸುರಿದ ಮಳೆಯ ಪರಿಣಾಮ ಮೊಳಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೊಳಹಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಭಾಗಶಃ ಹಾನಿಯಾಗಿದೆ.

ಕಂಬಳಗದ್ದೆ ಮನೆ ಗೀತಾ ಶೆಟ್ಟಿ ಅವರ ಮನೆಯ ದನ ಕೊಟ್ಟಿಗೆ ಭಾಗಶಃ ಹಾನಿಯಾಗಿದೆ. ಇಲ್ಲಿನ ಪ್ರಫುಲ್ಲಾ, ಸತೀಶ್‌ ಮೊಗವೀರ, ಶಿಕ್ಷಕಿ ಶೋಭಾ ಶೆಟ್ಟಿ, ವೇಣುಗೋಪಾಲ ಶೆಟ್ಟಿ , ಅಭಿಷೇಕ್‌ ಶೆಟ್ಟಿ ಸಾಗಿನಮನೆ, ಮಂಜುನಾಥ ಬಾಯರಿ, ಉಪ್ಪೂರರಮನೆ ಗೋವಿಂದ ಶೆಟ್ಟಿ ಅವರ ಮನೆಗಳಿಗೆ ನೀರು ನುಗ್ಗಿದೆ.

ಕೊಂಗೇರಿಯ ಎಂಬಲ್ಲಿ ಹರಿಯುವ ನೀರಿನ ತೋಡಿನ ದಂಡೆ ಒಡೆದು ಹೋದ ಪರಿಣಾಮ ಸುಧಾಕರ ಶೆಟ್ಟಿ ಅವರ ಮನೆಗೆ ನೀರು ನುಗ್ಗಿದೆ. ಸ್ಥಳೀಯರ ಸಹಕಾರದಿಂದ ತುರ್ತು ಜೆಸಿಬಿ ಯಂತ್ರ ಬಳಸಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ. ಮಳೆಯ ಪರಿಣಾಮ ಕಟ್ಟೆಮನೆ, ಬೆಳಗೋಡು , ಹುಲ್ಕಲ್‌ಕೆರೆ ಸಮೀಪದಲ್ಲಿ ರಸ್ತೆಗಳ ಮೇಲೆ ಭಾರೀ ಪ್ರಮಾಣದ ನೀರು ಹರಿದು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.