ಉಡುಪಿ: ಉಪನ್ಯಾಸಕರಿಗೆ ವೇತನವಿಲ್ಲ, ವಿದ್ಯಾರ್ಥಿಗಳಿಗೆ ಪಾಠವಿಲ್ಲ!
ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಒಂದು ತಿಂಗಳು
Team Udayavani, Jan 6, 2022, 1:15 PM IST
ಉಡುಪಿ: ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಶಿಕ್ಷಕರು ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಮಾತ್ರ ಮೌನ ವಹಿಸಿದೆ. ಇದರಿಂ ದಾಗಿ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪ ನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕರ್ನಾಟಕ ನಾಗರಿಕ ಸೇವೆ ನಿಯಮದ ಅನ್ವಯ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನ ಗೊಳಿಸುವುದು ಮತ್ತು ನಿಯಮ ಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಸೇವಾ ವಿಲೀನ ಸಂಬಂಧ ಈ ಪ್ರತಿಭಟನೆ ನಡೆಯುತ್ತಿದೆ.
ಮಾನದಂಡ ಉಲ್ಲಂಘನೆ
ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುವವರಿಗೆ ಒಂದು ತರಗತಿಗೆ 1,500 ರೂ. ನೀಡಬೇಕೆಂದು ಯುಜಿಸಿ ಮಾನದಂಡವಿದೆ. ಆದರೆ ಅದು ಪಾಲನೆಯಾಗುತ್ತಿಲ್ಲ. ಸೇವೆಯನ್ನು ವಿಲೀನಗೊಳಿಸಿ ಖಾಯಮಾತಿ ಮಾಡುವ ಬಗ್ಗೆಯೂ ಸರಕಾರ ಚಿಂತಿಸುತ್ತಿಲ್ಲ.
ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್ ಮಾಡುತ್ತಿದ್ದ ಜಾಲ ಬಯಲಿಗೆ
84ಕ್ಕೂ ಅಧಿಕ ಮಂದಿ ಸಾವು
10 ವರ್ಷಗಳಿಗೂ ಅಧಿಕ ಅನುಭವವಿರುವ ಶಿಕ್ಷಕರಿಗೆ ಗರಿಷ್ಠ ಎಂದರೆ 11ರಿಂದ 13 ಸಾವಿರ ರೂ. ಮಾತ್ರ ವೇತನ ಸಿಗುತ್ತಿದೆ. ಪಿಎಚ್‌ಡಿ, ಎಂಎ, ಎಂಫಿಲ್ ಮಾಡಿದವರೂ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್ ಹಾಗೂ ಲಾಕ್‌ಡೌನ್ ಅವಧಿಯಲ್ಲಿ ಸೂಕ್ತ ವೇತನವಿಲ್ಲದೆ ರಾಜ್ಯದಲ್ಲಿ 84 ಅತಿಥಿ ಉಪನ್ಯಾಸಕರು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರೊಬ್ಬರು ಸೂಕ್ತ ವೇತನ ಹಾಗೂ ಕೆಲಸವಿಲ್ಲದ ಕಾರಣ ಮಾನಸಿಕ ಖಿನ್ನತೆಯಿಂದ ಬಳಲಿ ಸಾವನ್ನಪ್ಪಿದ್ದರು.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಸತøಜೆಗಳನ್ನಾಗಿ ರೂಪಿಸುವ ನಮಗೇ ಭವಿಷ್ಯವಿಲ್ಲದಂತಾಗಿದೆ. ಈ ಬಗ್ಗೆ ಹಲವಾರು ವರ್ಷಗಳಿಂದ ಹೋರಾಟ ಮಾಡಿದರೂ ಸರಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇತರ ರಾಜ್ಯಗಳಲ್ಲಿ ಮಾಡಿದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಮಾತಿ ಮಾಡಿದರೆ ಹಲವರಿಗೆ ಅನುಕೂಲವಾಗಲಿದೆ.
– ಡಾ| ಶಾಹಿದಾ ಜಹಾನ್,
ಅಧ್ಯಕ್ಷರು, ಉಡುಪಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.