Udupi: ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಸ್ಕೂಟರ್; ತಪ್ಪಿದ ಭಾರೀ ಅನಾಹುತ
Team Udayavani, Oct 19, 2024, 1:14 PM IST
ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ (ಅ.18) ರಾತ್ರಿ ಬಳಿ ಸಂಭವಿಸಿದೆ.
ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.
ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇವರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.