ಗುಡುಗು-ಸಿಡಿಲಿನ ಅಪಾಯ ಮುನ್ನೆಚ್ಚರಿಕೆ ಪಾಲನೆಗೆ ಸೂಚನೆ
Team Udayavani, May 23, 2023, 12:52 PM IST
ಮಂಗಳೂರು: ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿದ್ದು, ಸಂಭಾವ್ಯ ಅಪಾಯಗಳನ್ನು ಎದುರಿಸುವ ನಿಟ್ಟಿನಲ್ಲಿ ಇಲಾಖೆಗಳು ಹಾಗೂ ಸಾರ್ವಜನಿಕರು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ ಹೊರಡಿಸಿರುವ ಸಲಹೆ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತಕ್ಕೆ ಕಂದಾಯ ಇಲಾಖೆ ಸೂಚನೆ ನೀಡಿದೆ.
ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಹಾಗೂ ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ನೀಡಲಾಗುವ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ತಲುಪಿಸುವುದು ಹಾಗೂ ಈ ಬಗ್ಗೆ ಅರಿವು ಮೂಡಿಸುವವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆ ನೀಡಲು ಶಾಲಾ ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡಲು ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಸೂಚನೆ
ಹೊರಗೆ ಹೋಗುವ ಅನಿವಾರ್ಯ ಇದ್ದಲ್ಲಿ cಟಞಞಟn ಚlಛಿrಠಿಜಿnಜ ಟrಟಠಿಟcಟl (ಇಅಕ) ಮೂಲಕ ಬರುವ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಸಂದೇಶಗಳನ್ನು ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರು ಮೇಯಿಸಲು, ಮೀನುಗಾರಿಕೆ, ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭ ಲೋಹದ ತಗಡು ಹೊದೆಸಿರುವ ಮನೆಗಳು ಸುರಕ್ಷಿತವಲ್ಲ. ನೀರಿನ ಮೂಲಗಳಾದ ಕೆರೆ, ನದಿಗಳಿಂದ ದೂರವಿರುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.