Udupi: ಕೃಷ್ಣನೂರಿನಲ್ಲಿ ಜನ್ಮಾಷ್ಟಮಿಗೆ ಸಕಲ ಸಿದ್ಧತೆ

ಕಂಬ ನೆಡುವ ಕಾರ್ಯ | ಹುಲಿವೇಷ, ಜಾನಪದ ನೃತ್ಯಗಳಿಗೆ ಈ ಬಾರಿ ಪರ್ಯಾಯ ಮಠದಿಂದ ನಗದು ಬಹುಮಾನ

Team Udayavani, Aug 18, 2024, 2:55 PM IST

14

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆ. 26ರಂದು ನಡೆಯಲಿದ್ದು, ಆ. 27ರಂದು ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ನಡೆಯಲಿದೆ. ಇದಕ್ಕಾಗಿ ರಥಬೀದಿಯಲ್ಲಿ ಸಿದ್ಧತೆ ಆರಂಭಗೊಂಡಿದ್ದು, ವಿಟ್ಲಪಿಂಡಿಯಂದು ಗೋವಳರು ಮೊಸರು ಕುಡಿಕೆಗಳನ್ನು ಒಡೆಯುವ ಗುರ್ಜಿಗಳನ್ನು ನೆಡುವ ಕೆಲಸ ನಡೆಯುತ್ತಿದೆ.

15 ಗುರ್ಜಿಗಳನ್ನು ರಥಬೀದಿಯಲ್ಲಿ ನೆಡಲಾಗುತ್ತದೆ. ಇದರಲ್ಲಿ ಎರಡು ಮಂಟಪ ಮತ್ತು ಏಳು ಗುರ್ಜಿಗಳು ಕೃಷ್ಣಮಠಕ್ಕೆ ಸಂಬಂಧಿಸಿದವು.

ಏಳು ಗುರ್ಜಿಗಳು ಏಳು ಮಠಗಳಿಗೆ, ಎರಡು ಮಂಟಪಗಳು ಪರ್ಯಾಯ ಮಠ ಮತ್ತು ಶ್ರೀಕೃಷ್ಣಮಠಕ್ಕೆ ಸಂಬಂಧಿಸಿವೆ. ಚಂದ್ರಮೌಳೀಶ್ವರ ದೇವಸ್ಥಾನದ ಎದುರಿನ ಮೂರು, ರಥ ನಿಲ್ಲುವ ಮಂಟಪದ ಬಳಿಕದ ಮೂರು ಗುರ್ಜಿಗಳು ಹೀಗೆ ತಲಾ ಮೂರು ಗುರ್ಜಿಗಳು ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ಸಂಬಂಧಿಸಿದವು.

ಕೃಷ್ಣಾಷ್ಟಮಿ ಸಂಭ್ರಮಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಿ ಪ್ರಮುಖರಿಗೆ ಜವಾಬ್ದಾರಿ ವಹಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಲಹೆ, ಮಾರ್ಗದರ್ಶನದಂತೆ ತಯಾರಿ ಕಾರ್ಯ ಆರಂಭಗೊಂಡು, ಈಗಾಗಲೇ ಹಲವು ಪೂರ್ವಭಾವಿ ಸಭೆಗಳು ನಡೆದಿದೆ.

ಹುಲಿವೇಷಕ್ಕೆ ತಂಡಗಳ ಸಜ್ಜು

ನಗರದಲ್ಲಿ ಹುಲಿ ವೇಷ ತಂಡಗಳು ಅಷ್ಟಮಿಗೆ ಹುಲಿ ಕುಣಿತ ಪ್ರದರ್ಶಿಸಲು ಸಜ್ಜುಗೊಳ್ಳುತ್ತಿವೆ. ನಗರ, ಗ್ರಾಮಾಂತರ ಭಾಗದ ಖ್ಯಾತ ಹುಲಿವೇಷಧಾರಿಗಳ ತಂಡದ ಪೋಸ್ಟರ್‌ಗಳು ರಾರಾಜಿಸುತ್ತಿವೆ. ವಿವಿಧ ಸಂಘ, ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಮತ್ತು ಹುಲಿ ಕುಣಿತ ಸ್ಪರ್ಧೆ ಆಯೋಜಿಸಲು ತಯಾರಿ ನಡೆಸಿವೆ.

ಭಕ್ತರು, ಪ್ರವಾಸಿಗರು

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಉತ್ಸವ ಕಣ್ತುಂಬಿಕೊಳ್ಳಲು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. 4ನೇ ಶನಿವಾರ, ರವಿವಾರ ರಜೆ ಇರುವುದರಿಂದ ಮತ್ತು ಆ. 26, 27 ಹೆಚ್ಚುವರಿ ರಜೆ ಇದ್ದಲ್ಲಿ ಸ್ಥಳೀಯರು ಸಹಿತ, ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಬಹುತೇಕ ಹೊಟೇಲ್‌, ಛತ್ರ, ಲಾಡ್ಜ್ಗಳಲ್ಲಿ ದೂರದ ಊರಿನ ಭಕ್ತರು ಕೊಠಡಿಗಳನ್ನು ಕಾದಿರಿಸಿದ್ದಾರೆ.

ನಗದು ಬಹುಮಾನ

ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮುದ್ದುಕೃಷ್ಣ, ರಂಗೋಲಿ, ಚಿತ್ರಕಲೆ ಸಹಿತ ಮೊದಲಾದ ಸ್ಪರ್ಧೆಗಳನ್ನು ಕೃಷ್ಣಮಠದಲ್ಲಿ ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪರ್ಯಾಯ ಮಠದ ವತಿಯಿಂದ ನಗದು ಬಹುಮಾನವನ್ನು ಪೌರಾಣಿಕ, ಹುಲಿವೇಷ, ಜಾನಪದ ನೃತ್ಯಗಳಿಗೆ ಕೊಡಲಾಗುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾಸೋತ್ಸವದ ನಿಮಿತ್ತ ಆ. 1ರಿಂದಲೇ ವಿವಿಧ ಕಾರ್ಯಕ್ರಮ, ಸ್ಪರ್ಧೆ ಇತ್ಯಾದಿ ಆರಂಭಗೊಂಡಿದೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.