Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು
Team Udayavani, Jan 1, 2025, 7:30 AM IST
ಉಡುಪಿ: ಶ್ರೀಕೃಷ್ಣ ದೇವರ ದರ್ಶನಕ್ಕೆ ಬಂದ ಸುಮಾರು 7ರಿಂದ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ದಾಂಧಲೆ ನಡೆಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀಕೃಷ್ಣ ಮಠದ ಭದ್ರತಾ ಪೊಲೀಸ್ ಸಿಬಂದಿ ರವೀಂದ್ರ ನೀಡಿದ ದೂರಿನಲ್ಲಿ ಅವರು ರಥಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಶ್ರೀಕೃಷ್ಣಮಠದ ಮುಂಭಾಗದಿಂದ ಒಳಭಾಗಕ್ಕೆ ಬರುವ ಸಮಯದಲ್ಲಿ ಏಳೆಂಟು ಮಂದಿ ಕೇರಳ ಮೂಲದ ಅಯ್ಯಪ್ಪ ಮಾಲಾಧಾರಿಗಳು ಕೃಷ್ಣಮಠದ ಸಿಬಂದಿ ಜಗದೀಶ ಎಂಬುವರಿಗೆ ಕೈಯಿಂದ ಹಲ್ಲೆ ನಡೆಸಿದ್ದಾರೆ.
ಶ್ರೀ ಮಠದ ದಿವಾನರಾದ ನಾಗರಾಜ್ ಆಚಾರ್ಯ ಅವರು ಅಯ್ಯಪ್ಪ ಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದಾಗ ಅವರ ಮೇಲೆ ಕೂಡ ಹಲ್ಲೆಗೆ ಪ್ರಯತ್ನ ನಡೆಸಿದ್ದಾರೆ. ತಡೆಯಲು ಯತ್ನಿಸಿದ ತನ್ನ ಮೇಲೂ ಹಲ್ಲೆ ನಡೆಸಿದ್ದಾಗಿ ಅವರು ಅಯ್ಯಪ್ಪ ಮಾಲಾಧಾರಿಗಳಾದ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೇಂದರ್, ರವಿಕಾಂತ್ ಎಂಬವರ ವಿರುದ್ಧ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.