ಉಡುಪಿ: 5 ಕಡೆ ಕೋವಿಡ್‌ ಡೇ ಕೇರ್‌ ಸೆಂಟರ್‌ ಪ್ರಾರಂಭ; 870 ಹಾಸಿಗೆ

Team Udayavani, Jul 20, 2020, 9:52 AM IST

ಉಡುಪಿ: 5 ಕಡೆ ಕೋವಿಡ್‌ ಡೇ ಕೇರ್‌ ಸೆಂಟರ್‌ ಪ್ರಾರಂಭ; 870 ಹಾಸಿಗೆ

ಉಡುಪಿ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿನ ಲಕ್ಷಣ ಇರದ ರೋಗಿಗಳಿಗಾಗಿ ಜಿಲ್ಲೆಯ 5 ಕಡೆಗಳಲ್ಲಿ ಕೋವಿಡ್‌ 19 ಕೇರ್‌ ಸೆಂಟರ್‌ ತೆರೆಯಲಾಗಿದೆ. ದಿನೇ ದಿನೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿರ್ವಹಣೆಗೆ ಜಿಲ್ಲಾಡಳಿತ ಮತ್ತಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಮುಂದಿನ ಹಂತವಾಗಿ ಜಿಲ್ಲೆಯ ಕಾರ್ಕಳದಲ್ಲಿ 1, ಉಡುಪಿಯಲ್ಲಿ 3, ಕುಂದಾಪುರದಲ್ಲಿ 1 ಸೇರಿದಂತೆ 5 ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 870 ಹಾಸಿಗೆಯನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ ಸುಮಾರು 100ಕ್ಕೂ ಅಧಿಕ ಮಂದಿ ಇಲ್ಲಿ ಇದ್ದಾರೆ.

ಯಾರಿಗೆ ಚಿಕಿತ್ಸೆ?
ಜಿಲ್ಲೆಯಲ್ಲಿ ಕೊರೊನಾ ಲಕ್ಷಣವಿಲ್ಲದ ಪ್ರಕರಣಗಳು ಹೆಚ್ಚಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಕೊರೊನಾ ಕೇರ್‌ ಸೆಂಟರ್‌ ತೆರೆಯಲಾಗಿದೆ. ಸುಮಾರು 10ಕ್ಕೂ ಅಧಿಕ ಸ್ಥಳಗಳನ್ನು ಕೊರೊನಾ ಸೋಂಕಿತರ ಕ್ವಾರಂಟೈನ್‌ಗೆ ಗುರುತಿಸಲಾಗಿದೆ. ಮನೆ ಐಸೋಲೇಶನ್‌ಗೆ ಒಪ್ಪದ ಕೋವಿಡ್‌ ಸೋಂಕಿತರನ್ನು ಈ ಕೇರ್‌ ಸೆಂಟರ್‌ನಲ್ಲಿ ಇಡಲಾಗುತ್ತಿದೆ. ಪ್ರತಿ ಸೆಂಟರ್‌ನ ಉಸ್ತುವಾರಿಯನ್ನು ಓರ್ವ ದಾದಿ ಹಾಗೂ ಓರ್ವ ವೈದ್ಯ ನೋಡಿಕೊಳ್ಳಲಿದ್ದಾರೆ. ವೈದ್ಯರು ದಿನಕ್ಕೆ ಎರಡು ಬಾರಿ ರೋಗಿಗಳ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

7 ಕಡೆ ಕೋವಿಡ್‌ ಚಿಕಿತ್ಸೆ
ಜಿಲ್ಲೆಯಲ್ಲಿ ಕೊರೊನಾ ಲಕ್ಷಣ ಇರುವವರಿಗೆ (ಅಧಿಕ ಆನಾರೋಗ್ಯ) ಚಿಕಿತ್ಸೆಗೆ ಡಾ| ಟಿಎಂಎ ಪೈ ಆಸ್ಪತ್ರೆ ಬಳಸಲಾಗುತ್ತಿದೆ. ಕಡಿಮೆ ಲಕ್ಷಣವಿರುವ ರೋಗಿಗಳನ್ನು ಉಡುಪಿ ಜಿಲ್ಲಾಸ್ಪತ್ರೆ, ಆದರ್ಶ ಆಸ್ಪತ್ರೆ, ಕಾರ್ಕಳ ತಾಲೂಕು ಆಸ್ಪತ್ರೆ ಹಾಗೂ ಭುವನೇಂದ್ರ ಕಾಲೇಜು ವಸತಿ ನಿಲಯ, ಕುಂದಾಪುರ ತಾಲೂಕು ಆಸ್ಪತ್ರೆ ಮತ್ತು ಹಳೆಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

800 ಹಾಸಿಗೆ ಮೀಸಲು
ಜಿಲ್ಲೆಯಲ್ಲಿ ಸದ್ಯ ಒಟ್ಟು 16ರಷ್ಟು ವೆಂಟಿಲೇಟರ್‌ ಹಾಗೂ 1,200 ಬೆಡ್‌ ಚಿಕಿತ್ಸೆಗೆ ಸಿದ್ಧವಿದೆ. ಪ್ರಸ್ತುತ 584 ಮಂದಿ ರೋಗಿಗಳಿದ್ದು, ಲಕ್ಷಣವಿರುವವರು ಆಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ತುರ್ತಾಗಿ ಅಗತ್ಯಕ್ಕಾಗಿ ವಿವಿಧ ಡೇ ಕೇರ್‌ ಸೆಂಟರ್‌ನಲ್ಲಿ 800 ಹಾಸಿಗೆ ಕಾದಿರಿಸಲಾಗಿದೆ.

ದೂರುಗಳು!
ಉಡುಪಿ ತಾಲೂಕಿನ ಡೇ ಕೇರ್‌ ಸೆಂಟರ್‌ನಲ್ಲಿ ರೋಗಿಗಳಿಗೆ ಸರಿಯಾದ ಆಹಾರ ನೀಡುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. “ದೂರುಗಳ ಬಗ್ಗೆ ಗಮನಕ್ಕೆ ಬಂದಿವೆ. ಇದನ್ನು ಪರಿಹರಿಸುತ್ತೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಹಿತ ಕೋವಿಡ್‌ ರೋಗಿಗಳಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಕೆಲವು ಮನೆಗಳಲ್ಲಿ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಅಂತಹ ವ್ಯಕ್ತಿಗಳನ್ನು ಡೇ ಕೇರ್‌ ಸೆಂಟರ್‌ನಲ್ಲಿ ಇಡಲಾಗುತ್ತಿದೆ.
– ಡಾ| ಸುಧೀರ್‌ ಚಂದ್ರ ಸೂಡ, ಡಿಎಚ್‌ಒ, ಉಡುಪಿ

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.