ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

Team Udayavani, Mar 30, 2023, 7:20 AM IST

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಉಡುಪಿ: ಜಿಲ್ಲಾದ್ಯಂತ ಚುನಾವಣೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ 1,111 ಬೂತ್‌ಗಳಿಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಿದ್ದೇವೆ. ಕ್ಷೇತ್ರವಾರು ಚುನಾವಣಾಧಿಕಾರಿಗಳ ನಿಯೋಜನೆ ಮಾಡಿದ್ದೇವೆ. 10,29,678 ಮತ ದಾರರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದರು.

ಜಿಲ್ಲೆಯಲ್ಲಿ 17,927 ಯುವ ಮತದಾರರು 11,751 ಪಿಡಬ್ಲ್ಯುಡಿ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರ ಪಟ್ಟಿ ಸಿದ್ಧಪಡಿಸಿದ್ದೇವೆ. ಬೈಂದೂರಿನಲ್ಲಿ 5,865, ಕುಂದಾಪುರದಲ್ಲಿ 6,209, ಉಡುಪಿಯಲ್ಲಿ 7,827, ಕಾಪುವಿನಲ್ಲಿ 5,778 ಹಾಗೂ ಕಾರ್ಕಳದಲ್ಲಿ 5,589 ಮತದಾರರು ಸೇರಿದಂತೆ ಜಿಲ್ಲೆಯಲ್ಲಿ 31,286 ಮತದಾರರು 80 ವರ್ಷ ಮೇಲ್ಪಟ್ಟವರಾಗಿದ್ದಾರೆ. ಇವರಿಗೆ ಅಂಚೆ ಮತದಾನದ ವ್ಯವಸ್ಥೆಗೂ ಅವಕಾಶವಿದೆ. ಇದು ಕಡ್ಡಾಯವಲ್ಲ. ಮತದಾನದ ದಿನದಂದು ಮತಗಟ್ಟೆಗೆ ಬಂದು ಮತದಾನ ಮಾಡುವವರಿಗೂ ಅಗತ್ಯ ವ್ಯವಸ್ಥೆ ಕಲ್ಪಿಸಲಿದ್ದೇವೆ. ದಿವ್ಯಾಂಗರಿಗೂ ಅಗತ್ಯ ಸೌಲಭ್ಯ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಶೇಷ ನಿಗಾ
ಕಾರ್ಯಕ್ರಮ, ಸಭೆ ಸಮಾರಂಭಗಳ ಮೇಲೆ ವಿಶೇಷ ನಿಗಾ ವಹಿಸಲು 15 ವೀಡಿಯೋ ತಂಡ, 45 ಫ್ಲೈಯಿಂಗ್‌ ಸ್ವಾéಡ್‌, 17 ಸರ್ವೇಲೆನ್ಸ್‌ ಟೀಮ್‌, 92 ಸೆಕ್ಟರ್‌ ಆಫೀಸರ್‌ ಟೀಮ್‌, 5 ವೀಡಿಯೋ ವ್ಯೂವಿಂಗ್‌ ಟೀಮ್‌, 5 ಎಂಸಿಸಿ ನೋಡಲ್‌ ಆಫೀಸರ್‌ ಹಾಗೂ 5 ಖರ್ಚುವೆಚ್ಚ ಪರಿಶೀಲನ ತಂಡ ರಚನೆ ಮಾಡಲಾಗಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೇ ಅಕ್ಷಯ್‌ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಉಪಸ್ಥಿತರಿದ್ದರು.

ಬ್ಯಾನರ್‌, ಕಟೌಟ್‌ಗೆ ಅನುಮತಿ ಇಲ್ಲ
ಉಡುಪಿ, ಮಾ. 29: ಚುನಾವಣೆ ನೀತಿ ಸಂಹಿತೆ ಜಾರಿಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭ ಕೋರುವ ಹಾಗೂ ಕಾರ್ಯಕ್ರಮಗಳ ಬಗೆಗಿನ ಬ್ಯಾನರ್‌, ಬಂಟಿಂಗ್ಸ್‌, ಕಟೌಟ್‌ ಅಳವಡಿಸಲು, ಭಿತ್ತಿಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು, ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೇಲೂ ಕಣ್ಣು
ಸಾರ್ವಜನಿಕರಿಗೆ ನಿತ್ಯದ ಜೀವನಕ್ಕೆ ಯಾವುದೇ ಸಮಸ್ಯೆಯಾಗದಂತೆ ನೀತಿ ಸಂಹಿತೆ ಜಾರಿ ಮಾಡಲಾಗುವುದು. ಸಾಮಾಜಿಕ ಜಾಲತಾಣದ ಮೇಲೂ ವಿಶೇಷ ಕಣ್ಣಿಟ್ಟಿದ್ದೇವೆ. ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಯುಟ್ಯೂಬ್‌ ಚಾನಲ್‌ ಪ್ರಚಾರದ ಮೇಲೂ ಗಮನ ಹರಿಸಲಿದ್ದೇವೆ ಎಂದರು.

ಖಾಸಗಿ ಸಭೆ ಸಮಾರಂಭ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿರ್ಬಂಧ ಇಲ್ಲ. ಆದರೆ ಅಭ್ಯರ್ಥಿಗಳು ಖಾಸಗಿ, ಸಾರ್ವಜನಿಕ ಸಭೆ ಸಮಾರಂಭಗಳನ್ನು ತಮ್ಮ ಮತಪ್ರಚಾರಕ್ಕೆ ಬಳಸಿಕೊಂಡಾಗ ಅದರ ವೆಚ್ಚ ಅಭ್ಯರ್ಥಿ ವ್ಯಾಪ್ತಿಗೆ ಸೇರುತ್ತದೆ. ಮದುವೆ, ವೈಯಕ್ತಿಕ ಸಮಾರಂಭಗಳನ್ನು ಮನೆಗಳಲ್ಲಿ ಮಾಡಿಕೊಳ್ಳಲು ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕ ಸಮಾರಂಭಕ್ಕೆ ಅನುಮತಿ ಪಡೆಯಬೇಕಾಗುತ್ತದೆ ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್‌. ತಿಳಿಸಿದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಯಕ್ಷಗಾನ, ಕೋಲ, ನೇಮೋತ್ಸವ ಇತ್ಯಾದಿಗಳ ಸಂಬಂಧ ಪರಿಶೀಲಿಸಿ ನಿರ್ಧರಿಸಲಾಗುವುದು.
-ಕೂರ್ಮಾರಾವ್‌ ಎಂ., ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.