Thekkatte: ಕೃಷಿ ಸಖಿಯರಿಂದ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ
Team Udayavani, Jun 18, 2024, 3:46 PM IST
ತೆಕ್ಕಟ್ಟೆ: ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಕುಂದಾಪುರ, ಕೃಷಿ ಇಲಾಖೆ ಕುಂದಾಪುರ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ , ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಇವರ ಆಶ್ರಯದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೆಲ್ಗುಡ್ಡೆ ಮನೆ ದಿ| ಆನಂದ ದೇವಾಡಿಗ ಅವರ ಪುತ್ರಿ ಕೃಷಿ ಸಖಿ ಸಂಗೀತ ದೇವಾಡಿಗ ಅವರ ನಿವಾಸದಲ್ಲಿ ನಡೆದ ಕೃಷಿ ಸಖಿಯರಿಂದ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭನಾ ಶೆಟ್ಟಿ ಜೂ.18 ರ ಮಂಗಳವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕಿ ರೂಪಾ ಜೆ.ಮಾಡ, ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಧನಂಜಯ ವಿಜ್ಞಾನಿ ಡಾ| ಜಯಪ್ರಕಾಶ್ , ತೆಕ್ಕಟ್ಟೆ ಗ್ರಾಮ ಪಂಚಾಯತ್ ಪಿಡಿಒ ಸುನಿಲ್, ಕೃಷಿ ಜಿಲ್ಲಾ ವ್ಯವಸ್ಥಾಪಕರು ಡಾ|ಸೌಮ್ಯ , ಕೃಷಿ ಯುವ ವೃತ್ತಿಪರರಾದ ರಂಜಿತ, ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ರಮಿತಾ, ಕೃಷಿ ಸಖೀ ಸಂಗೀತ ದೇವಾಡಿಗ , ಹಾಗೂ ಕೃಷಿ ಸಖಿಯರು ಉಪಸ್ಥಿತರಿದ್ದರು.
ಹಂಗಳೂರು ಗ್ರಾ.ಪಂ.ನ ಕೃಷಿ ಸಖಿ ಜಯಲಕ್ಷ್ಮೀ ಸ್ವಾಗತಿಸಿ, ಕೃಷಿಕರಾದ ರಾಜುದೇವಾಡಿಗ, ಗಣೇಶ್ ದೇವಾಡಿಗ ಅವರು ಸಹಕರಿಸಿ, ವಂದಿಸಿದರು.
41 ಮಂದಿ ಕೃಷಿ ಸಖಿಯರಿಂದ ನಾಟಿ ಕಾರ್ಯ
ಸುಮಾರು 30 ಸೆಂಟ್ಸ್ ವಿಸ್ತೀರ್ಣದ ಕೃಷಿ ಭೂಮಿಯಲ್ಲಿ ಗ್ರಾ.ಪಂ. ಅಧ್ಯಕ್ಷರು, ಕೃಷಿ ವಿಜ್ಞಾನಿಗಳು, ಕೃಷಿ ಅಧಿಕಾರಿಗಳು ಹಾಗೂ ಮಹಿಳೆಯರು ಸೇರಿ ಒಟ್ಟು 40ಕ್ಕೂ ಅಧಿಕ ಮಂದಿ ತಾವು ಉಟ್ಟ ಹೊಸ ಬಟ್ಟೆಯಲ್ಲಿಯೇ ಹದ ಮಾಡಿದ ಕೃಷಿಭೂಮಿಗೆ ಇಳಿದು ಸಾಂಪ್ರದಾಯಿಕ ಕೃಷಿ ಸಾಲು ನಾಟಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಹಡಿಲು ಭೂಮಿಯಲ್ಲಿ ಭತ್ತದ ಸಾಲು ನಾಟಿ ಪ್ರಾತ್ಯಕ್ಷಿಕೆ ಮಾಡಿ ಎಲ್ಲರ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.