ಉಡುಪಿ: ಸರ್ವಂ ಯೋಗಮಯಂ… ರಾಮ್‌ದೇವ್‌ ನೇತೃತ್ವದ ಯೋಗ ಶಿಬಿರಕ್ಕೆ ಸಿದ್ಧತೆ

Team Udayavani, Nov 15, 2019, 8:03 PM IST

tt-4

ರಾಮ್‌ದೇವ್‌ ಅವರು ನಡೆಸಿಕೊಡುವ ಯೋಗ ಶಿಬಿರ ವೇದಿಕೆಯ ಅಂತಿಮ ಸಿದ್ಧತೆ.

ಉಡುಪಿ: ಶನಿವಾರದಿಂದ ಐದು ದಿನಗಳ ಕಾಲ ಉಡುಪಿ ಶ್ರೀಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ ನೇತೃತ್ವದಲ್ಲಿ ನಡೆಯುವ ಬೃಹತ್‌ ಯೋಗ ಶಿಬಿರಕ್ಕೆ ಉಡುಪಿ ಅಣಿಗೊಂಡಿದೆ.

ಶುಕ್ರವಾರ ರಾಮ್‌ದೇವ್‌ ಅವರನ್ನು ಬರಮಾಡಿಕೊಂಡ ಕರಾವಳಿ ಬೈಪಾಸ್‌ನಿಂದ ಕಲ್ಸಂಕ ಮಾರ್ಗ, ಪಾರ್ಕಿಂಗ್‌ ಪ್ರದೇಶಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ. ವಿವಿಧ ಕಡೆಗಳಲ್ಲಿ ರಾಮ್‌ದೇವ್‌ ಮತ್ತು ಪರ್ಯಾಯ ಶ್ರೀಪಲಿಮಾರು ಸ್ವಾಮೀಜಿಯವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಪ್ರದರ್ಶಿಸಲಾಗಿದೆ.

ಎರಡು ದಶಕಗಳಿಂದ ಜನರ ಬಾಯಲ್ಲಿ ಯೋಗವನ್ನು ಬ್ರಾಂಡ್‌ ಆಗಿ ಪರಿವರ್ತಿಸಿದ ರಾಮ್‌ದೇವ್‌ 2011ರಲ್ಲಿ ಉಡುಪಿಗೆ ಆಗಮಿಸಿ ಬೃಹತ್‌ ಯೋಗ ಶಿಬಿರವನ್ನು ನಡೆಸಿದ್ದರು. ಆಗ ಇರುವಂತ ಯೋಗ ವಾತಾವರಣ ಮಗದೊಮ್ಮೆ ಉಡುಪಿಯಲ್ಲಿ ಸೃಷ್ಟಿಯಾಗಿದೆ. ವಿಶೇಷವಾಗಿ ಆರೋಗ್ಯ ಕಾಳಜಿಯವರು ರಾಮ್‌ದೇವ್‌ ಅವರ ಸಂದೇಶವನ್ನು ನೇರವಾಗಿ ಆಲಿಸಲು ಕುತೂಹಲಿಗಳಾಗಿದ್ದಾರೆ. ಯೋಗಾಸನಗಳನ್ನು ಪ್ರದರ್ಶಿಸುತ್ತ ನಿರ್ದಿಷ್ಟ ಯೋಗಾಸನಗಳ ಪ್ರಯೋಜನಗಳನ್ನು ತಿಳಿಸುವ ಜತೆಗೆ ಇತರ ಸಂದೇಶಗಳನ್ನು ನೀಡುವುದು ರಾಮ್‌ದೇವ್‌ ವೈಶಿಷ್ಟ್ಯ. 2011ರಲ್ಲಿ ಹೀಗೆಯೇ ಅವರು ಮಾಡಿದ್ದರು. ಆಗ ಎಂಜಿಎಂ ಕಾಲೇಜಿನ ಮೈದಾನದಲ್ಲಿ ನಡೆದಿತ್ತು.

ಪಾರ್ಕಿಂಗ್‌ ಪ್ರದೇಶದಲ್ಲಿ ಸಾವಿರಾರು ಜನರು ಕುಳಿತುಕೊಂಡು ಯೋಗಾಸನಗಳನ್ನು ಮಾಡುವಂತಾಗಲು ಮಧ್ಯಭಾಗದಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಹೊರಗಿನಿಂದ ಬರುವ ವಾಹನಗಳ ನಿಲುಗಡೆಗೆ ಪಾರ್ಕಿಂಗ್‌ ಪ್ರದೇಶದ ಬಳಿಯ ಗದ್ದೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಶಿಬಿರದ ಸಮಯ ಹೊರತುಪಡಿಸಿ ಶಿಬಿರ ಡೇರೆಯ ಸುತ್ತ ವಾಹನ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಗುಜರಾತ್‌ನಿಂದ ಆರು ಲಾರಿಗಳಲ್ಲಿ ಬಂದ ಪರಿಕರಗಳಿಂದ ವೇದಿಕೆ ಸಿದ್ಧತೆ ಕೆಲಸ ಶುಕ್ರವಾರ ರಾತ್ರಿವರೆಗೂ ನಡೆಯುತ್ತಿತ್ತು. ಇದೆಲ್ಲ ಕೆಲಸಗಳನ್ನೂ ಪತಂಜಲಿ ಸಮಿತಿಯವರು ನೇರವಾಗಿ ನಿರ್ವಹಿಸುತ್ತಿದ್ದಾರೆ. ಹರಿದ್ವಾರ ಮತ್ತು ರಾಜ್ಯದ ವಿವಿಧ ಕಡೆಗಳಿಂದ ಬಂದ ಪತಂಜಲಿ ಸಮಿತಿಯ ಕಾರ್ಯಕರ್ತರು ಶಿಬಿರ ಸ್ಥಾನದ ಪಕ್ಕದಲ್ಲಿರುವ ಪಲಿಮಾರು ಮಠದ ರಾಮಧಾಮ ಅತಿಥಿಗೃಹದಲ್ಲಿದ್ದು ನಡೆಯುತ್ತಿರುವ ಕೆಲಸಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.