ಆ.4ರಂದು ಬ್ರಹ್ಮಾವರದಲ್ಲಿ ಪಾಲೆತ್ತಾಡಿಗೆ ವಡ್ಡರ್ಸೆ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
Team Udayavani, Jul 29, 2019, 6:35 PM IST
ಉಡುಪಿ:ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಮುಂಬೈಯಲ್ಲಿ ಜನಪ್ರಿಯವಾಗಿರುವ ಕರ್ನಾಟಕ ಮಲ್ಲ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಅವರನ್ನು ಈ ವರ್ಷ ಆಯ್ಕೆ ಮಾಡಿದ್ದು, ಆಗಸ್ಟ್ 4ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮಧ್ಯಾಹ್ನ 2ರಿಂದ ಮಾಧ್ಯಮ ಸಂವಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಸಕ್ತ ಕಾಲಘಟ್ಟದಲ್ಲಿ ಪತ್ರಿಕೋದ್ಯಮ ಸಂವಾದ ಗೋಷ್ಠಿಯ ಅಧ್ಯಕ್ಷತೆಯನ್ನು ಮಾಜಿ ಕೆ.ಜಯಪ್ರಕಾಶ್ ಹೆಗ್ಡೆ ವಹಿಸಲಿದ್ದು, ಸಂವಾದದಲ್ಲಿ ಹಿರಿಯ ರಾಜಕಾರಣಿ ಬಿಎಲ್ ಶಂಕರ್, ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗವಹಿಸಲಿದ್ದಾರೆ.
ಅಪರಾಹ್ನ 4.30ಕ್ಕೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಸಾಮಾಜಿಕ ಹೋರಾಟಗಾರ ರವೀಂದ್ರನಾಥ ಶ್ಯಾನುಭಾಗ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರ ಪಂಜು ಗಂಗೊಳ್ಳಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ರಘುಪತಿ ಭಟ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 6ಗಂಟೆಯಿಂದ ಯಕ್ಷಗಾನ ನಾಟ್ಯ ವೈಭವ , ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.