ಉಡುಪಿ: ಮಾದರಿ ಸಂಗ್ರಹ ಮತ್ತೆ ಹೆಚ್ಚಳ ; 16 ಪಾಸಿಟಿವ್‌, 273 ನೆಗೆಟಿವ್‌ ಪ್ರಕರಣ

Team Udayavani, Jul 4, 2020, 7:44 AM IST

ಉಡುಪಿ: ಮಾದರಿ ಸಂಗ್ರಹ ಮತ್ತೆ ಹೆಚ್ಚಳ ; 16 ಪಾಸಿಟಿವ್‌, 273 ನೆಗೆಟಿವ್‌ ಪ್ರಕರಣ

ಉಡುಪಿ: ಬಹಳ ದಿನಗಳ ಬಳಿಕ ಗಂಟಲ ದ್ರವ ಮಾದರಿ ಸಂಗ್ರಹದಲ್ಲಿ ಮತ್ತೆ ನೆಗೆತ ಕಂಡಿದೆ ಮತ್ತು ಕೈಸೇರಬೇಕಾದ ವರದಿಗಳ ಸಂಖ್ಯೆಯೂ ಒಮ್ಮೆಲೆ ಹೆಚ್ಚಳ ಕಂಡಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯ ವಿವಿಧೆಡೆ 868 ಜನರ ಮಾದರಿಗಳನ್ನು ಆರೋಗ್ಯ ಇಲಾಖೆ ಕಾರ್ಯಕರ್ತರು ಸಂಗ್ರಹಿಸಿದರು ಮತ್ತು ವರದಿ ಕೈಸೇರಬೇಕಾದ ಗಂಟಲ ದ್ರವ ಮಾದರಿ ಸಂಖ್ಯೆ 1,417ಕ್ಕೇರಿದೆ. ಗುರು ವಾರವೂ ಇದೇ ರೀತಿ ವ್ಯಾಪಕ ಮಾದರಿ ಸಂಗ್ರಹ (811) ನಡೆದಿದೆ.

ಶುಕ್ರವಾರ 273 ನೆಗೆಟಿವ್‌ ಪ್ರಕರಣ ಮತ್ತು 16 ಪಾಸಿಟಿವ್‌ ಪ್ರಕರಣ ವರದಿಯಾಗಿದೆ. 16 ಜನರಲ್ಲಿ ಉಡುಪಿ ತಾಲೂಕಿನ ಒಂಬತ್ತು ಮಂದಿ, ಕುಂದಾಪುರ ತಾಲೂಕಿನ ನಾಲ್ವರು, ಕಾರ್ಕಳ ತಾಲೂಕಿನ ಮೂವರು ಇದ್ದಾರೆ. ಇವರಲ್ಲಿ ಮಹಾರಾಷ್ಟ್ರದಿಂದ ಬಂದ ನಾಲ್ವರು, ದ.ಕ. ಜಿಲ್ಲೆಯಿಂದ ಬಂದ ಇಬ್ಬರು, ಬೆಂಗಳೂರಿನಿಂದ ಬಂದ ಒಬ್ಬರು ಇದ್ದಾರೆ. ಇನ್ನು ಒಂಬತ್ತು ಮಂದಿ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿದ್ದಾರೆ.

ಮಹಿಳೆ- ಮಗು ಬಿಡುಗಡೆ
ಇತ್ತೀಚೆಗೆ ಅತಿ ಕ್ಲಿಷ್ಟಕರ ಎನಿಸಿದ ಸೋಂಕಿತ ಮಹಿಳೆಗೆ ಹೆರಿಗೆ ಮಾಡಿಸಿದ ಸಾಧನೆಗೈದ ಉಡುಪಿ ಡಾ|ಟಿಎಂಎ ಪೈ ಆಸ್ಪತ್ರೆ ವೈದ್ಯರು ಮಗುವಿಗೂ ಪರೀಕ್ಷೆ ನಡೆಸಿ ನೆಗೆಟಿವ್‌ ವರದಿ ಬಂದ ಬಳಿಕ ತಾಯಿ ಮಗುವನ್ನು ಸೋಮವಾರ ಬಿಡುಗಡೆಗೊಳಿಸಿದ್ದಾರೆ.

ಮಗುವಿಗೆ ನೆಗೆಟಿವ್‌
ಜು. 1ರಂದು ಮೃತಪಟ್ಟ ಹತ್ತು ತಿಂಗಳ ಮಗುವಿಗೆ ಸೋಂಕು ಇದ್ದಿರಲಿಲ್ಲ ಎಂದು ವರದಿ ಬಂದಿದೆ. ವಿಜಯಪುರ ಮೂಲದ ದಂಪತಿ ಲಾಕ್‌ಡೌನ್‌ ಅವಧಿಯಲ್ಲಿ ಊರಿಗೆ ಹೋಗಿ ಕಳೆದ ವಾರ ಬಂದಿದ್ದರು. ಮಗುವಿಗೆ ಜ್ವರ, ಉಸಿರಾಟದ ಸಮಸ್ಯೆ ಇತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಜು. 1ರಂದು ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದ ಬಳಿಕ ಮಗು ಮೃತಪಟ್ಟಿತ್ತು. ಮಗು ವಿನ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ವರದಿ ನೆಗೆಟಿವ್‌ ಬಂದಿದೆ.

ಇಬ್ಬರು ಗಂಭೀರ
ಗಂಭೀರ ಸ್ಥಿತಿಯಲ್ಲಿದ್ದ ಸೋಂಕಿತರಿಬ್ಬರಲ್ಲಿ ಒಬ್ಬರು ವಾರ್ಡ್‌ಗೆ ಸ್ಥಳಾಂತರಗೊಂಡಿದ್ದು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ. ಈಗ ಒಟ್ಟು ಇಬ್ಬರು ವೆಂಟಿಲೇಟರ್‌ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೀಲ್‌ಡೌನ್‌
ಕೋವಿಡ್ ಪಾಸಿಟಿವ್‌ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಒಂದು ಫ್ಲ್ಯಾಟ್‌, ಬ್ರಹ್ಮಗಿರಿಯಲ್ಲಿ ಒಂದು ಫ್ಲ್ಯಾಟ್‌, ಕಿದಿಯೂರು ಗ್ರಾಮದಲ್ಲಿ ಒಂದು ಫ್ಲ್ಯಾಟ್‌ನ್ನು ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.