Udupi; ನನೆಗುದಿಗೆ ಬಿದ್ದ ಸ್ಮಾರ್ಟ್‌ ಟ್ರಾಫಿಕ್‌ ಸಿಗ್ನಲ್‌ ಯೋಜನೆ


Team Udayavani, Sep 12, 2024, 4:16 PM IST

Udupi; ನನೆಗುದಿಗೆ ಬಿದ್ದ ಸ್ಮಾರ್ಟ್‌ ಟ್ರಾಫಿಕ್‌ ಸಿಗ್ನಲ್‌ ಯೋಜನೆ

| ನಗರದಲ್ಲಿ ಸಂಚಾರ ದಟ್ಟಣೆ, ಟ್ರಾಫಿಕ್‌ ಸಮಸ್ಯೆಗೆ ಸಿಗದ ಪರಿಹಾರ | ಹೆಚ್ಚುತ್ತಿರುವ ಅಪಘಾತಗಳು, ಪಾದಚಾರಿಗಳೂ ಸಂಚಕಾರ

ಉಡುಪಿ: ನಗರ ಬೆಳೆಯುತ್ತಿದ್ದಂತೆ ದಿನೇದಿನೆ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ಪರಿಹಾರ ಕ್ರಮವಾಗಿ ರೂಪಿಸಲು ನಿರ್ಧರಿಸಿದ್ದ ಸ್ಮಾರ್ಟ್‌ ಟ್ರಾಫಿಕ್‌ ಸಿಗ್ನಲ್‌ ಹಳ್ಳಹಿಡಿದಿದೆ.

ಮೂರು ವರ್ಷಗಳ ಹಿಂದೆಯೇ ಮಣಿಪಾಲದ ಟೈಗರ್‌ ವೃತ್ತದಲ್ಲಿ ಪ್ರಯೋಗಾತ್ಮಕವಾಗಿ ಆರಂಭಿಸಿದ್ದರೂ ಅನಂತರ ಯಾವುದೇ ಪ್ರಗತಿ ಕಂಡಿಲ್ಲ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೂಪುಗೊಂಡ ಈ ಯೋಜನೆ ಹಲವು ತಾಂತ್ರಿಕ ಕಾರಣದಿಂದ ಆರಂಭವೇ ಕಂಡಿಲ್ಲ.

ಮಣಿಪಾಲದ ಟೈಗರ್‌ ಸರ್ಕಲ್‌, ಸಿಂಡಿಕೇಟ್‌ ವೃತ್ತ, ಕಲ್ಸಂಕದಲ್ಲಿ ಯೋಜನೆ ಅನುಷ್ಠಾನಕ್ಕೆ ಪೂರಕವಾಗಿ ಬೃಹದಾಕಾರದ ಪೋಲ್‌ಗ‌ಳನ್ನು ಅಳವಡಿಸಲಾಗಿದೆ.

ಅಂಬಾಗಿಲು, ಉದ್ಯಾವರ ಬಲಾಯಿಪಾದೆ, ಹಳೆ ಡಯಾನ ವೃತ್ತದಲ್ಲಿ ಯೋಜನೆಯ ಭಾಗವಾಗಿ ಪೋಲ್‌ಗ‌ಳನ್ನು ಅಳವಡಿಸಲು ಚಿಂತನೆ ನಡೆದಿತ್ತು. ಸಿಗ್ನಲ್‌ ಅಳವಡಿಕೆಗಾಗಿ ನಿರ್ಮಿಸಿದ ಬೃಹತ್‌ ಕಂಬಗಳು ಅನಾಥಸ್ಥಿತಿಯಲ್ಲಿದ್ದು, ಇದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯಿಸಲಾಗಿತ್ತು.

ನಗರಸಭೆಯ ಹಿಂದಿನ ಆಡಳಿತಾವಧಿಯಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಯೋಜನೆಯಲ್ಲಿ ಸ್ಮಾರ್ಟ್‌ ಸಿಗ್ನಲ್‌ಗ‌ಳನ್ನು ಅಳವಡಿಸಲು ಟೆಂಡರ್‌ ಕರೆಯಲಾಗಿತ್ತು. ಮುಂಬಯಿ ಮೂಲದ ಖಾಸಗಿ ಕಂಪೆನಿ ಗುತ್ತಿಗೆ ಪಡೆದಿತ್ತು. ನಗರಸಭಾ ವ್ಯಾಪ್ತಿಯ ಕಲ್ಸಂಕ, ಮಣಿಪಾಲದಲ್ಲಿ ಹಾಗೂ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಸಿಗ್ನಲ್‌ ಕಂಬಗಳನ್ನು ಅಳವಡಿಸಿದೆ. ಆದರೆ ಟೆಂಡರ್‌ ತಾಂತ್ರಿಕ ಸಮಸ್ಯೆ, ಸಿಗ್ನಲ್‌ ಅಳವಡಿಕೆ ವ್ಯವಸ್ಥಿತವಾಗಿರದ ಬಗ್ಗೆ ಸಾರ್ವಜನಿಕ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಯೋಜನೆ ತಾತ್ಕಾಲಿಕವಾಗಿ ಸ್ಥಗಿತೊಂಡಿತ್ತು.

ಬೇಡಿಕೆಯಂತೆ ವಿರೋಧವು ಇತ್ತು
ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಮಾರ್ಟ್‌ ಸಿಗ್ನಲ್‌ ಯೋಜನೆ ಅನುಷ್ಠಾನದ ಬೇಡಿಕೆಯ ಜತೆಗೆ ಸಾರ್ವಜನಿಕ ವಿರೋಧವು ಇತ್ತು. ಮಣಿಪಾಲ ಪ್ರಾಯೋಗಿಕ ಯೋಜನೆಯಲ್ಲಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ನಿಲ್ಲುವ ಅವಧಿ ಹೆಚ್ಚಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನವು ವ್ಯಕ್ತಪಡಿಸಿದ್ದರು. ಅಲ್ಲದೆ ಇಡೀ ಸಿಗ್ನಲ್‌ ಕಂಬ ಜಾಹೀರಾತು ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡುವಂತಿದೆ ಎಂಬ ಆಕ್ಷೇಪ ಕೇಳಿ ಬಂದಿತ್ತು. ನಗರಸಭೆಗೆ ಹೊಸ ಚುನಾಯಿತ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ಕೆಲವು ಸುಧಾರಣೆಗಳೊಂದಿಗೆ ಟ್ರಾಫಿಕ್‌ ಸಿಗ್ನಲ್‌ ಯೋಜನೆಯನ್ನು ವ್ಯವಸ್ಥಿತವಾಗಿ ವಿಳಂಬವಿಲ್ಲದಂತೆ ಜಾರಿಗೊಳಿಸಬೇಕು ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

ಜನರ ಬೇಡಿಕೆಯಂತೆ ವ್ಯವಸ್ಥಿತವಾಗಿ ಅನುಷ್ಠಾನ
ಟ್ರಾಫಿಕ್‌ ಸಿಗ್ನಲ್‌ ಅಳವಡಿಕೆ ಯೋಜನೆ ಸಂಬಂಧಿಸಿ ಕುಲಂಕಷವಾಗಿ ಪರಿಶೀಲನೆ ನಡೆಸಲಾಗುವುದು. ಯೋಜನೆಗೆ ಸಂಬಂಧಿಸಿ ಸಾರ್ವಜನಿಕರ ಬೇಡಿಕೆಯಂತೆ ಸುಧಾರಣೆ ಕ್ರಮಗಳನ್ನು ಕೈಗೊಂಡು ವಿಳಂಬವಾಗದಂತೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ನಗರದಲ್ಲಿ ಸಂಚಾರ ದಟ್ಟಣೆ ಮತ್ತು ಟ್ರಾಫಿಕ್‌ ಜಾಮ್‌, ಅನಧೀಕೃತ ಪಾರ್ಕಿಂಗ್‌ ಸಂಬಂಧಿಸಿ ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.
– ಪ್ರಭಾಕರ ಪೂಜಾರಿ, ಅಧ್ಯಕ್ಷರು, ಉಡುಪಿ ನಗರಸಭೆ

ಕಲ್ಸಂಕ ಜಂಕ್ಷನ್‌ನಲ್ಲಿ ನಿತ್ಯ ಟ್ರಾಫಿಕ್‌
ಕಲ್ಸಂಕ ವೃತ್ತದಲ್ಲಿ ನಿತ್ಯ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ಪೊಲೀಸರ ಸಿಗ್ನಲ್‌ಗ‌ೂ ಲೆಕ್ಕಿಸದೇ ವಾಹನಗಳನ್ನು ಎಲ್ಲೆಂದರಲ್ಲಿ ನುಗ್ಗಿಸುವುದು ಕಂಡು ಬರುತ್ತಿದೆ. ಇದರಿಂದಾಗಿ ಸಣ್ಣಪುಟ್ಟ ಅಪಘಾತಗಳು ಆಗಾಗ ಸಂಭವಿಸುತ್ತಿದೆ. ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಪ್ರವಾಸಿ ವಾಹನಗಳ ಚಾಲಕರು ನಿಯಮ ಉಲ್ಲಂ ಸುತ್ತಿರುವುದು ಕಂಡು ಬರುತ್ತಿದೆ. ವಾರಾಂತ್ಯದಲ್ಲಿ ಇಲ್ಲಿ ಟ್ರಾಫಿಕ್‌ ನಿರ್ವಹಣೆಯೇ ದೊಡ್ಡ ಸವಾಲಾಗಿದೆ. ಹೆಚ್ಚುವರಿ ಪೊಲೀಸ್‌ ಹಾಗೂ ಹೋಂ ಗಾರ್ಡ್‌ ಸಿಬಂದಿ ನಿಯೋಜನೆಯಾದರೂ ಸಮಸ್ಯೆ ಹಾಗೆ ಇರುತ್ತದೆ. ಹೀಗಾಗಿ ಸ್ಮಾರ್ಟ್‌ ಸಿಗ್ನಲ್‌ ಹಾಕಿದರ ಪೊಲೀಸರ ಒತ್ತಡ ಅರ್ಧದಷ್ಟು ಕಡಿಮೆಯಾಗುವ ಜತೆಗೆ ಟ್ರಾಫ್ರಿಕ್‌ ಸಮಸ್ಯೆಗೂ ಸ್ವಯಂ ನಿಯಂತ್ರಣಕ್ಕೆ ಬರಲಿದೆ ಎಂಬುದು ಸ್ಥಳೀಯರ ವಾದ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.