Udupi: ಇಂದು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭ

Team Udayavani, Dec 16, 2023, 11:39 AM IST

5-udupi-add

ಉಡುಪಿ: ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭ ಡಿ.16ರ ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠ ಮತ್ತು ಶ್ರೀ ಪೇಜಾವರ ಮಠದ ಮುಂಭಾಗ ನಡೆಯಲಿದೆ.

ಉಡುಪಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀಪಾದರಾದ ಶ್ರೀ ವಿದ್ಯಾಸಾಗರತೀರ್ಥ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಅದರೊಂದಿಗೆ ಶುಭಾಶೀರ್ವಚನವನ್ನು ನೀಡಲಿದ್ದಾರೆ.

ಶ್ರೀ ಪಲಿಮಾರು ಮಠದ ಶ್ರೀಪಾದರಾದ ಶ್ರೀ ವಿದ್ಯಾಧೀಶತೀರ್ಥ, ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀಪಾದರಾದ ಶ್ರೀ ವಿಶ್ವಪ್ರಸನ್ನ ತೀರ್ಥ, ಶ್ರೀ ಕಾಣಿಯೂರು ಮಠದ ಶ್ರೀಪಾದರಾದ ಶ್ರೀ ವಿದ್ಯಾವಲ್ಲಭ ತೀರ್ಥ, ಶ್ರೀ ಅದಮಾರು ಮಠ ಕಿರಿಯ ಪಟ್ಟ ಶ್ರೀಪಾದರಾದ ಶ್ರೀ ಈಶಪ್ರಿಯ ತೀರ್ಥ, ಶ್ರೀ ಪಲಿಮಾರು ಮಠ ಕಿರಿಯಪಟ್ಟ ಶ್ರೀಪಾದರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ, ಶ್ರೀ ಶೀರೂರು ಮಠ ಶ್ರೀಪಾದರಾದ ಶ್ರೀ ವೇದವರ್ಧನ ತೀರ್ಥರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಶುಭ ಸಂದೇಶ ನೀಡುವರು.

ಮುಖ್ಯ ಅತಿಥಿಗಳಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಭಾರತ ಸರ್ಕಾರದ ಸಂಸದೀಯ ವ್ಯವಹಾರ ಮತ್ತು ಗಣಿ ಇಲಾಖೆ ಮಂತ್ರಿ ಪ್ರಹ್ಲಾದ್‌ ಜೋಶಿ, ಗಳು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಆದ ಲಕ್ಷ್ಮೀ ಹೆಬ್ಟಾಳ್ಕರ್‌, ಭಾರತ ಸರ್ಕಾರದ ಪ್ರವಾಸೋದ್ಯಮ,ಬಂದರು ಮತ್ತು ಒಳನಾಡು ಸಾರಿಗೆ ರಾಜ್ಯ ಮಂತ್ರಿ ಶ್ರೀಪಾದ್‌ ಯೆಸ್ಸೋ ನಾಯ್ಕ, ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಬೆಂಗಳೂರು ಉದ್ಯಮಿ ಮತ್ತು ಸಾಮಾಜಿಕ ಧುರೀಣ ಕೆ. ಬಂಜಾರ ಪ್ರಕಾಶ್‌ ಶೆಟ್ಟಿ, ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್‌ ಲಿ. ನ ಅಧ್ಯಕ್ಷ ಡಾ|| ಎಮ್‌ ಎನ್‌ ರಾಜೇಂದ್ರ ಕುಮಾರ್‌, ಉಡುಪಿ ಡಾ ಜಿ ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ರಿ. ಇದರ ಮುಖ್ಯಸ್ಥ ಡಾ|| ಜಿ ಶಂಕರ್‌,  ಕೋಟ ಗೀತಾನಂದ ಫೌಂಡೇಶನ್‌ ನ ಮುಖ್ಯಸ್ಥ ಆನಂದ ಸಿ. ಕುಂದರ್‌ ಭಾಗವಹಿಸಲಿದ್ದಾರೆ.

ಹೆಬ್ರಿ ಶ್ರೀ ವಿಶ್ವೇಶತೀರ್ಥ ಟ್ರಸ್ಟ್‌ ಗೋಶಾಲೆಯ ವಿಶ್ವಸ್ಥ ಗುರುದಾಸ್‌ ಶೆಣೈ, ಉಡುಪಿ ವಿದ್ಯೋದಯ ಟ್ರಸ್ಟ್‌ ರಿ. ಇದರ ಅಧ್ಯಕ್ಷ ಎನ್‌. ನಾಗರಾಜ ಬಲ್ಲಾಳ್‌, ಎಸ್‌.ಎಮ್‌.ಎಸ್‌.ಪಿ. ಮಹಾಸಭಾದ ಕಾರ್ಯದರ್ಶಿ ವಿದ್ವಾನ್‌ ಗೋಪಾಲ ಜೋಯಿಸ್‌ ಇರ್ವತ್ತೂರು ಉಪಸ್ಥಿತರಿರುವರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ  ವಿ. ಸುನಿಲ್‌ ಕುಮಾರ್‌,  ವಿಧಾನ ಪರಿಷತ್‌ ಸದಸ್ಯ ಪಿ. ಮಂಜುನಾಥ ಭಂಡಾರಿ, ಕುಂದಾಪುರ ಶಾಸಕ ಎ. ಕಿರಣ್‌ ಕುಮಾರ್‌ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಭಾಗವಹಿಸಲಿದ್ದಾರೆ.

ದಿನವಿಡೀ ನಡೆಯುವ ಕಾರ್ಯಕ್ರಮಗಳ ವಿವರ:

ಶ್ರೀ ಕೃಷ್ಣ ಮಠದಲ್ಲಿ ಬೆಳಿಗ್ಗೆ ಲಕ್ಷ ಕೃಷ್ಣಮಂತ್ರ ಜಪ ಸಹಿತ ಯಾಗ ಮತ್ತು ಗೋ ಸೂಕ್ತ ಯಾಗ ನಡೆಯಲಿದೆ.

ಮಧ್ಯಾಹ್ನ 12.30 ರಿಂದ ರಾಜಾಂಗಣದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಬಳಿಕ ರಾಮರಾಜ್ಯ ನಿರ್ಮಾಣದ ಶ್ರೀಗಳ ಕನಸಿನ ವಿವಿಧ ಸಮಾಜ ಸೇವಾ ಕಾರ್ಯಗಳು ನೆರವೇರಲಿದೆ.

ಸಂಜೆ 3 ರಿಂದ ಜೋಡುಕಟ್ಟೆಯಿಂದ ಆಕರ್ಷಕ ಶೋಭಾಯಾತ್ರೆ ನಡೆಯಲಿದೆ. (ಶೋಭಾಯಾತ್ರೆಯಲ್ಲಿ ಭಾಗವಹಿಸುವವರು ಕೇಸರಿ ಶಾಲನ್ನು ಧರಿಸಿ ಬರಬೇಕು)

ಸಂಜೆ 5 ರಿಂದ ರಥಬೀದಿಯ ಶ್ರೀ ಪೇಜಾವರ ಮಠದ ಮುಂಭಾಗದಲ್ಲಿ ಬೃಹತ್‌ ಅಭಿವಂದನ ಸಮಾರಂಭ ಜರಗಲಿದೆ.

ಸಂಜೆ 7. 30ರಿಂದ ಪ್ರಸಿದ್ಧ ಕಲಾದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ, ಪುಣೆಯ ಮಹೇಶ್‌ ಕಾಳೆ ಮತ್ತು ಬಳಗ ಇವರಿಂದ ಹಿಂದುಸ್ಥಾನಿ ಸಂಗೀತ ಮತ್ತು ಭಜನ್ಸ್‌ ಕಾರ್ಯಕ್ರಮ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.