Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ
ಕಳವಾಗಿದ್ದ ಫೋನ್‌ಗಳ ಹಸ್ತಾಂತರ ಕಾರ್ಯಕ್ರಮ
Team Udayavani, Oct 24, 2024, 10:00 PM IST
ಉಡುಪಿ: ನಗರ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಗುರುವಾರ ನಗರ ಠಾಣೆಯ ಮುಂಭಾಗದಲ್ಲಿ ನಡೆಯಿತು.
ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ.ಮಾತನಾಡಿ, ಮೊಬೈಲ್ ಕಳವಾದರೆ ಅದನ್ನು ಪತ್ತೆಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿಪಡಿಸಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾಹಿತಿ ಇಲ್ಲದವರು ಸ್ಥಳೀಯ ಠಾಣೆಗೆ ಭೇಟಿ ನೀಡಿ, ಅಲ್ಲಿಯೂ ದೂರು ದಾಖಲಿಸಬಹುದು ಎಂದರು.
ನಗರ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಧರ್ ಸತಾರೆ, ಪಿಎಸ್‌ಐಗಳಾದ ಈರಣ್ಣ ಶಿರಗುಂಪಿ, ಭರತೇಶ್, ಪುನೀತ್, ಸಿಬಂದಿ ಚೇತನ್, ಬಶೀರ್, ವಿನಯ್ ಉಪಸ್ಥಿತರಿದ್ದರು.
2023ರಲ್ಲಿ ಉಡುಪಿ ಪುರಭವನದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗುವ ವೇಳೆ ವಾಹನದಲ್ಲಿಟ್ಟಿದ್ದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಠಾಣೆಗೆ ತೆರಳಿ ದೂರು ನೀಡಿದ್ದೇವೆ. ಈಗ ಮೊಬೈಲ್ ಸಿಕ್ಕಿರುವುದು ಖುಷಿ ತಂದಿದೆ ಎಂದು ಮಠದಬೆಟ್ಟು ನಿವಾಸಿ ಜಯಲಕ್ಷ್ಮೀ ತಿಳಿಸಿದರು.
ಮೊಬೈಲ್ ಕಳೆದುಕೊಂಡರೆ ಹೀಗೆ ಮಾಡಿ
ಮೊಬೈಲ್ ಕಳೆದುಕೊಂಡರೆ ಸಂತ್ರಸ್ತರು ಕೂಡಲೇ ಕೆಎಸ್‌ಪಿ ಆ್ಯಪ್ ಮೂಲಕ ಇ-ಲಾಸ್ ಅಪ್ಲಿಕೇಶ್‌ನಲ್ಲಿ ಪ್ರಕರಣ ದಾಖಲಿಸಬಹುದು. ಅನಂತರ ಪೊಲೀಸರು ಸಿಇಐಆರ್ ಪೋರ್ಟಲ್‌ನಲ್ಲಿ ಮೊಬೈಲ್‌ನ ಐಎಂಇಐ ಸಂಖ್ಯೆ, ಆಧಾರ್ ಕಾರ್ಡ್ ಮಾಹಿತಿ ಹಾಗೂ ಬದಲಿ ಸಂಖ್ಯೆಯನ್ನು ಅಪ್‌ಲೋಡ್ ಮಾಡುತ್ತಾರೆ. ಕಳವಾಗಿರುವ ಮೊಬೈಲ್ ಅನ್ನು ಬೇರೆ ಯಾರಾದರೂ ಸಿಮ್ ಹಾಕಿ ಬಳಕೆ ಮಾಡಿದರೆ ಸಂತ್ರಸ್ತರು ಹಾಗೂ ಪೊಲೀಸರಿಗೆ ಒಟಿಪಿ ಬರುತ್ತದೆ. ಹೀಗೆ ಆರೋಪಿಯನ್ನು ಪತ್ತೆ ಹಚ್ಚಿ ಮೊಬೈಲ್ ಫೋನ್‌ಗಳನ್ನು ಕದ್ದ ವ್ಯಕ್ತಿಯ ಲೊಕೇಷನ್ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.