ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ
Team Udayavani, May 1, 2020, 5:39 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಸಾರ್ವಜನಿಕ ವಿತರಣಾ ಪದ್ಧತಿಯಡಿಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಆಹಾರ ಧಾನ್ಯವನ್ನು ಮೇ 2020ರ ಪಡಿತರ ಚೀಟಿದಾರರಿಗೆ ಈ ಕೆಳಗಿನಂತೆ ವಿತರಿಸಲಾಗುವುದು.
1) ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತ.
2) ಪಿಎಚ್‌ಎಚ್ (ಬಿಪಿಎಲ್) ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಮತ್ತು ಎಪ್ರಿಲ್ ತಿಂಗಳಿನಲ್ಲಿ ವಿತರಿಸ ಬೇಕಾಗಿದ್ದ ಗೋಧಿಯನ್ನು ಮೇ ತಿಂಗಳಿನಲ್ಲಿ ಪ್ರತಿ ಕಾರ್ಡಿಗೆ 4 ಕೆಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು.
3) ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್‌ಪಿಎಚ್‌ಎಚ್ (ಎಪಿಎಲ್) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿಗೆ 15 ರೂ.ನಂತೆ ವಿತರಿಸಲಾಗುವುದು.
4) ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಎಚ್‌ಎಚ್ (ಬಿಪಿಎಲ್) ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸ ಲಾಗುವುದು.
5) ಅಂತಾರಾಜ್ಯ/ ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟೆ ಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು ಜಿಲ್ಲೆಯಯಾವುದೇ ನ್ಯಾಯಬೆಲೆ ಅಂಗಡಿ ಯಿಂದ ಪಡೆದುಕೊಳ್ಳಬಹುದಾಗಿದೆ.
ಬಯೋಮೆಟ್ರಿಕ್/ಒಟಿಪಿ
ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್ ದೃಢೀಕೃತ ಬೆರಳಚ್ಚು (ಆಧಾರ್ ಬಯೋಮೆಟ್ರಿಕ್)/ಆಧಾರ್ ಒಟಿಪಿ/ಮೊಬೈಲ್ ಒಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು.
ಏಕಕಾಲದಲ್ಲಿ ವಿತರಣೆ
ಪಡಿತರ ಚೀಟಿದಾರರಿಗೆ ಎಲ್ಲ ಆಹಾರಧಾನ್ಯಗಳನ್ನು ಏಕಕಾಲದಲ್ಲಿ ವಿತರಿಸಬೇಕಾಗಿರುವುದರಿಂದ ತೊಗರಿಬೇಳೆ ಪೂರ್ಣ ಪ್ರಮಾಣದಲ್ಲಿ ಸರಬರಾಜು ಆದ ಕೂಡಲೇ ಮೇ ಮೊದಲ ವಾರದ ಕೊನೆಯಲ್ಲಿ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಪಡಿತರ ಚೀಟಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ಹಾಕಿಕೊಂಡು ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.