Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Team Udayavani, Nov 5, 2024, 6:00 PM IST
ಉಡುಪಿ: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನ.6ರ ಬುಧವಾರ ಉಡುಪಿ ಜಿಲ್ಲಾ ಬಿಜೆಪಿ, ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ಖಂಡಿಸಿ, ನ.6ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ‘ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ’ ನಡೆಯಲಿದೆ.
ನ.6 ಬುಧವಾರ ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ಆರಂಭವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಅಹವಾಲು ಸಲ್ಲಿಸಲಾಗುವುದು.
ಈ ಪ್ರತಿಭಟನಾ ನಡಿಗೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ನ.7 ಮತ್ತು 8 ರಂದು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರೈತ ಬಂಧುಗಳ ಜೊತೆ ಸೇರಿ ತಾಲೂಕು ಕಚೇರಿಗೆ ತೆರಳಿ ಪಹಣಿ ಪತ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.