ಉಡುಪಿ: ಸೋಮವಾರದಿಂದ ಆರ್‌ಟಿಒ ಕಾರ್ಯಾರಂಭ
ಬಿಎಸ್4 ವಾಹನ ನೋಂದಣಿಗೆ ಎಪ್ರಿಲ್ ಅಂತ್ಯದ ಗಡುವು
Team Udayavani, Apr 26, 2020, 5:53 AM IST
ಉಡುಪಿ: ಉಡುಪಿಯ ಪ್ರಾದೇಶಿಕ ಸಾರಿಗೆ ಕಚೇರಿ ಈಗ ಖಾಲಿ. ಲಾಕ್‌ಡೌನ್ ಪ್ರಯುಕ್ತ ಎಲ್ಲ ಸರಕಾರಿ ಕಚೇರಿಗಳಂತೆ ಈ ಕಚೇರಿಯನ್ನೂ ಮುಚ್ಚಲಾಗಿದೆ. ಹಾಗಿದ್ದರೂ ಇತ್ತೀಚೆಗೆ ಕೆಲವು ನಿರ್ಬಂಧಗಳ ಸಡಿಲಿಕೆಯ ಅನಂತರ ಹೊಸ ವಾಹನ ನೋಂದಣಿಗೆ ಸಂಬಂಧಿಸಿ ಆನ್‌ಲೈನ್ ಮುಖಾಂತರ ಹಣ ಪಾವತಿ ಮಾಡಿ ಬಂದರೆ ವಾಹನ ತಪಾಸಣೆಗೆ ಅವಕಾಶ ಕಲ್ಪಿಸಲಾಗಿದೆ.
ಆನ್‌ಲೈನ್ ಮೂಲಕ ಶುಲ್ಕ ಪಾವತಿಸಿ ವಾಹನ ತಪಾಸಣೆ ಮಾಡಿಸಲು ಬರುವ ವಾಹನ ಮಾಲಕರಿಗೆ ಸೇವೆ ಒದಗಿಸಲು ಓರ್ವ ಮೋಟಾರು ವಾಹನ ಇನ್‌ಸ್ಪೆಕ್ಟರ್ ಸಹಿತ 2-3 ಸಿಬಂದಿ ಈ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
3 ದಿನಗಳ ಹಿಂದೆ ಈ ಸೇವಾ ಸೌಲಭ್ಯ ಆರಂಭವಾಗಿದ್ದು, ಈಗಾಗಲೇ ಕೆಲವು ಮಂದಿ ವಾಹನ ಮಾಲಕರು ಇದರ ಪ್ರಯೋಜನ ಪಡೆದಿದ್ದಾರೆ.
ಸೋಮವಾರದಿಂದ ಕಚೇರಿ ಕಾರ್ಯಾರಂಭ
ಲಾಕ್‌ಡೌನ್ ಆರಂಭವಾದಾಗಿನಿಂದ ಮುಚ್ಚಿದ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯು ಸೋಮವಾರದಿಂದ ಮತ್ತೆ ಸಾರ್ವಜನಿಕರ ಸೇವೆಗೆ ತೆರೆದುಕೊಳ್ಳಲಿದೆ.
ಸೋಮವಾರದಿಂದ ಹೊಸ ವಾಹನಗಳ ನೋಂದಣಿಗಳು ಮಾತ್ರ ನಡೆಯಲಿವೆ. ಶೇ. 44ರಷ್ಟು ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನುತ್ತಾರೆ ಅಧಿಕಾರಿಗಳು.
ಚಾಲನ ಪರವಾನಿಗೆಯ ನವೀಕರಣದ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ. ಪರವಾನಿಗೆ ಅವಧಿ ಮುಕ್ತಾಯ
ಗೊಂಡಿದ್ದರೂ ಜೂನ್ 30ರ ಬಳಿಕ ಪುನರ್‌ನವೀಕರಣ ಮಾಡಬಹುದಾಗಿದೆ.
ಮಾ.31ರ ವರೆಗೆ ಮಾರಾಟವಾದ ಬಿಎಸ್4 ಮಾದರಿಯ ವಾಹನಗಳನ್ನು ಎ.30ರವರೆಗೆ ನೋಂದಾಯಿಸಿಕೊಳ್ಳುವಂತೆ ಸೂಚಿಸ ಲಾಗಿದೆ. ಈ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಲಿದೆ.
ಬಿಎಸ್4 ಮಾದರಿಯ ವಾಹನ ನೋಂದಣಿ
ಹೊಸ ರಿಜಿಸ್ಟ್ರೇಶನ್‌ಗೆ ಸಂಬಂಧಿಸಿ ಆನ್‌ಲೈನ್ ಮೂಲಕ ಶುಲ್ಕ ಪಾವತಿ ಸೇವೆಗೆ ಮಾತ್ರ ಈಗ ಈ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಕೆಲವು ಮಂದಿ ಮಾಲಕರು ಆನ್‌ಲೈನ್ ಮೂಲಕ ಶುಲ್ಕ ಪಾವತಿ ಮಾಡಿ ವಾಹನವನ್ನು ಈ ಕಚೇರಿಗೆ ತಂದು ತಪಾಸಣೆ ಮಾಡಿಸಿಕೊಂಡು ಹೋಗಿದ್ದಾರೆ. ಮಾ.31ರವರೆಗೆ ಮಾರಾಟವಾದ ಬಿಎಸ್4 ಮಾದರಿಯ ವಾಹನಗಳನ್ನು ಎ.30ರವರೆಗೆ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ನೋಂದಣಿ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಲಿದೆ.
– ರಾಮಕೃಷ್ಣ ರೈ,ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.