ಮಾದಕ ವಸ್ತು ಜಾಲ: ಎಲ್ಲರೂ ಎಚ್ಚೆತ್ತುಕೊಳ್ಳಲೇಬೇಕಾದ ಹೊತ್ತು


Team Udayavani, Feb 28, 2023, 7:20 AM IST

ಮಾದಕ ವಸ್ತು ಜಾಲ: ಎಲ್ಲರೂ ಎಚ್ಚೆತ್ತುಕೊಳ್ಳಲೇಬೇಕಾದ ಹೊತ್ತು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ಮಾದಕ ವ್ಯಸನ ಜಾಲ ತನ್ನ ಕಪಿ ಮುಷ್ಠಿಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಒಂದೆಡೆ ವಿಶ್ವ ದರ್ಜೆಯ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಾ ನೂರಾರು ವಿದ್ಯಾಸಂಸ್ಥೆಗಳು ಜಿಲ್ಲೆಗಳ ಕೀರ್ತಿಯನ್ನು ವಿಶ್ವಾದ್ಯಂತ ಪಸರಿಸುವ ಪ್ರಯತ್ನ ಮಾಡುತ್ತಿದ್ದರೆ, ಇನ್ನೊಂದೆಡೆ ಇದನ್ನು ಹತ್ತಿಕ್ಕಲು ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಜನಪ್ರತಿನಿಧಿಗಳ ಸಂಘಟಿತ ಪ್ರಯತ್ನ ನಡೆಸುತ್ತಿಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ನಾಗರಿಕರು ಸಂಘಟಿತರಾಗಿ ಜಿಲ್ಲಾಡಳಿತದ ಮೇಲೆ ಒತ್ತಡ ಹಾಕದಿದ್ದರೆ ಭವಿಷ್ಯದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗುವುದು ಖಚಿತ.

ಉಡುಪಿ : ಕೆಲವು ವರ್ಷಗಳ ಹಿಂದೆ ತೆರೆಯ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಮಾದಕ ವಸ್ತುಗಳ ದಂಧೆಯ ಜಾಲ ಈಗ ರಾಜಾರೋಷವಾಗಿ ಕಾರ್ಯ ನಿರ್ವ ಹಿಸುತ್ತಿದ್ದು, ಶಿಕ್ಷಣ ಕಾಶಿಯೆಂಬ ಕರಾವಳಿಯ ಖ್ಯಾತಿಗೆ ಕಪ್ಪುಚುಕ್ಕೆಯಾಗಿ ಪರಿಣಮಿಸತೊಡಗಿದೆ.

ಮಂಗಳೂರು ಹಾಗೂ ಉಡುಪಿ ನಗರವೂ ಸೇರಿದಂತೆ ಅವಿ ಭಜಿತ ದಕ್ಷಿಣ ಕನ್ನಡ ಜಿಲ್ಲೆಗಳು ಅತ್ಯು ತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿವೆ. ವಿಶೇಷವಾಗಿ ಹೈಸ್ಕೂಲ್‌, ವೃತ್ತಿ ಶಿಕ್ಷಣ ಹಾಗೂ ಉನ್ನತ ಶಿಕ್ಷಣಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ವಿದ್ಯಾರ್ಥಿ ಗಳು ಉಭಯ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಈ ಬೆಳವಣಿಗೆ ಎರಡೂ ಜಿಲ್ಲೆಗಳ ಆರ್ಥಿಕತೆಗೂ ಜೀವ ತುಂಬಿದೆ.

ನೂರಾರು ವಿದ್ಯಾಸಂಸ್ಥೆಗಳೂ ಹಲವು ವರ್ಷಗಳಿಂದ ಕಠಿನ ಪರಿಶ್ರಮ ಹಾಗೂ ಅತ್ಯುತ್ತಮ ದರ್ಜೆಯ ಮೂಲ ಸೌಕರ್ಯಗಳನ್ನು ಒದಗಿಸಿ, ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಾ ಲಕ್ಷಾಂತರ ಪೋಷಕರನ್ನು ಆಕರ್ಷಿಸುತ್ತಿವೆ. ಇಂಥ ಹಲವು ವರ್ಷಗಳ ಸಕಾರಾತ್ಮಕ ಪ್ರಯತ್ನವನ್ನು ಮಾದಕ ವಸ್ತುಗಳ ಮಾರಾಟ ಜಾಲ ಹಾಳುಗೆಡವುತ್ತಿದೆ. ವರ್ಷದ ಆರಂಭ
ದಲ್ಲಿ ಮಂಗಳೂರಿನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿಗಳು ಸೇರಿ 10 ಮಂದಿ ಯನ್ನು ಪೊಲೀಸರು ಬಂಧಿಸಿರುವುದು ಈ ಕರಾಳ ದಂಧೆಯ ಬೇರು ಇಳಿ ಯುತ್ತಿರುವ ಆಳವನ್ನು ಬಹಿರಂಗ ಗೊಳಿಸಿದೆ.

ಉಡುಪಿ ಜಿಲ್ಲೆಯ ಕಥೆ
ಉಡುಪಿ ಜಿಲ್ಲೆಯಲ್ಲಿಯೂ ಮಾದಕ ವಸ್ತುಗಳ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಲೇಜೊಂದರ ಇಬ್ಬರು ವಿದ್ಯಾರ್ಥಿ ಗಳನ್ನು ಅಮಾನತು ಮಾಡಲಾಗಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ 5 ವರ್ಷಗಳಲ್ಲಿ ಮಾದಕ ವಸ್ತು ವಿರೋಧಿ ನಿಯಮದಡಿ (ಎನ್‌ಡಿಪಿಎಸ್‌) ಅಡಿ ಮಾದಕ ವಸ್ತು ಸಾಗಣೆಗೆ ಸಂಬಂಧಿಸಿ 151 ಪ್ರಕರಣಗಳು ದಾಖಲಾಗಿವೆ. ಒಟ್ಟು 270 ಮಂದಿಯನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡಿರುವ ನಿಷೇಧಿತ ವಸ್ತುಗಳ ಮೌಲ್ಯ 20,049,035 ರೂ.! ಆದರೆ ಇದು ಇಡೀ ಕರಾಳ ದಂಧೆಯ ಒಂದು ಹಿಡಿಯಷ್ಟೇ !

ಉಭಯ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ರಾತ್ರಿ ವೇಳೆ ನಡೆಯುವ ಮೋಜು ಮಸ್ತಿ, ಪಾರ್ಟಿಗಳು, ಪಬ್‌ಗಳೂ ಹೆಚ್ಚಾಗಿವೆ. ಇಲ್ಲೆಲ್ಲ ಮಾದಕ ವಸ್ತು ಪೂರೈಕೆ ಹಾಗೂ ಸೇವನೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ವೀಕೆಂಡ್‌, ರಜಾದಿನಗಳಲ್ಲಿ ಪಬ್‌ಗಳು, ಪಾರ್ಟಿಗಳು ಮಧ್ಯರಾತ್ರಿ 2 ರವರೆಗೂ ನಿರಾತಂಕವಿಲ್ಲದೇ ನಡೆಯುತ್ತಿವೆ.

ಡ್ರಗ್ಸ್‌ ಬಳಕೆ: ಉಡುಪಿಗೆ 5ನೇ ಸ್ಥಾನ !
ರಾಜ್ಯದ ಎನ್‌ಜಿಒ ಸಂಸ್ಥೆಯೊಂದು ಇತ್ತೀಚೆಗೆ ನಡೆಸಿದ ಸರ್ವೆಯ ಪ್ರಕಾರ ಡ್ರಗ್ಸ್‌ ಬಳಯಲ್ಲಿ ಉಡುಪಿ ಜಿಲ್ಲೆ 5ನೇ ಸ್ಥಾನ ಪಡೆದಿದೆ. ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ, ರಾಮನಗರ ಕ್ರಮವಾಗಿ 1ರಿಂದ 6ರ ವರೆಗಿನ ಸ್ಥಾನ ಪಡೆದಿದೆ. ಜನರು ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಅನಾಹುತಗಳು ಸಂಭವಿಸುವ ಆತಂಕವಿದೆ.

ಟಾಪ್ ನ್ಯೂಸ್

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

10

Padubidri: ವಾಹನ ಅಪಘಾತಕ್ಕೆ ಕಾರಣವಾಗುತ್ತಿರುವ ಫ್ಲೆಕ್ಸ್‌ಗಳು

11-

Udupi: ಪುನಃ ಥಿಯೇಟರ್ ಪ್ರಸ್ತುತಪಡಿಸುತ್ತದೆ – ಯೋಗಿ ಮತ್ತು ಭೋಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.