ಉದಯವಾಣಿ ಕಚೇರಿಗೆ ಖ್ಯಾತ ಚಿತ್ರಸಾಹಿತಿ ವಿ.ನಾಗೇಂದ್ರ ಪ್ರಸಾದ್ ಭೇಟಿ
ಇಂದು ಸಿನಿಮಾ, ಪತ್ರಿಕೋದ್ಯಮ ಸೇರಿದಂತೆ ಎಲ್ಲವೂ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುತ್ತಿದೆ.
Team Udayavani, Feb 28, 2021, 5:06 PM IST
ಮಣಿಪಾಲ: ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ಸಾಹಿತಿ, ಕವಿರತ್ನ ವಿ.ನಾಗೇಂದ್ರ ಪ್ರಸಾದ್ ಅವರು ರವಿವಾರ (ಫೆ.28, 2021) ಉದಯವಾಣಿ ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಅವರೊಂದಿಗೆ ಉದಯವಾಣಿ ಬಳಗ ಮಾತುಕತೆ ನಡೆಸಿತು.
ಉದಯವಾಣಿ ಕಚೇರಿಗೆ ಭೇಟಿ ನೀಡಿದ್ದ ವಿ.ನಾಗೇಂದ್ರ ಪ್ರಸಾದ್ ಅವರಿಗೆ ಸಂಸ್ಥೆ ವತಿಯಿಂದ ಹೂ ಗುಚ್ಛ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉದಯವಾಣಿ ಪತ್ರಿಕೆ ಬಗ್ಗೆ ಮೊದಲಿನಿಂದಲೂ ಅಭಿಮಾನ. ನನ್ನ ಕವನ, ಲೇಖನಗಳು ಮೊದಲು ಪ್ರಕಟವಾಗುತ್ತಿದ್ದದ್ದು ಉದಯವಾಣಿಯಲ್ಲಿಯೇ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು.
ಆರಂಭದಲ್ಲಿ ಬರೆಯುತ್ತಿದ್ದ ಸಂದರ್ಭದಲ್ಲಿ ನಮ್ಮ ಲೇಖನ, ಕವನ ಉದಯವಾಣಿಯಲ್ಲಿ ಪ್ರಕಟವಾದರೆ ಅದು ತಮಗೆ ಅಧಿಕೃತವಾಗಿ ಸರ್ಟಿಫಿಕೇಟ್ ಸಿಕ್ಕಂತೆ ಆಗುತ್ತಿತ್ತು. ಅದಕ್ಕಾಗಿಯೇ ನಾವು ಉದಯವಾಣಿಯಲ್ಲಿ ಲೇಖನ, ಕವನ ಪ್ರಕಟವಾಗಲಿ ಎಂದು ಕಾಯುತ್ತಿದ್ದೆವು ಎಂಬುದಾಗಿ ನಾಗೇಂದ್ರ ಪ್ರಸಾದ್ ಅವರು ಉದಯವಾಣಿ ಬಗ್ಗೆ ಅಭಿಮಾನದ ನುಡಿಗಳನ್ನಾಡಿದರು.
ಇಂದು ಸಿನಿಮಾ, ಪತ್ರಿಕೋದ್ಯಮ ಸೇರಿದಂತೆ ಎಲ್ಲವೂ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುತ್ತಿದೆ. ಈ ಮೊದಲು ನಾವು ವಿಳಾಸ ಹುಡುಕಿ ಪತ್ರ ಬರೆಯಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ ಒಂದು ಕ್ಷಣದಲ್ಲಿ ಯಾರು, ಎಲ್ಲಿದ್ದರೂ ಕೂಡಾ ಗೂಗಲ್ ಮೀಟ್, ಝೂಮ್ ಮೂಲಕ ಸಂಪರ್ಕಿಸಬಹುದಾಗಿದೆ. ಅದೇ ರೀತಿಯಲ್ಲಿ ಉದಯವಾಣಿ ಡಿಜಿಟಲ್ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಉದಯವಾಣಿ ಪತ್ರಿಕಾ ಕಚೇರಿಗೆ ಭೇಟಿ ನೀಡಿದ್ದ ವಿ.ನಾಗೇಂದ್ರ ಪ್ರಸಾದ್ ಅವರು ಕುಳಿತಲ್ಲಿಯೇ ಉದಯವಾಣಿ ಬಗ್ಗೆ ಚುಟುಕು ಕವನ ಬರೆಯುವ ಮೂಲಕ ತಮ್ಮ ಅಭಿಮಾನವನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.