Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

ಪಾದಚಾರಿಗಳಿಗೆ ನಡು ರಸ್ತೆಯಲ್ಲಿ ಸಂಚಾರ, ಸಮಸ್ಯೆ ಪರಿಹಾರಕ್ಕೆ ಆಗ್ರಹ

Team Udayavani, Nov 12, 2024, 1:43 PM IST

7(1

ಉಡುಪಿ: ನಗರದಲ್ಲಿ ಫ‌ುಟ್‌ಪಾತ್‌ಗಳನ್ನು ಅತಿಕ್ರಮಣ ಮಾಡಿಕೊಂಡಿ ರುವ ಪರಿಣಾಮ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.

ಕೆಲವೆಡೆ ಅಂಗಡಿ – ಮುಂಗಟ್ಟುಗಳು ಫ‌ುಟ್‌ಪಾತ್‌ಗಳನ್ನು ಅತಿಕ್ರಮಣ ಮಾಡಿಕೊಂಡರೆ ಇನ್ನು ಕೆಲವೆಡೆ ಫ‌ುಟ್‌ಪಾತ್‌ಗಳಲ್ಲಿಯೇ ವ್ಯಾಪಾರ ನಡೆಸಲಾಗುತ್ತಿದೆ. ಇನ್ನು ಹಲವೆಡೆ ಫ‌ುಟ್‌ಪಾತ್‌ಗಳು ಏರುಪೇರಾಗಿದ್ದು, ಹೊಂಡಗಳು ಕಾಣಿಸಿ ಕೊಳ್ಳುತ್ತಿವೆ. ಪರಿಣಾಮ ಪಾದಚಾರಿಗಳು ಹೊಂಡಗಳಿಗೆ ಬೀಳುವ ಅಪಾಯವೂ ಇದೆ. ನಗರದ ಕಿನ್ನಿಮೂಲ್ಕಿಯಿಂದ ಸರ್ವಿಸ್‌ ಬಸ್‌ ತಂಗುದಾಣದವರೆಗಿನ ಫ‌ುಟ್‌ಪಾತ್‌ಗಳಲ್ಲಿ ಈ ದೃಶ್ಯಾವಳಿ ಕಾಣಬಹುದು.

ಸಿಗ್ನಲ್‌ ಕಂಬಗಳ ದಾಸ್ತಾನು
ಹಳೆ ಡಯಾನ ವೃತ್ತದ ಬಳಿ ಪಾದಚಾರಿ ರಸ್ತೆಯ ಮೇಲೆ ಬೃಹತ್‌ ಗಾತ್ರದ ಕಬ್ಬಿಣದ ಕೊಳವೆ ಹಾಗೂ ಇನ್ನಿತರ ಪರಿಕರಗಳನ್ನು ದಾಸ್ತಾನು ಇರಿಸಲಾಗಿದ್ದು, ಪಾದಚಾರಿಗಳು ಸಹಿತ ವಾಹನ ಸವಾರರಿಗೆ ದಿನನಿತ್ಯ ಅಡಚಣೆ ಉಂಟಾಗುತ್ತಿದೆ. ಇವುಗಳು ಸಿಗ್ನಲ್‌ ಕಂಬಗಳ ನಿರ್ಮಾಣ ಕಾಮಗಾರಿಗೆ ತಂದಿಟ್ಟಿರುವ ಪರಿಕರಗಳು ಎಂದು ತಿಳಿದುಬಂದಿದೆ. ಎರಡು ವರ್ಷಗಳಿಂದಲೂ ಇದನ್ನು ಇಲ್ಲಿ ದಾಸ್ತಾನು ಇರಿಸಲಾಗಿದ್ದು, ವಾಹನ ಅಪಘಾತಗಳಿಗೂ ಕಾರಣವಾಗುತ್ತಿವೆ. ಪಾದಚಾರಿ ರಸ್ತೆಯನ್ನು ಕೊಳವೆಗಳು ಕಬಳಿಸಿರುವುದರಿಂದ ಪಾದಚಾರಿಗಳು ನಡು ರಸ್ತೆಯಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಆದಷ್ಟು ಬೇಗ ಇಲ್ಲಿನ ಕಬ್ಬಿಣದ ಪರಿಕರಗಳನ್ನು ನಗರಾಡಳಿತ, ಜಿಲ್ಲಾಡಳಿತವು ವಾರಸುದಾರರ ಮೂಲಕ ವಿಲೇವಾರಿ ಮಾಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸಂಚಾರ ದಟ್ಟಣೆಗೂ ಕಾರಣ
ಹಬ್ಬ ಹರಿದಿನಗಳ ಸಂದರ್ಭದಲ್ಲಿ ನಗರಸಭೆಯ ಮುಂಭಾಗದ ಫ‌ುಟ್‌ಪಾತ್‌ಗಳಲ್ಲಿಯೇ ಹೂ ಮಾರಾಟ ಮಾಡುವ ಪರಿಣಾಮ ಸಂಚಾರ ದಟ್ಟನೆ ಕಂಡುಬರುತ್ತಿದೆ. ಅಲ್ಲದೆ ವಾಹನಗಳನ್ನು ತಿರುವು ಪಡೆದುಕೊಳ್ಳುವವರೂ ಹರಸಾಹಸಪಡುವ ದೃಶ್ಯಾವಳಿಗಳೂ ಕಾಣಸಿಗುತ್ತವೆ. ಪ್ರಯಾಣಿಕರು ರಸ್ತೆಯ ನಡುವೆಯೇ ಬಸ್‌ಗಳಿಗೆ ಹತ್ತಿ ಇಳಿಯುವ ಘಟನೆಗಳೂ ನಡೆಯುತ್ತಿವೆ. ಕೆಲವೆಡೆ ನೋ ಪಾರ್ಕಿಂಗ್‌ ಸಹಿತ ವಿವಿಧ ಸಂಚಾರ ಸಂಜ್ಞೆಗಳನ್ನು ಅಳವಡಿಸಿದ್ದರೂ ಸವಾರರು ಎಲ್ಲೆಂದರಲ್ಲಿ ಪಾರ್ಕಿಂಗ್‌ ಮಾಡುವುದರಿಂದ ಪಾದಚಾರಿಗಳು ಸಹಿತ ವಾಹನ ಸವಾರರು ಸಂಚಾರಕ್ಕೆ ಹರಸಾಹಸ ಪಡುವ ಘಟನೆಗಳೂ ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಹೂ ಮಾರಾಟಕ್ಕೆ ನಗರಾಡಳಿತದಿಂದ ಪ್ರತ್ಯೇಕ ಜಾಗ ಸೂಚಿಸಿ ವ್ಯವಸ್ಥೆ ಕಲ್ಪಿಸಬೇಕು ಎಂಬ ಆಗ್ರಹವೂ ಇದೆ.

ಸೂಕ್ತ ಕ್ರಮ
ನಗರದ ವಿವಿಧ ಭಾಗಗಳಲ್ಲಿ ಫ‌ುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬಂದಲ್ಲಿ ಅವರಿಗೆ ದಂಡ ವಿಧಿಸುವ ಜತೆಗೆ ಕೂಡಲೇ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಸಿಗ್ನಲ್‌ ಕಂಬಗಳ ತೆರವಿಗೂ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು.
-ಡಾ| ಉದಯ ಶೆಟ್ಟಿ ,ಪೌರಾಯುಕ್ತರು (ಪ್ರಭಾರ) ನಗರಸಭೆ

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.