Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ, ಟ್ರಾಫಿಕ್ ಸಮರ್ಥ ನಿರ್ವಹಣೆಗೆ ಸ್ಥಳೀಯರ ಆಗ್ರಹ
Team Udayavani, Dec 17, 2024, 3:53 PM IST
ಉಡುಪಿ: ಅಂಬಲಪಾಡಿ ಬೈಪಾಸ್‌ನಲ್ಲಿ ಓವರ್‌ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿ ಸೋಮವಾರ ಆರಂಭವಾಗಿದ್ದು, ಈ ಮಧ್ಯೆ ಸ್ಥಳೀಯರು ವಾಹನ ದಟ್ಟಣೆ ಸಮರ್ಥ ನಿರ್ವಹಣೆ ಆಗಬೇಕು ಮತ್ತು ಅಗತ್ಯ ಸಂಚಾರ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಘಟನೆ ಸ್ಥಳಕ್ಕೆ ಭೇಟಿ ನೀಡಿ ಆಗ್ರಹಿಸಿದರು.
ಗುತ್ತಿಗೆ ಪಡೆದ ಸಂಸ್ಥೆಯು ಬೆಳಗ್ಗೆಯಿಂದಲೇ ಹೆದ್ದಾರಿಯಲ್ಲಿ ಜೆಸಿಬಿ ಮೂಲಕ ಅಗೆಯುವ ಕಾರ್ಯ ನಡೆಸಿದೆ. ಹೆದ್ದಾರಿಯ ಚತುಷ್ಪಥ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಎರಡು ಕಡೆಗಳಲ್ಲಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ಆರಂಭವಾಗಿದೆ. ಕಾಮಗಾರಿ ಆರಂಭದ ಮೊದಲ ದಿನವೇ ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿದೆ.
ಅಂಬಲಪಾಡಿ ಜಂಕ್ಷನ್‌ನಿಂದ ಬಲಾಯಿಪಾದೆ ಕಡೆಗೆ 500 ಮೀಟರ್ ಹಾಗೂ ಕರಾವಳಿ ಬೈಪಾಸ್ ಕಡೆಗೆ 500 ಮೀಟರ್ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಿರುವ ಹೆದ್ದಾರಿ ಬ್ಲಾಕ್ ಮಾಡಿ, ಸರ್ವೀಸ್ ರಸ್ತೆ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಾಹನ ದಟ್ಟಣೆ ಆಗದಂತೆ ವಿಶೇಷ ಕ್ರಮ ತೆಗೆದುಕೊಳ್ಳುವ ಅಗತ್ಯವೂ ಇದೆ. ಅಲ್ಲಲ್ಲಿ, ಸೂಚನ ಫಲಕಗಳನ್ನು ಅಳವಡಿಸಿ, ಹೆಚ್ಚುವರಿ ಸಿಬಂದಿ ನಿಯೋಜನೆಯೂ ಮಾಡಬೇಕಾಗುತ್ತದೆ. ಕೆಲವು ದಿನಗಳ ಮಟ್ಟಿಗೆ ಹೆಚ್ಚುವರಿ ಸಂಚಾರಿ ಪೊಲೀಸರ ನಿಯೋಜನೆಯೂ ಆಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಹೇಗಿರಲಿದೆ ಓವರ್‌ಪಾಸ್?
ಈ ಓವರ್ ಪಾಸ್ ಮೇಲೆ ವಾಹನ ಸಂಚಾರಿಸುವ ಹೆದ್ದಾರಿ ಇರಲಿದೆ. ಓವರ್‌ಪಾಸ್ ಒಳಭಾಗದಲ್ಲಿ ಎರಡು ಕಡೆ ತಲಾ 15 ಮೀಟರ್ ಅಗಲದ ರಸ್ತೆ ಬರಲಿದೆ. ರಸ್ತೆ ಪಕ್ಕದಲ್ಲಿ ಪಾದಚಾರಿಗಳ ಸಂಚಾರಕ್ಕೆ ಫುಟ್‌ಪಾತ್ ಕೂಡ ಬರಲಿದೆ. 23.53 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, 1.28 ಕಿ.ಮೀ.ಉದ್ದ ಮೇಲ್ಸೇತುವೆ ಇದಾಗಿದೆ. 5.5ಮೀ. ಎತ್ತರದಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ ಕಾರ್ಲ ಕನ್‌ಸ್ಟ್ರಕ್ಷನ್ ಇದರ ಗುತ್ತಿಗೆ ವಹಿಸಿಕೊಂಡಿದೆ. ಮಳೆಗಾಲ ಹೊರತುಪಡಿಸಿ ಒಂದುವರೆ ವರ್ಷದ ಅವಧಿಯಲ್ಲಿ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ.
ಸಮರ್ಪಕ ನಿರ್ವಹಣೆ ಅಗತ್ಯ
ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅದರ ಸಮರ್ಪಕ ನಿರ್ವಹಣೆ ಆಗಬೇಕು. ತಿರುವು ಎಲ್ಲಿ ಎನ್ನುವುದರ ಮಾರ್ಗಸೂಚಿ ಫಲಕಗಳನ್ನು ಅಳವಡಿಸಬೇಕು. ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಖುದ್ದು ಹಾಜರಿದ್ದು ಕಾಮಗಾರಿ ಪರಿಶೀಲಸಬೇಕು. ಸ್ಥಳೀಯರಿಗೆ ಈ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂಬುದು ಸೇರಿದಂತೆ ಸ್ಥಳೀಯ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಬ್ಲಾಕ್ ಲಿಸ್ಟ್‌ನಿಂದ ಅಪಾಯಕಾರಿ ಸ್ಥಳಗಳೇ ಔಟ್!
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ
Karkala: ಹೋಂ ನರ್ಸ್ 9 ಲಕ್ಷ ರೂ. ವಂಚನೆಗೈದ ಪ್ರಕರಣ: ಮುಂಬಯಿಯಲ್ಲಿ ಇಬ್ಬರು ಆರೋಪಿಗಳ ಸೆರೆ
MUST WATCH
ಹೊಸ ಸೇರ್ಪಡೆ
2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.