ಕಳೆದ 21 ವರ್ಷಗಳಿಂದ ಪೂರ್ಣಕಾಲಿಕ ಪಶುವೈದ್ಯಾಧಿಕಾರಿಗಳೇ ಇಲ್ಲ

ಅಜೆಕಾರು: ಹೊಬಳಿ ಮಟ್ಟದ ಪಶು ವೈದ್ಯಕೀಯ ಆಸ್ಪತ್ರೆ

Team Udayavani, Dec 14, 2021, 5:26 PM IST

ಕಳೆದ 21 ವರ್ಷಗಳಿಂದ ಪೂರ್ಣಕಾಲಿಕ ಪಶುವೈದ್ಯಾಧಿಕಾರಿಗಳೇ ಇಲ್ಲ

ಅಜೆಕಾರು: ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆ ಇಂದು ಪ್ರಮುಖ ವೃತ್ತಿಯಾಗಿ ಪ್ರಗತಿ ಕಾಣುತ್ತಿದ್ದರೆ ಇದಕ್ಕೆ ಪೂರಕವಾಗಿ ಅಗತ್ಯ ವಾಗಿರಬೇಕಾದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದ ಪರಿಸ್ಥಿತಿಯಾಗಿದೆ.
ಕಾರ್ಕಳ ತಾಲೂಕಿನ ಅಜೆಕಾರು ಹೊಬಳಿ ಮಟ್ಟದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಕಳೆದ 21 ವರ್ಷಗಳಿಂದ ಪೂರ್ಣಕಾಲಿಕ ಪಶು ವೈದ್ಯಾಧಿಕಾರಿಗಳೇ ಇಲ್ಲ.

1990ರಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವಾಗಿ ಪ್ರಾರಂಭವಾದ ಆಸ್ಪತ್ರೆ ಅನಂತರ 2000ನೇ ಸಾಲಿನಲ್ಲಿ ಪಶು ಚಿಕಿತ್ಸಾಲಯವಾಗಿ ಮೇಲ್ದರ್ಜೆಗೇರಿತು. ಆದರೆ ಈ ಸಂದರ್ಭ ಪಶು ವೈದ್ಯಾಧಿಕಾರಿಯಾಗಿದ್ದವರು ಅನಾರೋಗ್ಯದ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡ ಅನಂತರ ಈ ಪಶು ಆಸ್ಪತ್ರೆಗೆ ನೇಮಕಾತಿಯಾಗಿಲ್ಲ.

ಆದರೆ 2012ನೇ ಇಸವಿಯಲ್ಲಿ ಹೊಬಳಿ ಮಟ್ಟದ ಪಶು ವೈದ್ಯಕೀಯ ಆಸ್ಪತ್ರೆ ಆಗಿ ಮೇಲ್ದರ್ಜೆಗೇರಿದೆ ಆದರೂ ಅಧಿಕಾರಿಗಳ ನೇಮಕ ಮಾತ್ರ ಇಲ್ಲವಾಗಿದೆ.

ಕೇವಲ ಹೆಸರಿಗಷ್ಟೆ ಮೇಲ್ದರ್ಜೆಗೇರಿದೆ ವಿನಹ ಸಿಬಂದಿಯ ನೇಮಕ ಈ ವರೆಗೆ ನಡೆದಿಲ್ಲ.ತಾಲೂಕಿನ ಇತರ ಪಶು ವೈದ್ಯಕೀಯ ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳೇ ಪ್ರಭಾರ ನೆಲೆಯಲ್ಲಿ ವಾರದಲ್ಲಿ ಕೆಲವು ದಿನಗಳಿಗೆ ಮಾತ್ರ ಕಾರ್ಯ ನಿರ್ವಹಿಸುತ್ತಾರೆ. ಪ್ರಭಾರ ವೈದ್ಯರೇ ಖಾಯಂ ಎಂಬತಾಗಿದೆ.

ಅಜೆಕಾರು ಹೊಬಳಿ ಮಟ್ಟದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿ ಒಂದು, ಜಾನುವಾರು ಅಧಿಕಾರಿ ಒಂದು, ಡಿ ದರ್ಜೆ ನೌಕರ 2 ಹುದ್ದೆಗಳಿದ್ದು ಇದರಲ್ಲಿ ಡಿ ದರ್ಜೆ ನೌಕರರಾಗಿ ಓರ್ವರು ಮಾತ್ರ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಉಳಿದ ಎಲ್ಲ ಹುದ್ದೆಗಳು ಖಾಲಿಯಾಗಿ ಉಳಿದಿವೆ. ಅಜೆಕಾರು ಹೊಬಳಿ ಮಟ್ಟದ ಪಶು ವೈದ್ಯಕೀಯ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಮರ್ಣೆ, ಕಡ್ತಲ, ಶಿರ್ಲಾಲು, ಕೆರ್ವಾಶೆ ಗ್ರಾಮ ಪಂಚಾಯತ್‌ ಇದ್ದು 8 ಕಂದಾಯ ಗ್ರಾಮಗಳನ್ನು ಒಳಗೊಂಡಿದೆ. ಸುಮಾರು 9,500 ಸಾಕು ಪ್ರಾಣಿಗಳಿದ್ದು 9 ಹಾಲು ಉತ್ಪಾದಕರ ಸಹಕಾರಿ ಸಂಘಗಳಿವೆ.

ಈ ಭಾಗದ ಜನತೆ ತಮ್ಮ ರಾಸುಗಳು ಸೇರಿದಂತೆ ಸಾಕು ಪ್ರಾಣಿಗಳಿಗೆ ಆರೋಗ್ಯ ಸಮಸ್ಯೆಯಾದಾಗ ಸಂಕಷ್ಟ ಪಡಬೇಕಾಗಿದೆ. ಅಲ್ಲದೆ ತುರ್ತು ಚಿಕಿತ್ಸೆ ಸಿಗದೆ ಪ್ರಾಣಿಗಳು ಸಾವನ್ನಪ್ಪಿ ಹೈನುಗಾರರು ನಷ್ಟ ಅನುಭವಿಸ ಬೇಕಾಗಿದೆ. ಈ ಆಸ್ಪತ್ರೆ ವ್ಯಾಪ್ತಿಯ ಹೈನುಗಾರರು ವೈದ್ಯರ ನೇಮಕ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಗಳಲ್ಲಿ ನಿರ್ಣಯ ಮಾಡಿ ಕಳುಹಿಸಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

ಕಾರ್ಕಳ ತಾ|ನಲ್ಲಿ ಸುಮಾರು 54 ಸಾವಿರ ಜಾನು ವಾರುಗಳಿವೆ. ಒಂದು ವೈದ್ಯರಿಗೆ ಸುಮಾರು 4- 5 ಪಂ. ವ್ಯಾಪ್ತಿ ಇರುವುದರಿಂದ ಜಾನುವಾರುಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯವಾಗಿದೆ.
ಗ್ರಾಮೀಣ ಭಾಗದಲ್ಲಿ ಹೈನುಗಾರರು ಹೆಚ್ಚಾಗುತ್ತಿರುವುದರಿಂದ ಶೀಘ್ರ ಪಶು ವೈದ್ಯರ ನೇಮಕ ನಡೆಯ ಬೇಕಾಗಿದೆ ಎಂದು ಸ್ಥಳೀಯರು ಆಗ್ರ ಹಿಸಿದ್ದಾರೆ.

ಅಜೆಕಾರು ಮಾತ್ರವಲ್ಲದೆ ಕಾರ್ಕಳ ತಾಲೂಕಿನ ಬಜಗೋಳಿ, ನಿಟ್ಟೆ, ಪಳ್ಳಿ, ಕಲ್ಯಾ, ಬೈಲೂರು, ಬೋಳ, ಬೆಳ್ಮಣ್‌, ಸಾಣೂರು, ಇರ್ವತ್ತೂರು, ಹೊಸ್ಮಾರ್‌, ಮಾಳ, ನಕ್ರೆ, ಮುಂಡ್ಕೂರು ಪಶು ಚಿಕಿತ್ಸಾ ಕೇಂದ್ರಗಳಲ್ಲಿಯೂ ಸಿಬಂದಿ ಕೊರತೆ ಇದೆ. ಹೆಬ್ರಿ ತಾಲೂಕಿನ ಮುನಿಯಾಲು, ಶಿವಪುರ, ಮುದ್ರಾಡಿ, ಕಬ್ಬಿನಾಲೆ, ನಾಡಾ³ಲು ಕೇಂದ್ರಗಳಲ್ಲಿಯೂ ಸಿಬಂದಿ ಕೊರತೆ ಇದೆ.

ತಾಲೂಕು ಪಶು ಆಸ್ಪತ್ರೆ ಸಹಿತ ಗ್ರಾಮೀಣ ಭಾಗದ ಪ್ರಾಥಮಿಕ ಪಶು ಆಸ್ಪತ್ರೆಗಳಲ್ಲಿ ಒಟ್ಟು 57 ಹುದ್ದೆಗಳಿದ್ದು ಇದರಲ್ಲಿ ಕೇವಲ 12 ಹುದ್ದೆಗಳಲ್ಲಿ ಮಾತ್ರ ಅಧಿಕಾರಿಗಳು, ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ 45 ಹುದ್ದೆಗಳು ಕಾರ್ಕಳ ತಾಲೂಕಿನ ಪಶು ಆಸ್ಪತ್ರೆಗಳಲ್ಲಿ ಖಾಲಿಯಾಗಿ ಉಳಿದಿವೆೆ. ತಾಲೂಕಿನ ಕಾರ್ಯ ನಿರ್ವಹಿಸುತ್ತಿರುವ ಕೇವಲ 12 ಅಧಿಕಾರಿಗಳು ಮತ್ತು ಸಿಬಂದಿ ಎಲ್ಲ 57 ಹುದ್ದೆಗಳ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

ಹೈನುಗಾರರಿಗೆ ಸಂಕಷ್ಟ
ಪಶು ಆಸ್ಪತ್ರೆಗಳಲ್ಲಿ ಖಾಯಂ ವೈದ್ಯರು ಇಲ್ಲದೆ ಇರುವುದರಿಂದ ಹೈನುಗಾರಿಗೆ ಸಂಕಷ್ಟ ಆಗುತ್ತದೆ. ಹೈನುಗಾರರ ಹಿತ ದೃಷ್ಟಿಯಿಂದ ಅಜೆಕಾರು ಪಶು ವೈದ್ಯಕೀಯ ಆಸ್ಪತ್ರೆಗೆ ಖಾಯಂ ವೈದ್ಯರ ಸಹಿತ ಪೂರ್ಣ ಪ್ರಮಾಣದ ಸಿಬಂದಿ ನೇಮಕ ತ್ವರಿತವಾಗಿ ನಡೆಯಬೇಕಾಗಿದೆ.
– ಹರೀಶ್‌ ಶೆಟ್ಟಿ, ಕಾರ್ಯದರ್ಶಿ ಹಾಲು ಉತ್ಪಾದಕರ ಸಂಘ ಶಿರ್ಲಾಲು

ಪಶು ವೈದ್ಯರ ಕೊರತೆ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಶು ವೈದ್ಯಕೀಯ ವ್ಯಾಸಂಗ ಮಾಡುವವರ ಸಂಖ್ಯೆ ಕಡಿಮೆ ಇದೆ. ನೇಮಕಾತಿ ಸಂದರ್ಭ ಇತರ ಜಿಲ್ಲೆಯವರೇ ಹೆಚ್ಚಾಗಿ ನೇಮಕಗೊಳ್ಳುವುದರಿಂದ ಅವರು ಕೆಲವು ಸಮಯದಲ್ಲಿಯೇ ವರ್ಗಾವಣೆ ಪಡೆಯುತ್ತಾರೆ. ಇದರಿಂದಾಗಿ ದ.ಕ., ಉಡುಪಿ ಜಿಲ್ಲೆಯಲ್ಲಿ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯರು ಹೆಚ್ಚಾಗಿ ಪಶು ವೈದ್ಯಕೀಯ ವ್ಯಾಸಂಗ ಮಾಡಿದಲ್ಲಿ ಈ ಸಮಸ್ಯೆ ಇರದು.
– ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕರು ಪಶು ಸಂಗೋಪನ ಇಲಾಖೆ ಉಡುಪಿ

-ಜಗದೀಶ್‌ ರಾವ್‌ ಅಂಡಾರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.