Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

ಎರಡೂ ಪಕ್ಷದ ಅಭ್ಯರ್ಥಿಗಳಿಗೂ ಬಂಡಾಯ ಪ್ರತಿಸ್ಪರ್ಧಿ!

Team Udayavani, Jun 2, 2024, 11:34 PM IST

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

ಉಡುಪಿ: ಸದ್ದುಗದ್ದಲವಿಲ್ಲದೇ ಮುಗಿಯುತ್ತಿದ್ದ ವಿಧಾನ ಪರಿಷತ್‌ ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆ ಈ ಬಾರಿ ಐತಿಹಾಸ ರಂಗು ಪಡೆದಿದೆ.

ಶಿಕ್ಷಣ ಸಂಸ್ಥೆ ಸಹಿತ ಕೆಲವು ಖಾಸಗಿ ಸಂಸ್ಥೆಗಳಲ್ಲಷ್ಟೇ ಹೆಚ್ಚು ಚರ್ಚೆಯಾಗುತ್ತಿದ್ದ ಪದವೀಧರ ಕ್ಷೇತ್ರದ ಚುನಾವಣೆ ಈಗ ಮನೆ ಮನೆಗಳಲ್ಲೂ ಚರ್ಚೆ ಯಾಗುತ್ತಿದೆ. ಹೀಗೊಂದು ಚುನಾವಣೆ ನಡೆಯುತ್ತದೆ ಎಂಬುದೇ ಎಷ್ಟೋ ಪದವೀಧರರಿಗೆ ತಿಳಿದಿರಲಿಲ್ಲ. ಈ ಬಾರಿ ರಾಜ್ಯ, ರಾಷ್ಟ್ರೀಯ ನಾಯಕರು ಬಂದು ಸಭೆ ನಡೆಸುವುದು, ಶಿಕ್ಷಣ ಸಂಸ್ಥೆ, ಖಾಸಗಿ ಸಂಸ್ಥೆಗಳಿಗೆ ಪ್ರಮುಖರು ಭೇಟಿ ನೀಡಿ ಮತಯಾಚನೆ ನಡೆದಿದೆ.

ಬಂಡಾಯ ಸದ್ದು
ಪಕ್ಷದ ಅಧಿಕೃತ ಅಭ್ಯರ್ಥಿಗಳು ಮಾತ್ರವೇ ಸ್ಪರ್ಧಾ ಕಣದಲ್ಲಿದ್ದಿದ್ದರೆ ಈ ಚುನಾವಣೆ ಇಷ್ಟೊಂದು ಸದ್ದಾಗುತ್ತಿರಲಿಲ್ಲ. ಕಳೆದ ಬಾರಿಯಂತೆ ಸಾಮಾನ್ಯ ಚುನಾವಣ ಪ್ರಕ್ರಿಯೆಯಾಗಿ ಮುಗಿದು ಹೋಗುತಿತ್ತು. ಆದರೆ ಎರಡು ರಾಷ್ಟ್ರೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಗೆ ಸೆಡ್ಡು ಹೊಡೆಯಲು ಎರಡೂ ಪಕ್ಷದಿಂದಲೂ ಒಬ್ಬೊಬ್ಬರು ಬಂಡಾಯದ ಧ್ವಜ ಹಾರಿಸಿದ್ದಾರೆ. ಅಷ್ಟು ಮಾತ್ರವಲ್ಲ ರಾಷ್ಟ್ರೀಯ ಪಕ್ಷಗಳಷ್ಟೇ ವ್ಯಾಪಕವಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಇನ್ನು ಕೆಲವು ಮಂದಿ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದು, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಮತಶಿಕಾರಿ ನಡೆಸಿದ್ದಾರೆ.

ಇದು ನಾಲ್ವರ ನಡುವಿನ ಸ್ಪರ್ಧೆ
ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ಆಯನೂರು ಮಂಜುನಾಥ್‌. ಅದೇ ಪಕ್ಷದಲ್ಲಿ ದಶಕಗಳಿಂದ ಇದ್ದು ಈ ಹಿಂದೆ ಪರಿಷತ್‌ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದ ಎಸ್‌.ಪಿ. ದಿನೇಶ್‌ ಟಿಕೆಟ್‌ ಸಿಗದೆ ಬಂಡಾಯ ನಿಂತಿದ್ದಾರೆ. ಬಿಜೆಪಿ ಅಧಿಕೃತ ಅಭ್ಯರ್ಥಿ ಡಾ| ಧನಂಜಯ ಸರ್ಜಿ. ಅದೇ ಪಕ್ಷ ಮಾಜಿ ಶಾಸಕರಾದ ಕೆ. ರಘಪತಿ ಭಟ್‌ ಟಿಕೆಟ್‌ಗಾಗಿ ಪ್ರಯತ್ನಿಸಿ ಕೊನೆಗೆ ಬಂಡಾಯದ ಪ್ರತಿಸ್ಪರ್ಧಿಯಾಗಿ ಕಣದಲ್ಲಿದ್ದಾರೆ. ಬಂಡಾಯದ ಮೂಲಕ ಒಬ್ಬರು ಕರಾವಳಿಯಲ್ಲಿ ಹೆಚ್ಚು ಸದ್ದು ಮಾಡಿದರೆ, ಇನ್ನೊಬರು ಮಲೆನಾಡು ಭಾಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಈ ಮಧ್ಯೆ ಪಕ್ಷದ ಅಧಿಕೃತ ಅಭ್ಯರ್ಥಿಗಳಿಬ್ಬರು ಪಕ್ಷದ ಸಂಘಟನೆಯ ನೆಲೆಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ನಿರಂತರ ಸಭೆ
ರಾಜ್ಯ ನಾಯಕರು, ರಾಷ್ಟ್ರಮಟ್ಟದ ನಾಯಕರು ಜಿಲ್ಲೆ ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸುವುದು, ಅನಂತರ ನಿರಂತರ ಜಿಲ್ಲಾ ನಾಯಕರು, ಜನ ಪ್ರತಿನಿಧಿಗಳು ಅಲ್ಲಲ್ಲಿ ಸಭೆ ಮಾಡುವುದು ಮೇಲಿಂದ ಮೇಲೆ ಸಂಸ್ಥೆಗಳಿಗೆ ಭೇಟಿ ನೀಡುವುದು. ಮತದಾರರಿಗೆ ಪದೇಪದೆ ದೂರವಾಣಿ ಕರೆ ಮಾಡುವುದು, ಅವರ ಮನೆಗಳಿಗೆ ಭೇಟಿ ನೀಡುವುದು ಹೀಗೆ ಪರಿಷತ್‌ ಚುನಾವಣೆಯಲ್ಲಿ ಇಷ್ಟೊಂದು ಸಭೆ ನಡೆದಿರುವುದು ನಾವ್ಯಾರು ಈವರೆಗೂ ನೋಡಿರಲಿಲ್ಲ ಎನ್ನುತಾರೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರು.

ಹಿಂದೆಲ್ಲ ಅಭ್ಯರ್ಥಿಗಳು ಜಿಲ್ಲೆಗೆ ಒಮ್ಮೆ ಆಗಮಿಸಿ ಪತ್ರಿಕಾಗೋಷ್ಠಿ ನಡೆಸಿ, ಜಿಲ್ಲಾ ಕಚೇರಿಗೆ ಭೇಟಿ ನೀಡಿ ವಾಪಸ್‌ ಆಗುತ್ತಿದ್ದರು. ಆದರೆ ಈ ಬಾರಿ ಅಭ್ಯರ್ಥಿಗಳೇ ನಿರಂತರ ಪ್ರಚಾರ ನಡೆಸಿದ್ದಾರೆ. ಅನಂತರ ಅವ‌ರ ಪರವಾಗಿ ಸಾಲುಸಾಲು ಪತ್ರಿಕಾಗೋಷ್ಠಿಗಳು ನಡೆದಿವೆ. ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಈ ಬಾರಿ ಬಳಸಲಾಗಿದೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.