ಪರ್ಯಾಯ ಸ್ವಚ್ಛತೆಗೆ 100 ಹೊರಗುತ್ತಿಗೆ ಪೌರ ಕಾರ್ಮಿಕರು
ಪೌರಕಾರ್ಮಿಕರ ಕೊರತೆ: 49 ಹುದ್ದೆಗಳು ಖಾಲಿ
Team Udayavani, Jan 4, 2022, 5:10 AM IST
ಉಡುಪಿ: ಉಡುಪಿ ನಗರಸಭೆ ಸ್ವಚ್ಛತೆ ವಿಚಾರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ವಿಶೇಷ ಮನ್ನಣೆ ಪಡೆದಿದ್ದು, ನಗರಸಭೆಯಲ್ಲಿ ಪೌರ ಕಾರ್ಮಿಕ ಹುದ್ದೆಗಳು ಖಾಲಿ ಇರುವುದು ನಗರದ ಸ್ವಚ್ಛತಾ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ.
ಹೀಗಿರುವ ಪೌರಕಾರ್ಮಿಕರೇ ಹೆಚ್ಚುವರಿ ಕೆಲಸಗಳನ್ನು ಮಾಡುವ ಮೂಲಕ ಸ್ವಚ್ಛತೆಗಾಗಿ ಶ್ರಮಿಸುತ್ತಿದ್ದಾರೆ.
ನಗರದಲ್ಲಿ ಮುಂಬರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವ ಉಡುಪಿ ಅಣಿಯಾಗುತ್ತಿದೆ. ಇದಕ್ಕಾಗಿ ನಗರಸಭೆ ಹೆಚ್ಚುವರಿಯಾಗಿ ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇಮಿಸಿಕೊಂಡಿದೆ.
ಉಡುಪಿ ನಗರ ಸಭೆಯಲ್ಲಿ ಮಂಜೂರಾತಿ ಹುದ್ದೆಗಳು 219 ಇದ್ದು, 170 ಮಂದಿ ಹುದ್ದೆಗಳು ಭರ್ತಿ ಇದೆ. 49 ಹುದ್ದೆಗಳು ಖಾಲಿ ಇವೆ. 170 ಪೌರಕಾರ್ಮಿಕರು ಕಚೇರಿ, ನಗರದ ಮುಖ್ಯ ರಸ್ತೆಗಳ ಸ್ವಚ್ಛತೆ, ಸಾರ್ವಜನಿಕ ಸ್ಥಳದಲ್ಲಿಸ್ವಚ್ಛ ಕಾರ್ಯ, ಬ್ಲಾಕ್ ಸ್ಪಾಟ್‌ಗಳ ತೆರವು, ಅಲ್ಲದೆ 35 ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಸಂಬಂಧಿಸಿ ಚರಂಡಿ ಹೂಳು ತೆರವು ಸಹಿತ ಮೊದಲಾದ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದರಲ್ಲಿ ಶೇ.10ರಿಂದ 20 ಮಂದಿ ವಾರದ ರಜೆ. ಅನಾರೋಗ್ಯ, ವಿವಿಧ ಸಭೆ, ಸಮಾರಂಭ ಕಾರಣಗಳಿಂದ ರಜೆಯಲ್ಲಿರುತ್ತಾರೆ. ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ ಬಹುತೇಕ ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಪ್ರಸ್ತುತ ಇರುವ ಪೌರಕಾರ್ಮಿಕರು ಹೆಚ್ಚುವರಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ.
ಹೊರಗುತ್ತಿಗೆಯಲ್ಲೂ ಕೆಲಸ
ಡ್ರೈನೇಜ್ ವ್ಯವಸ್ಥೆ ಸರಿಪಡಿಸಲು, ತ್ಯಾಜ್ಯ ಸಂಗ್ರಹ ಇನ್ನಿತರ ಕೆಲಸಗಳಿಗೆ ಹೊರಗುತ್ತಿಗೆಯಲ್ಲಿಯೂ ಕೆಲವು ಮಂದಿ
ಪೌರಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.
ಹಲವಾರು ವರ್ಷಗಳಿಂದ ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದೇವೆ. ನಮಗೂ ಸರಕಾರ ಖಾಯಂ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಪ್ಯಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿದೆ ಚೀನಾ! ಉಪಗ್ರಹ ಚಿತ್ರದಿಂದ ಸ್ಪಷ್ಟ
ಪರ್ಯಾಯ ಸ್ವಚ್ಛತಾ ಕಾರ್ಯಕ್ಕೆ 100 ಮಂದಿ
ಪರ್ಯಾಯ ಸ್ವಚ್ಛತಾ ಕಾರ್ಯದ ಸಲುವಾಗಿ ನಗರಸಭೆ ವ್ಯವಸ್ಥಿತ ಯೋಜನೆ ರೂಪಿಸಿದೆ. 100 ಮಂದಿ ಪೌರಕಾರ್ಮಿಕರನ್ನು ತಾತ್ಕಾಲಿಕವಾಗಿ ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲಾಗಿದೆ ಜ. 4 ರಿಂದ 15 ದಿನಗಳವರೆಗೆ ಇವರು ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ಕೃಷ್ಣ ಮಠದ ರಥ ಬೀದಿ, ರಾಜಾಂಗಣ, ಪಾರ್ಕಿಂಗ್, ರಾಯಲ್ ಗಾರ್ಡನ್ ಪಾರ್ಕಿಂಗ್, ಮಠಕ್ಕೆ ಹೋಗುವ ರಸ್ತೆಗಳಾದ ತೆಂಕಪೇಟೆ, ಬಡಗುಪೇಟೆ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣದಿಂದ ಮಠಕ್ಕೆ ಹೋಗುವ ರಸ್ತೆಗಳು ಹಾಗೂ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಪರ್ಯಾಯ ಮಹೋತ್ಸವದ ಮೆರವಣಿಗೆ ರಸ್ತೆಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಹಗಲೂ ಮತ್ತು ರಾತ್ರಿ ಸಮಯಗಳಲ್ಲಿ ನಿರ್ವಹಿಸಬೇಕಾಗಿರುತ್ತದೆ. ಇದರಂತೆ 100 ಜನ ಪೌರಕಾರ್ಮಿಕರನ್ನು ತಲಾ 50 ಜನರ 2 ತಂಡಗಳನ್ನಾಗಿ ವಿಭಾಗಿಸಿ ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಸ್ವಚ್ಛತೆ ಕೆಲಸಗಳನ್ನು ನಡೆಸಲಾಗುತ್ತದೆ. ಉದ್ದದ ಹಿಡಿ ಪೊರಕೆ, ಮೆಟಲ್ ಟ್ರೇ, ಪ್ಲಾಸ್ಟಿಕ್ ಬುಟ್ಟಿ, ಪ್ಲಾಸ್ಕ್, ಮಾಸ್ಕ್, ಗ್ಲೌಸ್, ಗುರುತಿನ ಚೀಟಿ, ರೇಡಿಯಂ ಜಾಕೆಟ್ ತಳ್ಳುಗಾಡಿ ಮತ್ತು 1 ಲಕ್ಷ ರೂ ವೆಚ್ಚದಲ್ಲಿ ಫಿನಾಯಿಲ್, ಬೈಟೆಕ್ಸ್, ಬ್ಲೀಚಿಂಗ್ ಪೌಡರ್ ಒದಗಿಸಲಾಗುತ್ತದೆ. ನಗರದ 34 ಕಡೆಗಳಲ್ಲಿ ಮೊಬೈಲ್ ಟಾಯ್ಲೆಟ್ ಬ್ಲಾಕ್‌ಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಕೊರತೆ ಮತ್ತು ನೇಮಕಾತಿ ಸಂಬಂಧಿಸಿ ಈಗಾಗಲೆ ನಗರಸಭೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಸರಕಾರದ ಮಟ್ಟದಲ್ಲಿಯೂ ಈ ಬಗ್ಗೆ ಪರಿಶೀಲನೆಯಾಗಬೇಕಿದೆ. ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸ್ವಚ್ಛತಾ ಕಾರ್ಯಕ್ಕೆ ಹೆಚ್ಚುವರಿ ಹೊರಗುತ್ತಿಗೆಯಲ್ಲಿ ಪೌರ ಕಾರ್ಮಿಕರನ್ನು ನೇಮಿಸಲಾಗುತ್ತದೆ.
– ಸುಮಿತ್ರಾ ನಾಯಕ್, ಅಧ್ಯಕ್ಷೆ , ಉಡುಪಿ ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.