Udupi; ನ. 1-3 ರಾಜ್ಯಮಟ್ಟದ ಕ್ರೀಡಾಕೂಟ: 1,800 ವಿದ್ಯಾರ್ಥಿಗಳು ಭಾಗಿ
Team Udayavani, Oct 31, 2023, 12:07 AM IST
ಉಡುಪಿ: ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಆಶ್ರಯದಲ್ಲಿ 14ರ ವಯೋಮಾನದ ಶಾಲಾ ಬಾಲಕ-ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟವನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಮೈದಾನದಲ್ಲಿ ನ.1 ರಿಂದ ನ. 3 ರವರೆಗೆ ಆಯೋಜಿಸಲಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಅಂದು ಸಂಜೆ 4.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಕ್ರೀಡಾಕೂಟವನ್ನು ಉದ್ಘಾಟಿ ಸಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಂದನಾ ಸ್ವೀಕಾರ ಮಾಡ ಲಿದ್ದಾರೆ. ಉದ್ಘಾಟನೆಗೂ ಪೂರ್ವದಲ್ಲಿ ಮಧ್ಯಾಹ್ನ 3ಕ್ಕೆ ಉಡುಪಿಯ ಶೋಕಮಾತ ಇಗರ್ಜಿಯಿಂದ ಕೋರ್ಟ್ ರಸ್ತೆ, ಜೋಡುಕಟ್ಟೆ ಮಾರ್ಗವಾಗಿ ಮೆರವಣಿಗೆಯಲ್ಲಿ ಕ್ರೀಡಾಪಟುಗಳು ಮೈದಾನಕ್ಕೆ ಆಗಮಿಸಲಿದ್ದಾರೆ. ಅಂತಾರಾಷ್ಟ್ರೀಯ ಕ್ರೀಡಾಪಟು ಮಿಜೋ ಚಾಕೋ ಆಗಮಿಸಲಿದ್ದಾರೆ. ಉದ್ಘಾಟನೆಯ ಅನಂತರ ಭಾರ್ಗವಿ ತಂಡ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ರೀಡಾಪಟುಗಳಿಗೆ 17 ಸ್ಥಳಗಳಲ್ಲಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಾಲಕ ಮತ್ತು ಬಾಲಕಿಯರಿಗೆ ಭದ್ರತೆಗೆ ಆದ್ಯತೆ ನೀಡಿದ್ದೇವೆ. ಅಗತ್ಯ ಮೂಲಸೌಕರ್ಯದ ವ್ಯವಸ್ಥೆಯನ್ನು ಮಾಡಲಾಗಿದೆ. ಉಪಹಾರ, ಮಧ್ಯಾಹ್ನ ಊಟ, ರಾತ್ರಿ ಊಟವನ್ನು ಗೋವಿಂದ ಕಲ್ಯಾಣ ಮಂಟಪದಲ್ಲಿ ಇದರಲಿದೆ ಎಂದರು.
ಡಿಡಿಪಿಐ ಗಣಪತಿ, ಶಾಲೆಯ ಮುಖ್ಯಶಿಕ್ಷಕಿ ಪ್ರೀತಿ ಜೆ. ಕ್ರಾಸ್ತಾ, ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ತೆರೇಸಾ ಜ್ಯೋತಿ, ಪಿಟಿಎ ಉಪಾಧ್ಯಕ್ಷ ಸೋಹೆಲ್ ಅಮೀನ್, ವಸತಿ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಪ್ರಮುಖರಾದ ನಿರ್ಮಲಾ ಬಂಗೇರ, ರೀಟಾ ಲೋಬೋ ಸುದ್ದಿಗೋಷ್ಠಿಯಲ್ಲಿದ್ದರು.
1,800 ವಿದ್ಯಾರ್ಥಿಗಳು
ಕ್ರೀಡಾಕೂಟದಲ್ಲಿ 35 ಶೈಕ್ಷ ಣಿಕ ಜಿಲ್ಲೆಗಳು ಹಾಗೂ 2 ಕ್ರೀಡಾ ವಸತಿ ಶಾಲೆಗಳಿಂದ 1,800 ವಿದ್ಯಾರ್ಥಿ ಗಳು, 250 ತಂಡದ ವ್ಯವಸ್ಥಾಪಕರು, 250 ಕ್ರೀಡಾಧಿಕಾರಿಗಳು, 200 ಸ್ವಯಂಸೇವಕರು, ಕ್ರೀಡಾ ಆಯೋ ಜಕರು ಒಳಗೊಂಡಂತೆ 2,500 ಮಂದಿ ಭಾಗವಹಿಸಲಿದ್ದಾರೆ. ಕ್ರೀಡಾ ಕೂಟದಲ್ಲಿ ಆ್ಯತ್ಲೆಟಿಕ್ ವಿಭಾಗದ ಕ್ರೀಡೆಗಳು ಮಾತ್ರ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.