Udupi-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ
Team Udayavani, Feb 1, 2024, 10:03 AM IST
ಶಿರ್ವ: ಮುಂಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ನೇಮಕಗೊಂಡಿರುವ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.
ಸಂಘದ ಸ್ವಯಂಸೇವಕರಾಗಿ, ಭಾರತೀಯ ಜನತಾ ಪಾರ್ಟಿಯಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿರುವ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ 2 ಬಾರಿ, ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ 2 ಬಾರಿ ಮತ್ತು ಕಾಪು ಕ್ಷೇತ್ರಾಧ್ಯಕ್ಷರಾಗಿ 1 ಅವಧಿಗೆ ಸೇವೆ ಸಲ್ಲಿಸಿ, ಪ್ರಸಕ್ತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸತತ ಮೂರು ಅವಧಿಗೆ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅನೇಕ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ-ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ವಿವಿಧ ಸ್ತರದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ದಿನಕರ ಪೂಜಾರಿ, ರಾಘವೇಂದ್ರ ಕುತ್ಪಾಡಿ ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.