Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ
Team Udayavani, Oct 17, 2024, 7:30 AM IST
ಉಡುಪಿ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ಮುರ್ಡೇಶ್ವರಕ್ಕೆ ಕರೆಸಿಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅನಂತರದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಜಯಾನಂದ ಕೆ. ಅವರು ಈ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 28 ಸಾಕ್ಷಿಗಳನ್ನು ಈ ಪ್ರಕರಣದಲ್ಲಿ ವಿಚಾರಣೆ ಮಾಡಿದ್ದು, ಒಟ್ಟು 38 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಆದರೆ ಪ್ರಾಸಿಕ್ಯೂಷನ್ ಆರೋಪವನ್ನು ರುಜುವಾತುಪಡಿಸಲು ಸಾಧ್ಯವಾಗದ ಕಾರಣ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.
ಆರೋಪಿಯ ಪರವಾಗಿ ಉಡುಪಿಯ ನ್ಯಾಯವಾದಿ ಪ್ರಸಾದ್ ಕುಮಾರ್ ಶೆಟ್ಟಿ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.